ಬ್ರೇಕಿಂಗ್ ನ್ಯೂಸ್
11-07-22 12:16 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 11: ಮುಂದಿನ ವಿಧಾನಸಭೆ ಚುನಾವಣೆ ವೇಳೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಅವರ ಕುಟುಂಬದ ಬಗ್ಗೆ ವೈಯಕ್ತಿಕ ಟೀಕೆ ಮಾಡದಂತೆ ಪಕ್ಷದ ರಾಜ್ಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ಇತ್ತೀಚೆಗಿನ ಉಪ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇರವಾಗಿ ಜೆಡಿಎಸ್ ನಾಯಕ ಕುಮಾರಸ್ವಾಮಿಯನ್ನೇ ಟಾರ್ಗೆಟ್ ಮಾಡಿದ್ದರು. ಇದೇ ಕಾರಣಕ್ಕೋ ಏನೋ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಮಾತಿನ ಛೂಬಾಣಕ್ಕೆ ನಿಯಂತ್ರಣ ಹೇರಲು ಸೂಚಿಸಿದೆ. ಆದರೆ, ಹೈಕಮಾಂಡ್ ಕಡೆಯ ಜೆಡಿಎಸ್ ಮೇಲಿನ ಪ್ರೀತಿ ರಾಜ್ಯ ನಾಯಕರಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ.
ಚುನಾವಣಾ ತಂತ್ರಗಾರಿಕೆ ಹಾಗೂ ಪಕ್ಷದ ಗೊಂದಲಗಳನ್ನು ನಿವಾರಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ರಾಜ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿ ಮಾತುಕತೆ ನಡೆಸಿದ್ದರು. ಸಭೆಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಮಾತುಕತೆ ನಡೆದಿದ್ದು, ದೇವೇಗೌಡ ಕುಟುಂಬದ ವಿರುದ್ಧ ತೀರಾ ವೈಯಕ್ತಿಕ ಟೀಕೆ ಮಾಡದಂತೆ ತಿಳಿಹೇಳಿದ್ದಾರೆ. ವೈಯಕ್ತಿಕ ಟೀಕೆಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಅನ್ನುವ ಕಿವಿಮಾತನ್ನು ಹೇಳಿದ್ದಾರೆ ಎನ್ನುವ ವಿಚಾರ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ದಕ್ಷಿಣ ಕರ್ನಾಟಕದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಕಾಂಗ್ರೆಸಿನಲ್ಲಿ ಗುರುತಿಸಲ್ಪಟ್ಟ ಒಕ್ಕಲಿಗ ನಾಯಕರು ಕೂಡ ದೇವೇಗೌಡರ ಬಗ್ಗೆ ಒಲವು ಹೊಂದಿದ್ದಾರೆ. ಅವರನ್ನು ನಿರಂತರವಾಗಿ ಟೀಕಿಸುವುದರಿಂದ ಒಕ್ಕಲಿಗ ಮತ ಬ್ಯಾಂಕ್ ಕಾಂಗ್ರೆಸ್ ವಿರುದ್ಧ ನಿಲ್ಲುವ ಸಾಧ್ಯತೆ ಇರುತ್ತದೆ. ಇದರಿಂದ ಪ್ರಮುಖವಾಗಿ ದಕ್ಷಿಣ ಕರ್ನಾಟಕದಲ್ಲಿ ಕಾಂಗ್ರೆಸ್ ಹಿಂದಿನ ಚುನಾವಣೆ ರೀತಿಯಲ್ಲೇ ಹಿನ್ನಡೆ ಅನುಭವಿಸಬಹುದು ಎಂದು ಹೈಕಮಾಂಡ್ ಕಡೆಯಿಂದ ರಾಜ್ಯಕ್ಕೆ ಕಳಿಸಿಕೊಟ್ಟಿರುವ ಸುನಿಲ್ ಕನಗೋಳ್ ಸೂಚನೆಯನ್ನು ರಾಹುಲ್ ಗಾಂಧಿ ರಾಜ್ಯ ನಾಯಕರಿಗೆ ರವಾನಿಸಿದ್ದಾರೆ ಎನ್ನಲಾಗುತ್ತಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 100ರಿಂದ 110 ಸ್ಥಾನ ಗೆಲ್ಲಬಹುದು ಎಂಬುದು ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ. ಈಗಿನ ಸನ್ನಿವೇಶದಲ್ಲಿ ಜೆಡಿಎಸ್ ಕನಿಷ್ಠ 25 ಸ್ಥಾನಗಳನ್ನು ಗೆಲ್ಲಬಹುದು ಅನ್ನುವ ಲೆಕ್ಕಾಚಾರ ಇದೆ. ಒಂದ್ವೇಳೆ ಕಾಂಗ್ರೆಸ್ ಪೂರ್ಣ ಬಹುಮತ ಗಳಿಸದಿದ್ದರೆ ಜೆಡಿಎಸ್ ಜೊತೆ ಸೇರಿ ಅಧಿಕಾರ ನಡೆಸಬಹುದು ಅನ್ನುವ ಲೆಕ್ಕಾಚಾರ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಇದೆ. ಹೀಗಾಗಿ ಜೆಡಿಎಸ್ ನಾಯಕರ ಬಗ್ಗೆ ಕಟು ಟೀಕೆ ಮಾಡುವ ಬದಲು ಬಿಜೆಪಿ ಸರಕಾರದ ಭ್ರಷ್ಟಾಚಾರ, ಬೆಲೆಯೇರಿಕೆ ವಿಚಾರದಲ್ಲಿ ಹೋರಾಟ ರೂಪಿಸಿಕೊಳ್ಳುವಂತೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾಗಿ ಪಕ್ಷದ ಮೂಲಗಳು ಮಾಹಿತಿ ನೀಡಿವೆ.
ಆದರೆ ರಾಹುಲ್ ಗಾಂಧಿ ಪ್ರಸ್ತಾಪಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಭೆಯಲ್ಲೇ ವಿರೋಧ ಸೂಚಿಸಿದ್ದಾರೆ ಎನ್ನುವ ಮಾಹಿತಿಗಳಿವೆ. ಬಿಜೆಪಿ ಮತ್ತು ಜೆಡಿಎಸ್ ಅನ್ನು ಸಮಾನ ಎದುರಾಳಿಗಳೆಂದು ಪರಿಗಣಿಸಿ ಹೋರಾಟ ರೂಪಿಸಿದರೆ ಮಾತ್ರ ಪಕ್ಷಕ್ಕೆ ಗೆಲುವು ಸಿಗಬಹುದು ಎನ್ನುವ ಮಾತನ್ನು ಹೇಳಿದ್ದಾರೆ. ಮಂಡ್ಯ, ಹಾಸನ, ರಾಮನಗರ, ಕೋಲಾರ, ತುಮಕೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೆಡಿಎಸ್ ಪ್ರಾಬಲ್ಯ ಇದ್ದು ಕಾಂಗ್ರೆಸಿಗೆ ಅಲ್ಲಿ ಅವಷ್ಟೇ ನೇರ ಎದುರಾಳಿ. ಜೆಡಿಎಸ್ ನಾಯಕರ ಬಗ್ಗೆ ಮೃದು ಧೋರಣೆ ತಳೆಯುವುದರಿಂದ ಅಲ್ಲಿ ಕಾಂಗ್ರೆಸ್ ಸ್ಥಾನಗಳನ್ನು ಪಡೆಯುವುದು ಕಷ್ಟ ಇದೆ. ಅಲ್ಲಿ ಸ್ಥಾನಗಳನ್ನು ಗೆದ್ದರೆ ಮಾತ್ರ ಕಾಂಗ್ರೆಸ್ ಮ್ಯಾಜಿಕ್ ಸಂಖ್ಯೆ ತಲುಪಬಹುದು ಎಂದು ಸಿದ್ದರಾಮಯ್ಯ, ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
Congress' top leadership told its state leaders not to make personal attacks on Janata Dal (S) top leaders during the run-up to next year's assembly polls in Karnataka, as the party is eyeing JD(S) help in the event of a hung verdict in elections.Congress leader Rahul Gandhi, who held a closed-door meeting with former Chief Minister Siddaramaiah and Congress state unit president D K Shivakumar recently to discuss next year's polls strategy, strictly told them to avoid attacking JD(S) leaders mainly former Prime Minister H D Deve Gowda and former Chief Minister H D Kumaraswamy, a senior leader in Congress told DH.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm