ಬ್ರೇಕಿಂಗ್ ನ್ಯೂಸ್
30-08-22 09:43 pm Bangalore Correspondent ಕರ್ನಾಟಕ
ಬೆಂಗಳೂರು, ಆ.30: ಮೈಸೂರು ಹೆದ್ದಾರಿ ಪ್ಲಾನ್ ಮಾಡಿರುವ ಇಂಜಿನಿಯರ್ಗಳಿಗೆ ಮುಖ್ಯಮಂತ್ರಿಗಳು ಪದ್ಮಭೂಷಣ ಅಥವಾ ಬೇರೆ ಪ್ರಶಸ್ತಿ ಕೊಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಮಾಡುವಾಗ ಎತ್ತರ ಪ್ರದೇಶದಲ್ಲಿ ನೀರು ಯಾವ ರೀತಿ ಹೋಗಬೇಕು ಎಂಬುದರ ಬಗ್ಗೆ ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಯೋಜನೆ ರೂಪಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಸ್ತೆಯ ಟೋಲ್ ಜಾಗ ಈಗ ಕೆರೆಯಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ವಿಚಾರದಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಸ್ತೆ ನಿರ್ಮಾಣ ಎಂದರೆ ಜಲ್ಲಿ, ಟಾರು ಅಥವಾ ಕಾಂಕ್ರೀಟ್ ಹಾಕಿ ಹಣ ಪಡೆಯುವುದಲ್ಲ. ಮಳೆ ಬಂದಾಗ ನೀರು ಹೇಗೆ ಹೋಗಬೇಕು, ಎಲ್ಲಿ ಕಾಲುವೆ ತೆಗೆಯಬೇಕು ಎಂದು ಯೋಜನೆ ರೂಪಿಸುವುದು ಸರ್ಕಾರ ಹಾಗೂ ಇಂಜಿನಿಯರ್ ಗಳ ಕರ್ತವ್ಯ ಎಂದರು.
ರಾಷ್ಟ್ರೀಯ ಹೆದ್ದಾರಿ ಸ್ಥಿತಿ ಹೀಗಾದರೆ ಹಳ್ಳಿ ರಸ್ತೆಗಳ ಪರಿಸ್ಥಿತಿ ಏನಾಗಬೇಕು. ಒಬ್ಬಿಬ್ಬರ ಪ್ರಾಣ ಹಾನಿಯಾಗಿರುವ ಮಾಹಿತಿ ಬಂದಿದ್ದು, ರಾಮನಗರ, ಚನ್ನಪಟ್ಟಣ, ಕನಕಪುರದ ಕೆಲವು ಭಾಗಗಳಿಗೆ ಹೋಗಿ ಪರಿಸ್ಥಿತಿ ಪರಿಶೀಲಿಸುತ್ತೇನೆ. ಅವರಿಗೆ ಧೈರ್ಯ ತುಂಬುತ್ತೇನೆ. ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ ಎಂದರು.
ಈ ಸಮಯದಲ್ಲಿ ಆಡಳಿತ ವ್ಯವಸ್ಥೆ ಚುರುಕಾಗಿ ಕೆಲಸ ಮಾಡಬೇಕು. ಒಂದು ವಾರ ಅಥವಾ 10 ದಿನಗಳಲ್ಲಿ ಪರಿಹಾರ ನೀಡುತ್ತೇನೆ ಎಂದು ಹೇಳುವುದಲ್ಲ. ತಕ್ಷಣ ಸ್ಥಳದಲ್ಲೇ ಚೆಕ್ ಮೂಲಕ ಪರಿಹಾರ ನೀಡಲು ಸಮಸ್ಯೆ ಏನು? ಹಾನಿಗೆ ಒಳಗಾದವರನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.
Bangalore mysore highway flooded with rainwater Dk shivkumar slams BJP government Says the engineers who constructed the highway should be given a padma bhushan award.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm