ಬ್ರೇಕಿಂಗ್ ನ್ಯೂಸ್
22-06-22 08:16 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 22 : ಬೇರೆಯವರಯ ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ಮಾಡಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೋದಿ ಅವರು ಬೆಂಗಳೂರಿನಲ್ಲಿ ಚಾಲನೆ ಮಾಡಿದ ಯೋಜನೆಗಳು ಶುರುವಾಗಿದ್ದು ಬಿಜೆಪಿ ಸರಕಾರದಿಂದ ಅಲ್ಲ. ಆದರೆ, ತಾನೇ ಆರಂಭಿಸುತ್ತಿದ್ದೇನೆ ಎಂದವರು ಭಾಷಣ ಮಾಡಿದ್ದಾರೆ. ಇದು ನರೇಂದ್ರ ಮೋದಿ ಅವರ ಚಾಳಿ ಎಂದು ಹರಿಹಾಯ್ದರು.
ರಾಜ್ಯಕ್ಕೆ ಎರಡು ದಿನ ಪ್ರಧಾನ ಮಂತ್ರಿಗಳು ಬಂದಿದ್ದರು. ಅವರ ಆಗಮನದ ಹಿನ್ನೆಲೆಯಲ್ಲಿ ಪ್ರೊಗ್ರೆಸ್ ರಿಪೋರ್ಟ್ ಅನ್ನು ಕೊಡಲಾಗಿದೆ. 33 ಸಾವಿರ ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಿದರು ಎಂದು ಹೇಳುತ್ತಿದ್ದಾರೆ. ಮೋದಿ ಅವರು ತಾವೇ ರೂಪಿಸಿದ ಹೊಸ ಯೋಜನೆಗಳಿಗೆ ಚಾಲನೆ ನೀಡಿದರೋ ಅಥವಾ ಹಿಂದಿನ ಸರಕಾರಗಳು ರೂಪಿಸಿದ್ದ ಯೋಜನೆಗಳಿಗೆ ಚಾಲನೆ ನೀಡಿದರೋ ಎಂಬುದನ್ನು ಬಿಜೆಪಿ ನಾಯಕರು ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದರು.
ಬೆಂಗಳೂರು ತಮ್ಮಿಂದಲೇ ಬೆಳಕು ಕಾಣುತ್ತಿದೆ ಇದೆ ಅನ್ನುವ ಹಾಗಿತ್ತು ಮೋದಿ ಅವರ ಭಾಷಣ. ಉಪನಗರ ರೈಲು ಬಗ್ಗೆ ಪ್ರಧಾನಿಗಳು ಮಾತನಾಡಿದ್ದಾರೆ. 2018ರಲ್ಲಿ ಅಧಿಕಾರಕ್ಕೆ ಬರುವವರೆಗೆ ಈ ಯೋಜನೆ ಧೂಳು ಹಿಡಿಯುತ್ತಿತ್ತು. ನಾನು 14 ತಿಂಗಳು ಸಿಎಂ ಆಗಿದ್ದಾಗ ರೇಲ್ವೆ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆ. ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರೂ ಸಹಕಾರ ನೀಡಿದ್ದರು.
23000 ಕೋಟಿ ರೂಪಾಯಿ ಮೊತ್ತದ ಯೋಜನೆಯನ್ನು ಸಿದ್ಧಪಡಿಸಿ, 2018ರಲ್ಲಿ ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ದೆಹಲಿಗೆ ಹೋಗಿದ್ದೆ. ತಕ್ಷಣ ಅಡಿಗಲ್ಲು ಹಾಕಿ ಎಂದು ನಾನು ಅಂದಿನ ರೇಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಮನವಿ ಮಾಡಿದೆ. ಆ ನಂತರ ಕೃಷ್ಣಾ ಕಚೇರಿಯಲ್ಲಿ ಅಂದಿನ ರೇಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನೇ ಆಹ್ವಾನಿಸಿ ಚರ್ಚೆ ಮಾಡಿದ್ದೆ. ಮಾಧ್ಯಮಗಳಲ್ಲೂ ಈ ವಿಷಯ ವರದಿಯಾಗಿದೆ ಎಂದು ಅವರು ಮಾಹಿತಿ ನೀಡಿದರು.
ಆಗ, ಲೋಕಸಭೆ ಚುನಾವಣೆಗೂ ಮುನ್ನ ಉಪನಗರ ರೈಲು ಯೋಜನೆಗೆ ಶಂಕುಸ್ಥಾಪನೆ ಮಾಡುತ್ತೇನೆ ಅಂದಿದ್ದೆ. 2019ರಲ್ಲಿಯೇ ಈ ಬಗ್ಗೆ ಖುದ್ದು ಮಾಧ್ಯಮಗಳ ಮುಂದೆ ಹೇಳಿದ್ದೂ ಇದೆ. ಆದರೆ ಬಿಜೆಪಿಯವರು ಬೇಕೆಂದೇ ಅಡಿಗಲ್ಲು ಹಾಕಲು ಒಪ್ಪಿಗೆ ನೀಡಲಿಲ್ಲ. ಅವರ ಬದಲು ಕಾಂಗ್ರೆಸ್ ಜತೆ ಸರಕಾರ ಮಾಡಿದೆ ಎನ್ನುವ ಸಿಟ್ಟು ಅವರಿಗಿತ್ತು. ಆನಂತರ ಆಪರೇಶನ್ ಕಮಲದ ಮೂಲಕ ನನ್ನ ನೇತೃತ್ವದ ಮೈತ್ರಿ ಸರಕಾರವನ್ನು ತೆಗೆದು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲಾಯಿತು. ಆಮೇಲೆ ಮೂರು ವರ್ಷ ಉಪನಗರ ರೈಲು ಯೋಜನೆಯನ್ನು ಬಾಕಿ ಇಟ್ಟರು ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.
ಆಗಲೇ ಕಾಲಮಿತಿಯಲ್ಲಿ ಉಪನಗರ ರೈಲು ಯೋಜನೆ ಮುಗಿಸಲು ನಾನು ಸಂಪುಟದ ಒಪ್ಪಿಗೆ ತೆಗೆದುಕೊಂಡಿದ್ದೆ. ಅದಕ್ಕೆ ಕೇಂದ್ರ ಸರಕಾರ 19 ಷರತ್ತುಗಳನ್ನು ವಿಧಿಸಿತ್ತು. ಆ ಷರತ್ತುಗಳನ್ನು ನನ್ನ ಸರ್ಕಾರ ಪೂರೈಸಿತ್ತು. ಆದರೆ, ಈಗ ಚುನಾವಣೆ ಬರುತ್ತಿದೆ ಎನ್ನುವ ಕಾರಣಕ್ಕೆ ಬಂದು ಯೋಜನೆಗೆ ಚಾಲನೆ ಕೊಟ್ಟಿದ್ದು ಕೇವಲ ಚುನಾವಣೆ ಗಿಮಿಕ್ ಅಷ್ಟೇ ಎಂದು ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು.
ನಲವತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಕೇವಲ ನಲವತ್ತು ತಿಂಗಳಲ್ಲಿ ಕಾರ್ಯಗತ ಮಾಡುತ್ತೇವೆ ಎಂದು ಪ್ರಧಾನಿ ಹೇಳಿದ್ದಾರೆ. ಈಗ ಇದು ಆರು ವರ್ಷದ ಕಾರ್ಯಕ್ರಮ ಆಗಿದೆ. ನಾನು ಸಿಎಂ ಆದಾಗ ಎಸ್ ಟಿ ಆರ್ ಆರ್ ಯೋಜನೆ ಕೈಗೊಂಡಿದ್ದೆ. ಹೀಗೆ ಅನೇಕ ಯೋಜನೆಗಳಿಗೆ ಚಾಲನೆ ನೀಡಿದೆ. ನಾನು ಚಾಲನೆ ಕೊಟ್ಟ ಹಲವಾರು ಯೋಜನೆಗಳಿಗೆ ಬಿಜೆಪಿಯವರು ಇವತ್ತು ಪ್ರಚಾರ ಮಾಡಿಕೊಂಡಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.
A day after PM Modi inaugurated several developmental works in Bengaluru, JD(S) Legislature Party Leader HD Kumaraswamy accused the BJP of taking credit for projects started by him. Kumaraswamy on Tuesday slammed the BJP and said that it was his government in 2018, which had prepared the Rs 23,000 Bengaluru Suburban Rail Project.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm