ಬ್ರೇಕಿಂಗ್ ನ್ಯೂಸ್
08-09-22 03:56 pm HK News Desk ಕರ್ನಾಟಕ
ತುಮಕೂರು,ಸೆ.8: ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿಕೊಂಡು ಪಾಠ ಮಾಡುತ್ತಿದ್ದ ಲೇಡಿ ಟೀಚರ್ ಒಬ್ಬಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವಿಲಕ್ಷಣ ಘಟನೆ ತುಮಕೂರು ತಾಲೂಕಿನ ಚಿಕ್ಕಸಾರಂಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಕಳೆದ 25 ವರ್ಷಗಳಿಂದ ಈ ಶಾಲೆಯಲ್ಲಿ ಶಿಕ್ಷಕಿ ಗಂಗಲಕ್ಷ್ಮಮ್ಮ ಸೇವೆ ಸಲ್ಲಿಸುತ್ತಿದ್ದಾಳೆ. ಆದರೆ ಕಳೆದ 5 ವರ್ಷದಿಂದ ಮದ್ಯ ವ್ಯಸನಕ್ಕೆ ದಾಸಳಾಗಿದ್ದಳು.
ಮದ್ಯಪಾನ ಮಾಡಿ ಪಾಠ ಮಾಡಿ, ವಿದ್ಯಾರ್ಥಿಗಳಿಗೆ ಸುಖಾಸುಮ್ಮನೆ ಹೊಡೆಯುವುದು ಹಾಗೂ ಸಹೋದ್ಯೋಗಿಗಳ ಜೊತೆ ಜಗಳ ಮಾಡುತ್ತಿದ್ದಳು. ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯುಂಟಾಗಿತ್ತು. ಇದನ್ನು ಮನಗಂಡ ಪೋಷಕರು ಶಿಕ್ಷಕಿ ಗಂಗಲಕ್ಷ್ಮಮ್ಮಗೆ ತಪ್ಪು ತಿದ್ದಿಕೊಳ್ಳುವಂತೆ ತಾಕೀತು ಮಾಡಿದ್ದರು. ಆದರೆ ಗಂಗಲಕ್ಷ್ಮಮ್ಮ ತನ್ನ ಚಾಳಿ ಬದಲಿಸಲಿಲ್ಲ. ಇದರಿಂದ ಪೋಷಕರು ಶಾಲೆಗೆ ಬೀಗ ಹಾಕಿ ಶಿಕ್ಷಕಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು.

ಈ ವೇಳೆ ಸ್ಥಳಕ್ಕೆ ಬಿ.ಇ.ಒ ಹನುಮಾ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿಕ್ಷಕಿಯ ಟೇಬಲ್ನ ಡ್ರಾಯರ್ ಓಪನ್ ಮಾಡುವಂತೆ ಗ್ರಾಮಸ್ಥರು ಒತ್ತಾಯ ಮಾಡಿದರು. ಸ್ವತಃ ಬಿಇಒ ಡ್ರಾಯರ್ ಓಪನ್ ಮಾಡಲು ಹೋದಾಗ ಶಿಕ್ಷಕಿ ಪ್ರತಿರೋಧ ಒಡ್ಡಿದ್ದಾಳೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಟೇಬಲನ್ನು ಹೊರಕ್ಕೆ ತಂದು ಡ್ರಾಯರ್ ಬೀಗ ಮುರಿದಿದ್ದಾರೆ. ಆಗ ಡ್ರಾಯರ್ನಲ್ಲಿ ಒಂದು ಫುಲ್ ಮತ್ತು ಎರಡು ಖಾಲಿ ಮದ್ಯದ ಬಾಟಲ್ಗಳು ಪತ್ತೆಯಾಗಿದೆ.
ಮದ್ಯದ ಬಾಟಲ್ ಪತ್ತೆಯಾಗುತಿದ್ದಂತೆ ಕೊಠಡಿ ಬೀಗಹಾಕೊಂಡು ಗಂಗ ಲಕ್ಷ್ಮಮ್ಮ ಆತ್ಮಹತ್ಯೆ ಮಾಡಿಕೊಳ್ಳುವ ನಾಟಕ ಮಾಡಿದ್ದಾಳೆ. ಬಳಿಕ ಪೊಲೀಸರು ಬಂದು ಮದ್ಯದ ಬಾಟಲನ್ನು ವಶಕ್ಕೆ ಪಡೆದಿದ್ದಾರೆ. ಶಿಕ್ಷಕಿ ಗಂಗಲಕ್ಷ್ಮಮ್ಮಳನ್ನು ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ. ಒಟ್ಟಾರೆ ಚಿಕ್ಕಸಾರಂಗಿ ಶಾಲೆಯ ಮುಂದೆ ನಡೆದ ಹೈಡ್ರಾಮಾಕ್ಕೆ ಗ್ರಾಮಸ್ಥರು ಸಾಕ್ಷಿಯಾಗಿದ್ದಾರೆ.
Lady Teacher held for consuming alcohol and taking classes in Tumkur. It is said that she's been consuming alcohol for five years and attends school to teach.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm