ಬ್ರೇಕಿಂಗ್ ನ್ಯೂಸ್
07-10-20 09:20 am Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಜ್ಯದಲ್ಲಿ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೆ ಕೊರೋನಾ ಸೋಂಕಿನ ಪರೀಕ್ಷೆ ಕಡ್ಡಾಯಗೊಳಿಸಲು ಆದೇಶಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಈ ಕುರಿತು ಆದೇಶ ಹೊರಡಿಸಲಾಗಿದ್ದು, ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಒಳಗಾದ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ಸೇರಿದಂತೆ ಲಕ್ಷಣವಿರುವ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ.

ಹೊಸ ಆದೇಶದಲ್ಲಿ ಯಾರೆಲ್ಲಾ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದ್ದು, ಉಸಿರಾಟ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವ ರೋಗಿಗಳು, ಕೊರೋನಾ ಚಿಕಿತ್ಸೆಯಲ್ಲಿ ತೊಡಗಿರುವ ಸಿಬ್ಬಂದಿ, ಆರೋಗ್ಯ ಸೇವಾ ಕ್ಷೇತ್ರದ ಕಾರ್ಯಕರ್ತರು, ಕಂಟೈನ್ ಮೆಂಟ್, ಬಫರ್ ವಲಯದಲ್ಲಿರುವ ವ್ಯಕ್ತಿಗಳು, ಆರೋಗ್ಯ ಸಿಬ್ಬಂದಿ ಗುರುತಿಸಲ್ಪಡುವ ಯಾವುದೇ ವ್ಯಕ್ತಿ ಅಥವಾ ಕೊರೋನಾ ಶಂಕಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ .
ಈ ಆದೇಶವನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ - 2020ರ 4ನೇ ವಿಧಿಯಡಿ ಹೊರಡಿಸಲಾಗಿದ್ದು, ಆದೇಶ ಜಾರಿಯ ಹೊಣೆಯನ್ನು ಜಿಲ್ಲಾಧಿಕಾರಿಗಳು ಅಥವಾ ಮುನಿಸಿಪಲ್ ಕಮಿಷನರ್ ಅವರಿಗೆ ವಹಿಸಲಾಗಿದೆ. ಈ ಸುಗ್ರೀವಾಜ್ಞೆ ಪ್ರಕಾರ, ಸರ್ಕಾರ ಸೂಚಿಸಿದರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳದವರಿಗೆ 50 ಸಾವಿರ ರು.ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸುವ ಅವಕಾಶವಿದೆ
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm