ಬ್ರೇಕಿಂಗ್ ನ್ಯೂಸ್
17-08-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು, ದೇವಾಲಯಗಳು, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಜರಾಯಿ ಇಲಾಖೆಯಿಂದ ಒಟ್ಟು 142.59 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಅವುಗಳಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ. 178 ಮಠಗಳಿಗೆ 108.24 ಕೋಟಿ ರೂ., 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿ, 26 ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್ಗಳಿಗೆ 13 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಆರ್ಥಿಕ ಇಲಾಖೆಯ ಸಹಮತದ ಮೇರೆಗೆ 148.59 ಕೋಟಿ ರೂಪಾಯಿ ಅನುದಾನಕ್ಕೆ ಸರ್ಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ಅನುದಾನ ಬಳಕೆಗೆ ಷರತ್ತು
ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಬಳಸಿಕೊಳ್ಳಲು ಇದೇ ಸಂದರ್ಭದಲ್ಲಿ ಷರತ್ತು ವಿಧಿಸಲಾಗಿದೆ. ಮಂಜೂರಾದ ಅನುದಾನವನ್ನು 'ಖಜಾನೆ-2' ಮೂಲಕ ಜಿಲ್ಲಾಧಿಕಾರಿಗಳ ಡಿಡಿಒಒ ಸಂಕೇತಕ್ಕೆ ಅಪ್ಲೋಡ್ ಮಾಡಬೇಕು. ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಮೂಲಕ ನಿಯಮಾನುಸಾರ ಪ್ರಸ್ತಾವನೆ ಪಡೆದು, ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಬೇಕು. ತಹಶೀಲ್ದಾರ್ ಅವರೇ ಅನುದಾನದ ಮೊತ್ತವನ್ನು ಡ್ರಾ ಮಾಡಿ ಸಂಸ್ಥೆಗಳಿಗೆ ಕೊಡಬೇಕು ಎಂಬ ನಿಯಮವನ್ನು ಹೇರಲಾಗಿದೆ.
ಅನುದಾನ ಪಡೆದುಕೊಂಡ ಸಂಸ್ಥೆಯು ನಿಯಮಾನುಸಾರ 'ಮುಂಗಡ ರಸೀದಿ' (Advance Receipt) ಪಡೆದು ಸಾದಿಲ್ವಾರು ಬಿಲ್ಗೆ ಲಗತ್ತಿಸಿ ಸಂಸ್ಥೆಯ ಹೆಸರಿಗೆ ಖಜಾನೆಯ ಚೆಕ್ ನೀಡಬೇಕು. ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು ಎಂದು ಮುಜರಾಯಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ.
Karnataka government releases funds for temples and trusts before election.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm