ಬ್ರೇಕಿಂಗ್ ನ್ಯೂಸ್
21-06-22 02:29 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 21: ತೀವ್ರ ವಿವಾದಕ್ಕೆ ಕಾರಣವಾಗಿರುವ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧಿಸಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು ಪಠ್ಯವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
ಮರು ಪರಿಷ್ಕರಣೆಗೆ ನೇಮಿಸಿದ ಅಧ್ಯಕ್ಷರು ನಾಡಗೀತೆಗೆ ಅವಮಾನ ಮಾಡಿದ್ದಾರೆ. ಕುವೆಂಪು ಅವರಿಗೆ ಮಾಡಿದ ಅವಮಾನ ಮಾಡಿದ್ದಾರೆ. ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ. ಇಂಥಹ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು ಸರಿಯಲ್ಲ ಎಂದಿದ್ದಾರೆ.
ಪರಿಷ್ಕರಣೆಯಲ್ಲಿ ಅನೇಕ ತಪ್ಪು ಇವೆ. ಕುವೆಂಪು ಭಾವಚಿತ್ರ ಕೈ ಬಿಡಲಾಗಿದೆ. ಬಸವಣ್ಣನವರ ಆಶಯವುಳ್ಳ ಭಾಗವನ್ನು ಕೈ ಬಿಡಲಾಗಿದೆ. ಇಂಥಹ ಅನೇಕ ತಪ್ಪು ಮರು ಪರಿಷ್ಕರಣೆಯಲ್ಲಿ ಇವೆ. ಹಾಗಾಗಿ ಕೂಡಲೇ ಇದನ್ನು ಹಿಂಪಡೆಯಿರಿ. ಹಿಂದಿನ ಪಠ್ಯವನ್ನೇ ಮುಂದುವರೆಸಿರಿ ಎಂದು ದೇವೇಗೌಡ ಅವರು ಪತ್ರದ ಮೂಲಕ ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ.
ಗೌಡರ ಪತ್ರದಲ್ಲಿ ಏನೆಲ್ಲ ಇವೆ ?
ಪಠ್ಯಪುಸ್ತಕಗಳ ಮರು ಪರಿಷ್ಕರಣೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ 2022ರ ಜೂನ್ 18 ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿದ್ದೆ. ನನ್ನ ಮೂಲಕ ತಮಗೆ ಮನವರಿಕೆ ಮಾಡಲು ನೀಡಿದ ಮನವಿ ಪತ್ರವನ್ನು ಇದರೊಂದಿಗೆ ಲಗತ್ತಿಸಿರುತ್ತೇನೆ.
ಪಠ್ಯಪುಸ್ತಕಗಳ ಮರು ಪರಿಷ್ಕರಣೆಗೆ ನೇಮಿಸಿದ ಸಮಿತಿಯ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿರುತ್ತಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ನೀಡುತ್ತೇನೆಂದು ಹೇಳಿದ್ದು ಕೂಡ ಅವರಿಗೆ ಮಾಡಿದ ದೊಡ್ಡ ಅವಮಾನವೇ ಆಗಿದೆ. ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದು, ನಾಡಿನ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಜೊತೆಗೆ ಡಾ.ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ.
ಇಂಥ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು. ಇನ್ನು ಮರು ಪರಿಷ್ಕರಣೆಯಲ್ಲಿ ಮಾಡಿರುವ ತಪ್ಪುಗಳಂತೂ ಅಸಂಖ್ಯಾತ. ಸಮಾಜ ವಿಜ್ಞಾನ ಪಠ್ಯಪುಸ್ತಕದ ಏಕೀಕರಣ ಪಾಠದಿಂದ ಕುವೆಂಪು ಅವರ ಭಾವಚಿತ್ರವನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರ ಚಳವಳಿಯ ಆಶಯವುಳ್ಳ ಭಾಗಗಳನ್ನು ಕೈಬಿಡಲಾಗಿದೆ.
ಸಿದ್ಧಗಂಗೆ ಮತ್ತು ಆದಿಚುಂಚನಗಿರಿ ಶ್ರೀಗಳ ಸೇವೆಯ ವಿವರಗಳನ್ನು ತೆಗೆಯಲಾಗಿದೆ. ಅಂಬೇಡ್ಕರ್ ಅವರಿಗೆ 'ಸಂವಿಧಾನ ಶಿಲ್ಪಿ' ಎಂದಿದ್ದ ವಿಶೇಷಣವನ್ನು ತೆಗೆಯಲಾಗಿದೆ. ಅಕ್ಕ, ಕನಕ, ಪುರಂದರ, ಶರೀಫರಂತಹ ಮಹಾನ್ ದಾರ್ಶನಿಕ ಸಂತರ ಪಠ್ಯಗಳನ್ನೇ ತೆಗೆಯಲಾಗಿದೆ. ಕೆಂಪೇಗೌಡ, ಸುರಪುರ ನಾಯಕರ ವಿಷಯಗಳನ್ನು ಕಡಿತಗೊಳಿಸಲಾಗಿದೆ. ಡಾ.ಅಂಬೇಡ್ಕರ್ ಮತ್ತು ಕುವೆಂಪು ಅವರು ಸಾರಿದ ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ವಿಶ್ವಮಾನವತ್ವದ ಪರಿಕಲ್ಪನೆಗಳನ್ನು ಕಡೆಗಣಿಸಿರುವುದು ಪುನರ್ ಪರಿಷ್ಕರಣೆಯಲ್ಲಿ ಎದ್ದು ಕಾಣುತ್ತದೆ.
ಪಠ್ಯಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಪ್ರತ್ಯೇಕ ಪುಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪುನರ್ ಪರಿಷ್ಕರಣೆಯ ಪಠ್ಯಪುಸ್ತಕಗಳನ್ನು ವಾಪಸ್ ಪಡೆದು, ಹಿಂದೆ ಇದ್ದ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ 27 ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷ ಮುಂದುವರೆಸುವುದು ಸೂಕ್ತವೆಂದು ದೇವೇಗೌಡರು ಪತ್ರದ ಮೂಲಕ ಆಗ್ರಹಿಸಿದ್ದಾರೆ.
Karnataka text book controversy, HD Devegowda writes a letter to CM Basavarj bommai to roll back new text books as they were before.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm