ಬ್ರೇಕಿಂಗ್ ನ್ಯೂಸ್
07-08-22 09:19 pm HK News Desk ಕರ್ನಾಟಕ
ಹಾಸನ, ಆಗಸ್ಟ್ 7 : ಗಾಳಿ, ಮಳೆಗೆ ಬೃಹತ್ ಮರವೊಂದು ಬೈಕ್ ಮೇಲೆ ಬಿದ್ದಿದ್ದು ಸವಾರ ಸಹಾಯಕ್ಕಾಗಿ ಅಂಗಲಾಚಿ ನರಳಿ ನರಳಿ ಪ್ರಾಣ ಬಿಟ್ಟ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಲ್ಲಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (45) ಎಂದು ಗುರುತಿಸಲಾಗಿದೆ. ಅವರು ಚನ್ನರಾಯಪಟ್ಟಣದಿಂದ ಬೈಕ್‍ನಲ್ಲಿ ಕಲ್ಲಸೋಮನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರ ರಂಗಶೆಟ್ಟಿ ಅವರ ಬೈಕಿನ ಮೇಲೆ ಬಿದ್ದಿದೆ. ಬೈಕ್ ಹಾಗೂ ಮರದ ನಡುವೆ ಸಿಲುಕಿದ ರಂಗಶೆಟ್ಟಿ ಅರ್ಧ ಗಂಟೆಗೂ ಹೆಚ್ಚು ಕಾಲ ನರಳಾಡಿ ರಕ್ಷಿಸುವಂತೆ ಅಂಗಲಾಚಿದ್ದಾರೆ.
ಸ್ಥಳೀಯರು ಮರ ದೊಡ್ಡದಿದ್ದರಿಂದ ನೆರವು ನೀಡುವುದಕ್ಕಾಗದೇ ಅಸಹಾಯಕರಾಗಿದ್ದಾರೆ. ಬಳಿಕ ಜೆಸಿಬಿ ತರಿಸಿ ಮರವನ್ನು ಎತ್ತಿ ರಂಗಶೆಟ್ಟಿ ಅವರನ್ನು ಹೊರಕ್ಕೆಳೆದರೂ ರಕ್ಷಿಸಲು ಮಾತ್ರ ಸಾಧ್ಯವಾಗಿಲ್ಲ. ಅದಾಗಲೇ ರಕ್ತ ಕಾರಿ ರಂಗ ಶೆಟ್ಟಿ ಗಂಭೀರ ಸ್ಥಿತಿಗೆ ಒಳಗಾಗಿದ್ದರು. ಸ್ಥಳಕ್ಕೆ ಆಸ್ಪತ್ರೆಯ ಸಿಬ್ಬಂದಿ ಬಂದು ಪ್ರಥಮ ಚಿಕಿತ್ಸೆ ನೀಡಿದರೂ ಫಲ ನೀಡಲಿಲ್ಲ.
ಎರಡು ಜೆಸಿಬಿ, ಹಿಟಾಚಿ ಯಂತ್ರ ಬಳಸಿ ಅಗ್ನಿಶಾಮಕದಳದ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hassan heavy wind rains, huge tree falls on Man who was on his bike, suffers and dies on spot. The deceased has been identified as Rangashetty (40). A shocking video of this has gone viral on social media.
23-04-25 08:04 pm
Bangalore Correspondent
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 09:23 pm
Mangalore Correspondent
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm