ಬ್ರೇಕಿಂಗ್ ನ್ಯೂಸ್
06-09-22 12:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.6: ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ರಣ ಮಳೆಯಾಗುತ್ತಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.
ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ ಖಾಸಗಿ ಖಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಕ್ಲರಿಕಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ತಂದೆ, ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿ ಶಾಲೆಯಿಂದ ಹೊರಟಿದ್ದು ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ ಬೇಕರಿ ಸಮೀಪ ಬಂದಿದ್ದಾರೆ.
ಈ ವೇಳೆ ಭಾರೀ ಮಳೆ ಸುರಿಯುತ್ತಿದ್ದ ಕಾರಣ ರಸ್ತೆಯಲ್ಲಿ ಮಂಡಿ ಮುಳುಗುವಷ್ಟು ನೀರು ನಿಂತಿತ್ತು. ಅಖಿಲಾ ನೀರಿನ ಮಧ್ಯೆಯೇ ಸ್ಕೂಟರ್ ಚಲಾಯಿಸಿಕೊಂಡು ಬಂದಿದ್ದು ನೀರು ಹೆಚ್ಚಿದ್ದರಿಂದ ಸ್ಕೂಟರ್ ಇದ್ದಕ್ಕಿದ್ದಂತೆ ಆಫ್ ಆಗಿದೆ. ಈ ವೇಳೆ ಆಯತಪ್ಪಿ ಕೆಳಗೆ ಬೀಳುತ್ತಿದ್ದಾಗ ಸಹಾಯಕ್ಕೆಂದು ಬಲ ಭಾಗದಲ್ಲಿದ್ದ ವಿದ್ಯುತ್ ಕಂಬ ಮುಟ್ಟಿದ್ದಾರೆ. ಮಳೆಯ ಕಾರಣದಿಂದ ಕಂಬದಲ್ಲಿ ವಿದ್ಯುತ್ ಹರಿದಿದ್ದು ಶಾಕ್ ಆಗಿ ಸಾವನ್ನಪ್ಪಿದ್ದಾರೆ.
ಕೆಳಗೆ ಬಿದ್ದ ಯುವತಿಯನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಅಖಿಲಾ ಕೊನೆಯುಸಿರೆಳೆದಿದ್ದಾರೆ. ನೀರು ಹೊರ ಹೋಗಲು ಸರಿಯಾದ ವ್ಯವಸ್ಥೆ ಮಾಡದೆ, ವಿದ್ಯುತ್ ಕಂಬಗಳ ನಿರ್ವಹಣೆಯನ್ನೂ ಮಾಡದಿರುವುದೇ ಅಖಿಲಾ ಸಾವಿಗೆ ನೇರ ಕಾರಣ ಎಂದು ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
As rains continue to wreak havoc on Karnataka's Bengaluru, a 23-year-old got electrocuted in the city's Whitefield area and died. As per reports, she was returning from work last night when her scooty lost balance on a severely waterlogged road.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm