ಬ್ರೇಕಿಂಗ್ ನ್ಯೂಸ್
18-07-22 11:49 am HK News Desk ಕರ್ನಾಟಕ
ಹಾಸನ, ಜುಲೈ 18: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ಭೂಕುಸಿತ ಹಾಗೂ ರಸ್ತೆ ಕುಸಿತವಾದ ಪರಿಣಾಮ ಶಿರಾಡಿ ಘಾಟ್ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ಶುಕ್ರವಾರ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದರು. ಇದೀಗ ಮಳೆ ಕಡಿಮೆಯಾದ ಹಿನ್ನೆಲೆ ಲಘು ವಾಹನಗಳಿಗೆ ಶಿರಾಡಿ ಘಾಟ್ ರಸ್ತೆಯಲ್ಲಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.
ಶಿರಾಡಿ ಘಾಟ್ ರಸ್ತೆ ದಿಢೀರ್ ಬಂದ್ ಆಗಿದ್ದರಿಂದ ಪೊಲೀಸರು ವಾಹನಗಳನ್ನು ತಡೆದು ನಿಲ್ಲಿಸುತ್ತಿದ್ದರು ಇದರಿಂದಾಗಿ ಹಾಸನ ಹೊರವಲಯದ ಬೈಪಾಸ್ನಲ್ಲಿ ಸಾವಿರಾರು ಬೃಹತ್ ವಾಹನಗಳು ಕಿಲೋಮೀಟರ್ಗಟ್ಟಲೆ ನಿಂತಿವೆ. ಸರಿಯಾದ ಊಟ, ನೀರು, ಶೌಚಾಲಯ ವ್ಯವಸ್ಥೆ ಇಲ್ಲದೆ ಚಾಲಕರು ಹಾಗೂ ನಿರ್ವಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ರಸ್ತೆ ಬೆಂಗಳೂರು-ಹಾಸನ-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಅಲ್ಲದೇ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ತೆರಳುವವರು ಇದೇ ಮಾರ್ಗದಲ್ಲಿ ಸಂಚರಿಸಬೇಕಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದವು. ಆದರೆ ಶಿರಾಡಿ ಘಾಟ್ ರಸ್ತೆ ಬಂದ್ ಪರಿಣಾಮ ಬದಲಿ ಮಾರ್ಗದಲ್ಲಿ ಸಂಚರಿಸಲು ಪ್ರಯಾಸ ಪಡಬೇಕಾಗಿದೆ.

ಲಘು ವಾಹನಗಳಿಗೆ ಶಿರಾಡಿ ಘಾಟ್ ರಸ್ತೆಯಲ್ಲಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಬಹುದಾಗಿದೆ. ಇಂದು ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಡಿಸಿ ಆರ್.ಗಿರೀಶ್ ಶಿರಾಡಿ ಘಾಟ್ ಬಂದ್ ಮಾರ್ಗಸೂಚಿ ಬದಲಿಸಿ ಎರಡು ಕಡೆಯಿಂದ ಯಾವುದೇ ಸಮಸ್ಯೆ ಆಗದಂತೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಿ ಆದೇಶಿದ್ದಾರೆ. ಇದರಿಂದಾಗಿ ಲಘು ವಾಹನಗಳು ಓಡಾಡಲು ಅನುಕೂಲವಾಗಿದೆ. ಮತ್ತೊಂದೆಡೆ ಮಳೆ ಕಡಿಮೆಯಾಗಿದ್ದು ಭೂಕುಸಿತವಾಗಿರುವ ದೋಣಿಗಾಲ್ ಬಳಿ ರಸ್ತೆ ದುರಸ್ತಿ ಕಾರ್ಯ ಆರಂಭಿಸಿದ್ದಾರೆ. ಮರದ ಪೋಲ್ ಹಾಗೂ ಮಣ್ಣಿನ ಚೀಲಗಳನ್ನು ಬಳಸಿ ಮಣ್ಣು ಕುಸಿಯದಂತೆ ತಡೆಗೋಡೆ ನಿರ್ಮಿಸಲಾಗುತ್ತಿದೆ. ರಸ್ತೆ ದುರಸ್ತಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದುರಂತವೆಂದರೆ ಪ್ರತಿವರ್ಷ ಮಳೆಗಾಲದಲ್ಲಿ ಭೂಮಿ ಕುಸಿಯುತ್ತಿದ್ದರು ಇದುವರೆಗೂ ಶಾಶ್ವತ ಪರಿಹಾರ ರೂಪಿಸಲು ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಸರ್ಕಾರ ವಿಫಲವಾಗಿರುವುದು ಜನರು ಹಾಗೂ ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.
Hassan Deputy Commissioner R. Girish has issued an order suggesting alternative routes for light motor vehicles commuting between Bengaluru and Mangaluru as the Shiradi Ghat stretch of National Highway-75 has been closed for vehicles due to landslip at Donigal near Sakaleshpur.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm