ಬ್ರೇಕಿಂಗ್ ನ್ಯೂಸ್
23-08-22 01:11 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 23 : ಕೊಡಗಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ಧಗೊಳಿಸುತ್ತಿದ್ದಂತೆ ಜಿಲ್ಲಾಡಳಿತ ಎಲರ್ಟ್ ಆಗಿದೆ. ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27ರ ವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಆ.24 ರ ಬೆಳಗ್ಗೆ 6 ಗಂಟೆಯಿಂದ 27ರ ಸಂಜೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಹೇರಲಾಗಿದೆ. ಸೆಕ್ಷನ್ ಇರುವುದರಿಂದ ಈ ಅವಧಿಯಲ್ಲಿ ಯಾವುದೇ ಸಭೆ, ಸಮಾರಂಭ, ಪ್ರತಿಭಟನೆ ನಡೆಸುವಂತಿಲ್ಲ. ಘೋಷಣೆ ಕೂಗುವಂತಿಲ್ಲ. ಹೆಚ್ಚು ಜನರು ಸೇರುವಂತಿಲ್ಲ, ವಿಜಯೋತ್ಸವ ಮಾಡುವಂತಿಲ್ಲ ಎಂದು ಕೊಡಗು ಜಿಲ್ಲಾಧಿಕಾರಿ ಬಿ.ಸಿ.ಸತೀಶ ಆದೇಶ ಮಾಡಿದ್ದಾರೆ.

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಆ.26 ರಂದು ಕಾಂಗ್ರೆಸ್ ಮಡಿಕೇರಿ ಚಲೋ ಹಮ್ಮಿಕೊಂಡಿದ್ದರೆ, ಅದೇ ದಿನ ಬಿಜೆಪಿಯಿಂದಲೂ ಜನಜಾಗೃತಿ ಸಮಾವೇಶ ಆಯೋಜಿಸಲಾಗಿತ್ತು. ಎರಡೂ ಕಡೆಯಿಂದಲೂ ಲಕ್ಷಕ್ಕೂ ಹೆಚ್ಚು ಜನ ಸೇರಿಸುವ ಬಗ್ಗೆ ನಾಯಕರು ಹೇಳಿಕೊಂಡಿದ್ದರು. ಕಾಂಗ್ರೆಸ್ ಆಸುಪಾಸಿನ ಜಿಲ್ಲೆಗಳಿಂದ ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಪ್ಲಾನ್ ಹಾಕಿತ್ತು. ಆಗಸ್ಟ್ 26ರಂದು ಎರಡು ರಾಷ್ಟ್ರೀಯ ಪಕ್ಷಗಳ ಶಕ್ತಿ ಪ್ರದರ್ಶನದ ಕಾರಣದಿಂದಾಗಿ ಮತ್ತೊಂದು ರಣರಂಗ ಆಗುವ ಎಲ್ಲ ಸಾಧ್ಯತೆಗಳಿದ್ದವು.
ಇದನ್ನು ಮನಗಂಡ ಜಿಲ್ಲಾಧಿಕಾರಿ, ಕೊಡಗು ಮತೀಯ ಸೂಕ್ಷ್ಮ ಪ್ರದೇಶವಾದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ, ಆ.24ರ ಬೆಳಗ್ಗೆ 6 ಗಂಟೆಯಿಂದ 27ರ ಮಧ್ಯರಾತ್ರಿ ವರೆಗೆ ಮದ್ಯ ಮಾರಾಟವನ್ನೂ ನಿಷೇಧ ಮಾಡಲಾಗಿದೆ.
Section 144 has been imposed in Karnataka's Kodagu district starting 6 am tomorrow (August 24) and will go on till 6 pm on August 27. The move comes ahead of a Congress protest in the area and also a BJP event named 'Jan Jagarti Sammelan', both of which will take place on August 26.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm