ಬ್ರೇಕಿಂಗ್ ನ್ಯೂಸ್
30-06-22 02:12 pm HK News Desk ಕರ್ನಾಟಕ
ಬೆಂಗಳೂರು, ಜೂ 30: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು ವಿಫಲವಾಗಿರುವ ಬಗ್ಗೆ ಹೈಕೋರ್ಟ್ ಹಲವು ದಿನಗಳಿಂದ ಅಧಿಕಾರಿಗಳಿಗೆ ಚಾಟಿ ಬೀಸುತ್ತಲೇ ಇದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಚಾರಣೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬಿಬಿಎಂಪಿ ಮುಖ್ಯ ಎಂಜಿನಿಯರ್ ಎಂ.ಲೋಕೇಶ್ ಹಾಜರಾಗಿದ್ದಾರೆ.
‘ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಏನಾದರೂ ಕಷ್ಟಗಳಿವೆಯೇ? ರಸ್ತೆ ಗುಂಡಿಗಳಿಂದ ಬೆಂಗಳೂರಿಗೆ ಕೆಟ್ಟ ಹೆಸರು ಬರುತ್ತಿದೆ. ಇದನ್ನು ಬಿಬಿಎಂಪಿ ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಪಿಎಂ ಬಂದಾಗ ಮಾಡಿದ ರಸ್ತೆಗಳು ಹಾಳಾಗಿರುವ ವರದಿಗಳಿವೆ’ ಎಂದು ಹೈಕೋರ್ಟ್ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದೆ.

ಹೈಕೋರ್ಟ್ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಮುಖ್ಯ ಆಯುಕ್ತರ ಪರ ವಕೀಲರಾದ ಶ್ರೀನಿಧಿ, ಪ್ರಧಾನಿ ಭೇಟಿ ವೇಳೆ ನಿರ್ಮಿಸಿದ್ದ ರಸ್ತೆಗಳು ಹಾಳಾಗಿಲ್ಲ. ಒಳಚರಂಡಿ ಸಮಸ್ಯೆಯಿಂದ ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಲಾಗಿದೆ. ಜಂಟಿ ಸಮೀಕ್ಷೆಯ ಪ್ರಕಾರ, 847.56 ಕಿಮೀ ರಸ್ತೆಯಲ್ಲಿರುವ ಗುಂಡಿಗಳನ್ನು ಸರಿಪಡಿಸಬೇಕಿದೆ. ಈ ಪೈಕಿ 576 ಕಿಮೀ ರಸ್ತೆ ಗುಂಡಿ ಮುಚ್ಚಲು ಟೆಂಡರ್ ಕರೆಯಲಾಗಿದೆ. 397 ಕಿಮೀ ರಸ್ತೆ ಗುಂಡಿ ರಿಪೇರಿಗೆ ಕಾರ್ಯಾದೇಶ ನೀಡಲಾಗಿದೆ. ಜುಲೈ 15ರಂದು ಟೆಂಡರ್ ತೆರೆಯಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನ ರಸ್ತೆಗಳು ಸರಿಯಾಗುವವರೆಗೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಗಿಸುವುದಿಲ್ಲ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿದರು.
Castigating officers of the Bruhat Bangalore Mahanagara Palike (BBMP) for delay in finalising contract to fill potholes based on mutually agreed rate, the High Court of Karnataka on Tuesday they would face a “harsh order” from the court if the issue is not settled by Thursday.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm