ಬ್ರೇಕಿಂಗ್ ನ್ಯೂಸ್
27-08-22 04:43 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 27: ಮುರುಘಾ ಮಠದ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯದ ಬಗ್ಗೆ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂದು ಮೈಸೂರಿನ ಒಡನಾಡಿ ಸಂಸ್ಥೆ ಆಗ್ರಹ ಮಾಡಿದೆ.
ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶು ಮತ್ತು ಕೌನ್ಸಿಲರ್ ಸರಸ್ವತಿ ಹೇಳಿಕೆ ನೀಡಿದ್ದು ಪ್ರೌಢಶಾಲೆಯ ಮಕ್ಕಳನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿರುವ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಜುಲೈ 24 ರಂದು ಮಕ್ಕಳು ದೌರ್ಜನ್ಯದಿಂದ ಬೇಸತ್ತು ಬೆಂಗಳೂರಿನ ಮೆಜೆಸ್ಟಿಕ್ ಗೆ ಬಂದಿದ್ದರು. ಅಲ್ಲಿ ಬಹಳಷ್ಟು ಸಮಯ ಒಂದೇ ಕಡೆ ನಿಂತಿದ್ದರಿಂದ ಆಟೋ ಚಾಲಕರೊಬ್ಬರು ಅವರನ್ನು ವಿಚಾರಿಸಿ, ಸಮೀಪದ ಕಾಟನ್ ಪೇಟೆ ಪೊಲೀಸ್ ಸ್ಟೇಷನ್ ಗೆ ಕರೆದೊಯ್ದಿದ್ದಾರೆ. ಠಾಣೆಯಲ್ಲಿ ಮಕ್ಕಳು ಯಾರನ್ನು ಭೇಟಿ ಮಾಡಿದ್ರು ಅನ್ನೋ ಮಾಹಿತಿ ನಮಗಿಲ್ಲ. ಆದರೆ ಠಾಣೆಗೆ ಹೋಗಿರೋದು ನಿಜ. ಮಕ್ಕಳು ಭಯದ ಕಾರಣಕ್ಕೆ ತಮ್ಮ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಲ್ಲ.
ಸ್ವಾಮೀಜಿಯವರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ಮಾಡುತ್ತಾರೆ. ಕೆಟ್ಟದಾಗಿ ನಿಂದಿಸುತ್ತಾರೆ ಎಂದಷ್ಟೇ ಹೇಳಿದ್ದಾರೆ. ಠಾಣೆಯಲ್ಲಿ ಸತ್ಯ ಹೇಳಿದ್ರೆ ಸ್ವಾಮೀಜಿಯವರು ಪ್ರಭಾವಿಗಳು, ತೊಂದರೆ ಆಗಬಹುದು ಎಂಬ ಕಾರಣಕ್ಕೆ ಸತ್ಯ ಹೇಳಿಲ್ಲ. ಪೊಲೀಸರು ಸಂಯಮದಿಂದ ಅವರನ್ನು ವಿಚಾರಿಸಿದ್ದರೆ ಸತ್ಯಾಂಶ ಹೊರಬರುತ್ತಿತ್ತು. ಆದರೆ ಪೊಲೀಸರು ಅಪ್ರಾಪ್ತ ಹೆಣ್ಣು ಮಕ್ಕಳಿಂದ ಸರಿಯಾಗಿ ಮಾಹಿತಿ ಪಡೆಯದೆ ನಿರ್ಲಕ್ಷ್ಯ ಮಾಡಿದ್ದಾರೆ.
ಪೊಲೀಸರಿಂದ ನ್ಯಾಯ ಸಿಗುತ್ತೆ ಎಂಬ ಖಾತ್ರಿ ಇದ್ದಿದ್ದರೆ ಆ ಮಕ್ಕಳು ನಮ್ಮ ತನಕ ಬರುತ್ತಿರಲಿಲ್ಲ. ಹೀಗಾಗಿ ಆ ಮಕ್ಕಳು ಬೇರೊಬ್ಬರ ಸಹಾಯ ಪಡೆದು ನಮ್ಮ ಬಳಿ ಬಂದಿದ್ದಾರೆ. ನಾವು ಅವರ ಪರ ನಿಂತು ಎಫ್.ಐ.ಆರ್. ಮಾಡಿಸಿದ್ದೇವೆ. ಮಕ್ಕಳ ಮಾನಸಿಕ ಸ್ಥಿತಿ ಧೃಡವಾಗಿಯೇನೂ ಇಲ್ಲ. ತುಂಬಾ ಹೆದರಿಕೆಯಿಂದಲೇ ನಮ್ಮ ಬಳಿ ಆಗಿರುವ ಅನ್ಯಾಯದ ಬಗ್ಗೆ ಹೇಳಿಕೊಂಡಿದ್ದಾರೆ ಎಂದು ಕೌನ್ಸಿಲರ್ ಸರಸ್ವತಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
Murugha Matha Sri Shivamuruthy alleged of continuous Sexual harassment of hostel girls posco case filed in Chitradurga.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm