ಬ್ರೇಕಿಂಗ್ ನ್ಯೂಸ್
27-08-22 12:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ : ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಬಿಜೆಪಿ ಶಾಸಕ ವೀರಣ್ಣ ಸಿ.ಚರಂತಿಮಠ, ಬಿಜೆಪಿ ಮುಖಂಡ ಬಸವರಾಜ ಪಾಟೀಲ ಸೇಡಂ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ಡಾ.ಎಂ.ನಾಗರಾಜ್ ಅವರಿಗೂ ಬದಲಿ ನಿವೇಶನ ಹಂಚಿಕೆ ಮಾಡಿರುವುದು ಬೆಳಕಿಗೆ ಬಂದಿದೆ.
ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಕೆ.ಎಸ್.ಜಗದೀಶ ರೆಡ್ಡಿ ಅವರ ಸಂಬಂಧಿ ರಾಮ ರೆಡ್ಡಿ, ಗೀತಾ ರೆಡ್ಡಿ ಅವರಿಗೂ 40X60 ಅಡಿ ಅಳತೆಯ ಬದಲಿ ನಿವೇಶನ ಹಂಚಲಾಗಿದೆ. ಬೆಂಗಳೂರಿನಲ್ಲಿ ಪೆರಿಫೆರಲ್ ವರ್ತುಲ ರಸ್ತೆ ನಿರ್ಮಾಣದ ಕುರಿತ ವಿವಾದವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಯೋಜನೆಗೆ ಸಂಪನ್ಮೂಲವನ್ನು ಹೇಗೆ ಕ್ರೋಡೀಕರಣ ಮಾಡಲಾಗುತ್ತದೆ ಎಂದು ಪ್ರಾಧಿಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು. ನಿವೇಶನಗಳನ್ನು ಮಾರಾಟ ಮಾಡಿ ಸಂಪನ್ಮೂಲ ಕ್ರೋಡೀಕರಣ ಮಾಡಲಾಗುವುದು ಎಂದು ಬಿಡಿಎ ಉತ್ತರಿಸಿತ್ತು. ಈ ವೇಳೆ, ಮರು ಸ್ವಾಧೀನ ಪಡೆದಿರುವ ಅಥವಾ ಪೂರ್ಣ ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಸಾರ್ವಜನಿಕ ಹರಾಜಿನ ಮೂಲಕ ಮಾತ್ರ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ 2021ರ ಅಕ್ಟೋಬರ್ 29ರಂದು ಆದೇಶಿಸಿತ್ತು.
ಆದರೆ, ಕೋರ್ಟ್ ಆದೇಶ ಉಲ್ಲಂಘಿಸಿ ಪ್ರಸಕ್ತ ಸರಕಾರದಲ್ಲಿ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದ್ದ ಕಾರಣಕ್ಕೆ ಬಿಡಿಎ ಆಯುಕ್ತ ಎಂ.ಬಿ.ರಾಜೇಗೌಡ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡು ವರ್ಗಾವಣೆಗೆ ನಿರ್ದೇಶಿಸಿತ್ತು. 'ಜಿ ಕೆಟಗರಿ ನಿವೇಶನ ಹಂಚಿಕೆಯೇ ಅಕ್ರಮ. ಈ ಅಕ್ರಮದಲ್ಲಿ ಬಿಡಿಎ ಕಾರ್ಯದರ್ಶಿ, ಉಪ ಕಾರ್ಯದರ್ಶಿ ಭಾಗಿಯಾಗಿದ್ದಾರೆ ಎಂದೂ ನ್ಯಾಯಪೀಠ ಹೇಳಿತ್ತು.
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ಸಂಬಂಧಿ ಹಾಗೂ ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೂ ಆರ್ಎಂವಿ ಎರಡನೇ ಹಂತದಲ್ಲಿ ಬದಲಿ ನಿವೇಶನ ಹಂಚಿಕೆಗೆ ಕಡತ ಸಿದ್ಧವಾಗಿತ್ತು. ಈಗ ಸುಪ್ರೀಂ ಆದೇಶದಿಂದ ಇದಕ್ಕೆ ಕಡಿವಾಣ ಬಿದ್ದಿದೆ' ಎಂದು ಮೂಲಗಳು ತಿಳಿಸಿವೆ. ಕೆಂಪೇಗೌಡ ಬಡಾವಣೆ ಹಾಗೂ ಅರ್ಕಾವತಿ ಬಡಾವಣೆ ಬಿಟ್ಟು ಪೂರ್ಣ ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಹರಾಜಿನ ಮೂಲಕವೇ ನಿವೇಶನ ಹಂಚಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ. ಒಂದು ಪ್ರಕರಣದಲ್ಲಿ ಲೋಪ ಆಗಿದೆ. ಎಚ್ಎಸ್ಆರ್ ಬಡಾವಣೆಗಿಂತ ಮೂರು ತಿಂಗಳ ಮೊದಲು ಆರ್ಎಂವಿ ಬಡಾವಣೆ ನಿರ್ಮಾಣವಾಗಿತ್ತು. ಮುಂದೆ ಇಂತಹ ತಪ್ಪು ಘಟಿಸದಂತೆ ಎಚ್ಚರಿಕೆ ವಹಿಸಲು ಸೂಚಿಸಿದ್ದೇನೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.
Three people, including Home Minister Araga Jnanendra, who recently received alternative sites, have been asked to surrender them back to the Bangalore Development says Authority (BDA), Chairman
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm