ಬ್ರೇಕಿಂಗ್ ನ್ಯೂಸ್
27-08-22 08:54 pm HK News Desk ಕರ್ನಾಟಕ
ಕಲಬುರ್ಗಿ, ಆಗಸ್ಟ್ 27 : ಅಕ್ರಮ ಪಿಎಸ್ಐ ನೇಮಕಾತಿ ಪ್ರಕರಣ ಸಂಬಂಧಿಸಿ ಒಎಂಆರ್ ಉತ್ತರ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿಸಿ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದ ರಚನಾ ಹನುಮಂತ (25) ಎಂಬವರನ್ನು ಸಿಐಡಿ ಅಧಿಕಾರಿಗಳು ಕಡೆಗೂ ಶನಿವಾರ ಬಂಧಿಸಿದ್ದಾರೆ.
ಕಳೆದ ಮೂರುವರೆ ತಿಂಗಳಿಂದ ಪೊಲೀಸರ ಕಣ್ಣುತಪ್ಪಿಸಿ ತಿರುಗಾಡುತ್ತಿದ್ದ ರಚನಾ ಒಂದೆಡೆ ನೆಲೆ ನಿಲ್ಲದೇ ಹಲವು ಕಡೆ ವಾಸ್ತವ್ಯ ಬದಲಾಯಿಸಿದ್ದರು. ಬೆಂಗಳೂರು, ಕಲಬುರಗಿ ಸಿಐಡಿ ಅಧಿಕಾರಿಗಳು ನಿರಂತರ ಹುಡುಕಾಟ ನಡೆಸಿದ್ದರು. ಮಹಾರಾಷ್ಟ್ರ ಗಡಿಯ ಆಳಂದ ತಾಲ್ಲೂಕಿನ ಹಿರೋಳ್ಳಿ ಚೆಕ್ಪೋಸ್ಟ್ ಬಳಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ಸಿಐಡಿ ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡವು ರಚನಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಶನಿವಾರ ನಗರದ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ದಸ್ತಗೀರಸಾಬ್ ಮುಲ್ಲಾ ಅವರ ಎದುರು ಆರೋಪಿಯನ್ನು ಹಾಜರುಪಡಿಸಲಾಯಿತು.
ರಚನಾ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದ್ದರಿಂದ ಟ್ರಾನ್ಸಿಟ್ ವಾರೆಂಟ್ ಪಡೆದ ಸಿಐಡಿ ಅಧಿಕಾರಿಗಳು ಶನಿವಾರ ಸಂಜೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ರಚನಾ ಪಿಎಸ್ಐ ಅಕ್ರಮದ ಆರೋಪ ಕೇಳಿಬಂದಾಗ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು. ತನ್ನ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ರಚನಾ ನಾಪತ್ತೆಯಾಗಿದ್ದರು.
CID police have arrested a top ranker in the rigged PSI recruitment examination. Sources said that Rachana who had secured the top spot in the women’s quota in the exam was arrested for alleged irregularities.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm