ಬ್ರೇಕಿಂಗ್ ನ್ಯೂಸ್
02-10-20 03:01 pm Headline Karnataka News Network ಕರ್ನಾಟಕ
ಕಾಸರಗೋಡು, ಅ.2: ಕಳೆದ ಒಂದು ವಾರದಿಂದ ಕೊರೋನ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಅ.3ರಿಂದ ಅ.31ರ ತನಕ ಸೆಕ್ಷನ್ 144ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ನಿಷೇಧಾಜ್ಞೆಯನ್ವಯ ಐದಕ್ಕಿಂತ ಅಧಿಕ ಮಂದಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಅಕ್ಟೋಬರ್ 3 ರ ಬೆಳಗ್ಗೆ 9ರಿಂದ 31ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಆಯಾ ಜಿಲ್ಲೆಗಳ ಸ್ಥಿತಿ ಗತಿ ಮನಗಂಡು ನಿಯಂತ್ರಣಗಳಲ್ಲಿ ಸಡಿಲಿಕೆ ಬೇಕೆ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ವಿವಾಹ, ಮರಣ ನಂತರದ ಕಾರ್ಯಕ್ರಮ ಮೊದಲಾದವುಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಕೋವಿಡ್ ಮಾನದಂಡದಂತೆ ಈ ಕಾರ್ಯಕ್ರಮ ನಡೆಸಲು ಅನುಮತಿ ಸಿಗಲಿದೆ. ಜನರು ಸೇರುವ ಎಲ್ಲ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.
ಎರಡು ದಿನಗಳ ಹಿಂದೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರತಿಭಟನೆ ಸೇರಿದಂತೆ ಜನರು ಗುಂಪುಗೂಡುವ ಎಲ್ಲ ಕಾರ್ಯಕ್ರಮಗಳಿಗೂ ನಿರ್ಬಂಧ ಹೇರಲು ತೀರ್ಮಾನಿಸಲಾಗಿತ್ತು. ಅದರಂತೆ ಸರಕಾರ ಈ ಆದೇಶ ಹೊರಡಿಸಿದೆ.
ಕೇರಳದಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನಂಪ್ರತಿ ಎಂಟು ಸಾವಿರವನ್ನು ದಾಟುತ್ತಿದ್ದು, ಕಾಸರಗೋಡು ಜಿಲ್ಲೆಯಲ್ಲೂ 500ರ ಗಡಿಗೆ ತಲುಪಿದೆ. ಕಳೆದ 20 ದಿನಗಳಿಂದ ಅನಿಯಂತ್ರಿತವಾಗಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಲಾಕ್ ಡೌನ್ ಸಡಿಲಿಕೆಯನ್ನು ಮತ್ತೆ ಬಿಗಿ ಗೊಳಿಸಲು ಕೇರಳ ಸರಕಾರ ಈಗಾಗಲೇ ತೀರ್ಮಾ ನಿಸಿದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm