ಬ್ರೇಕಿಂಗ್ ನ್ಯೂಸ್
02-08-22 11:26 am HK News Desk ಕರ್ನಾಟಕ
ಕಾರವಾರ, ಆಗಸ್ಟ್ 2: ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲ್ಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಮನೆ ಮೇಲೆ ಗುಡ್ಡ ಕುಸಿದಿದೆ. ಮನೆಯಲ್ಲಿದ್ದ ನಾಲ್ವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ ಆದರೆ ಈವರೆಗೆ ಅವರ ಸ್ಥಿತಿಗತಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಅಗ್ನಿಶಾಮಕ ಮತ್ತು ತುರ್ತುಸೇವೆಗಳು, ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿದೆ. ಆದರೆ ಮಳೆನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ದುರಂತ ಸ್ಥಳ ತಲುಪಲು ಈವರೆಗೆ ಸಾಧ್ಯವಾಗಿಲ್ಲ. ಸ್ಥಳೀಯ ಗ್ರಾಮ ಪಂಚಾಯಿತಿಯು ಸ್ಥಳಕ್ಕೆ ಜೆಸಿಬಿ ಕಳಿಸಲು ಯತ್ನಿಸುತ್ತಿದೆ. ಆದರೆ ರಸ್ತೆ ಹಾಳಾಗಿರುವುದರಿಂದ ಅದೂ ಸಾಧ್ಯವಾಗಿಲ್ಲ. ಮನೆಯ ಮೇಲೆ ಕುಸಿದಿರುವ ಮಣ್ಣು ತೆರವುಗೊಳಿಸಿ, ಸಿಲುಕಿರುವವರನ್ನು ಕಾಪಾಡಲು ಅಕ್ಕಪಕ್ಕದ ಜನರೂ ಶ್ರಮಿಸುತ್ತಿದ್ದಾರೆ.
ಮನೆಯ ಮೇಲೆ ಗುಡ್ಡ ಕುಸಿದಾಗ ಯಜಮಾನಿ ಲಕ್ಷ್ಮೀ ನಾರಾಯಣ ನಾಯ್ಕ (60), ಮಗಳು ಲಕ್ಷ್ಮೀ ನಾರಾಯಣ ನಾಯ್ಕ (45), ಮಗ ಅನಂತ ನಾರಾಯಣ ನಾಯ್ಕ (38), ಹಾಡುವಳ್ಳಿ ಬಡಬಾಗಿಲಿನ ತಂಗಿಮಗ ಪ್ರವೀಣ್ ರಾಮಕೃಷ್ಣ ನಾಯ್ಕ (16) ಇದ್ದರು ಎಂದು ಸ್ಥಳೀಯರು ಹೇಳಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್, ಗುಡ್ಡ ಕುಸಿದು ನಾಲ್ವರು ಮೃತಪಟ್ಟಿರುವ ಸಾಧ್ಯತೆ ಇದೆ. ಅಧಿಕೃತವಾಗಿ ಇನ್ನೂ ನಮಗೆ ಮಾಹಿತಿ ಸಿಕ್ಕಿಲ್ಲ. ಜಿಲ್ಲೆಯ ವಿವಿಧೆಡೆ ಸಂತ್ರಸ್ತರನ್ನು ಕಾಪಾಡುವ, ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ’ ಎಂದು ಹೇಳಿದರು.
ಉಪವಿಭಾಗಾಧಿಕಾರಿ ಮಮತಾ ದೇವಿ ಮಾತನಾಡಿ, ‘ಮಳೆ ಪ್ರಮಾಣ ಬೆಳಿಗ್ಗೆಗೆ ಹೋಲಿಸಿದರೆ ಕಡಿಮೆಯಾಗಿದೆ. ರಸ್ತೆಗಳು ಮುಳುಗಿರುವುದರಿಂದ ಮುಟ್ಟಳ್ಳಿ ತಲುಪಲು ರಕ್ಷಣಾ ತಂಡಗಳಿಗೆ ಈವರೆಗೆ ಸಾಧ್ಯವಾಗಿಲ್ಲ. ಬದಲಿ ಮಾರ್ಗದಿಂದ ಸ್ಥಳ ತಲುಪಲು ಇದೀದ ಪ್ರಯತ್ನ ಆರಂಭಿಸಲಾಗಿದೆ. ಕುಂದಾಪುರದಿಂದಲೂ ಅಗ್ನಿಶಾಮಕ ದಳದ ಸಿಬ್ಬಂದಿ ಬಂದಿದ್ದಾರೆ’ ಎಂದು ವಿವರಿಸಿದರು.
ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನಲ್ಲಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಸ್ಥಗಿತಗೊಂಡಿದೆ. ಶಿರಾಲಿ ಮತ್ತು ರಂಗಿನಕಟ್ಟೆ ಗ್ರಾಮಗಳು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿವೆ. ಬೈಂದೂರು ರಸ್ತೆ ಸಂಪೂರ್ಣ ಬಂದ್ ಆಗಿರುವುದರಿಂದ ಜನರು ಪರದಾಡುತ್ತಿದ್ದಾರೆ. ಕಾರವಾರ-ಭಟ್ಕಳ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡು ಕಿಲೊಮೀಟರ್ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿವೆ.
Due to heavy rain 🌧 in bhatkal pic.twitter.com/cG9impWWTb
— saifulla khateeb (@saiyyfu) August 2, 2022
Pray for coastal Karnataka, it is raining non-stop since yesterday evening.
— Syed Maqbool (@maqbool_sm) August 2, 2022
Historic flooding is reported from many areas.
IMD predicts heavy rain till August 6.#CoastalKarnataka
The video is from the Bhatkal. pic.twitter.com/VidkFxEGGO
Due to heavy rain 🌧 in bhatkal pic.twitter.com/cG9impWWTb
— saifulla khateeb (@saiyyfu) August 2, 2022
Pray for coastal Karnataka, it is raining non-stop since yesterday evening.
— Syed Maqbool (@maqbool_sm) August 2, 2022
Historic flooding is reported from many areas.
IMD predicts heavy rain till August 6.#CoastalKarnataka
The video is from the Bhatkal. pic.twitter.com/VidkFxEGGO
Heavy rain has been lashing Uttara Kannada district since the last 14 hours. A hill collapsed and slid on a house on Tuesday, August 2 morning at Muttalli in the taluk. Four people are feared dead.
23-04-25 08:04 pm
Bangalore Correspondent
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 09:23 pm
Mangalore Correspondent
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm