ಬ್ರೇಕಿಂಗ್ ನ್ಯೂಸ್
14-09-22 12:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.13 : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಾದ್ಯಂತ ಸುರಿದ ಭಾರಿ ಮಳೆಯಿಂದಾಗಿ ಜನತೆ ಎದುರಿಸಿದ ಕಷ್ಟ ನಷ್ಟಗಳು ಹಾಗೂ ಜನರ ನೆರವಿಗೆ ಸಕಾಲದಲ್ಲಿ ಧಾವಿಸದ ಸರ್ಕಾರದ ವೈಫಲ್ಯಗಳ ಕುರಿತು ಗಮನಸೆಳೆದರು.
ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಜನರು ಕಷ್ಟ ನಷ್ಟಕ್ಕೆ ಈಡಾಗಿದ್ದಾರೆ. ಪ್ರವಾಹ ಪರಿಸ್ಥಿತಿ ಎದುರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳದ ಸರ್ಕಾರದ ಬೇಜವಾಬ್ದಾರಿ ಇಷ್ಟಕ್ಕೆಲ್ಲ ಕಾರಣ. ಈ ಹಿಂದೆ ಪ್ರವಾಹ ಬಂದಾಗಲೂ ನಾನು ಸರ್ಕಾರಕ್ಕೆ ಅನೇಕ ಸಲಹೆ ಸೂಚನೆಗಳನ್ನು ನೀಡಿದ್ದೆ, ಅದನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದರೆ ಪರಿಸ್ಥಿತಿ ಇಷ್ಟು ಹದಗೆಡುತ್ತಿರಲಿಲ್ಲ ಎಂದರು. ಅಲ್ಲದೆ, ಹವಾಮಾನ ತಜ್ಞರು ಮುಂದಿನ ದಿನಗಳಲ್ಲಿ ಹವಾಮಾನ ಬದಲಾವಣೆಯಿಂದ ರಾಜ್ಯ ಭೀಕರವಾದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂಬ ಮುನ್ನೆಚ್ಚರಿಕೆಯನ್ನು ಈ ಹಿಂದೆಯೇ ಕೊಟ್ಟಿದ್ದಾರೆ' ಎಂದು ಉಲ್ಲೇಖಿಸಿದರು.
ರಾಜಕಾಲುವೆಗಳ ಒತ್ತುವರಿ ಪ್ರವಾಹಕ್ಕೆ ಕಾರಣ
"ಬೆಂಗಳೂರಿನ ಅನೇಕ ಕಡೆಗಳಲ್ಲಿ ಪ್ರವಾಹ ವೀಕ್ಷಣೆಗೆ ಹೋದಾಗ ಜನ ತಮಗೆ ನ್ಯಾಯಯುತ ಪರಿಹಾರ ಕೊಡಿಸಿ ಎಂದು ನನ್ನಲ್ಲಿ ಮನವಿ ಮಾಡಿದ್ದಾರೆ. ಇಲ್ಲಿ ಮಳೆ ಬಂದಾಗ ಸಮಸ್ಯೆ ಉಂಟಾಗಲು ಮುಖ್ಯ ಕಾರಣ ರಾಜಕಾಲುವೆಗಳ ಒತ್ತುವರಿ ಮತ್ತು ಚಿಕ್ಕ ಗಾತ್ರದ ಕಾಲುವೆಗಳು ಇರುವುದು. ಸರ್ಕಾರ ಇವುಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಒತ್ತುವರಿ ತೆರವು ಮತ್ತು ಕಾಲುವೆಗಳ ಅಗಲೀಕರಣ ಮಾಡಬೇಕು" ಎಂದರು.
"ಒತ್ತುವರಿ ಮಾಡಿಕೊಂಡಿರುವ ಒತ್ತುವರಿದಾರರಿಗೆ ಕ್ರಯಕ್ಕೆ ಮನೆ ನೀಡುವ ಕಾನೂನನ್ನು ಸರ್ಕಾರ ಮಾಡಿದೆ. ಇದರಿಂದ ಅಕ್ರಮಕ್ಕೆ ಸರ್ಕಾರ ನೆರವು ನೀಡಿದಂತೆ ಆಗುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 1953 ಒತ್ತುವರಿ ಪ್ರಕರಣಗಳನ್ನು ಪತ್ತೆಮಾಡಿ, 1300 ಒತ್ತುವರಿಗಳನ್ನು ತೆರವು ಮಾಡಿದ್ದೆವು. ಉಳಿದ 653 ಒತ್ತುವರಿಗಳ ತೆರವು ಕಾರ್ಯ ಪೂರ್ಣಗೊಂಡಿದ್ದರೆ ಇಷ್ಟು ದೊಡ್ಡ ಪ್ರಮಾಣದ ಹಾನಿ ಆಗುತ್ತಿರಲಿಲ್ಲ. ಒಂದು ಕೆರೆಯಿಂದ ಮತ್ತೊಂದು ಕೆರೆಗೆ ಸಂಪರ್ಕ ಇಲ್ಲ, ಕೆರೆಗಳಲ್ಲಿ ಹೂಳು ತುಂಬಿಕೊಂಡಿದೆ. ಹೀಗಾಗಿ ಮಳೆ ಬಂದಾಗ ಸಮಸ್ಯೆ ಉಂಟಾಗುತ್ತದೆ ಎಂದರು ಸಿದ್ದರಾಮಯ್ಯ.
2007 ಕ್ಕೂ ಮೊದಲು ಬೆಂಗಳೂರು ನಗರದ ವ್ಯಾಪ್ತಿ 225 ಚ.ಕಿ.ಮೀ ಇತ್ತು, ನಂತರ 225 ಹಳ್ಳಿಗಳನ್ನು ಸೇರಿಸಿದ್ದರಿಂದ 800 ಚ.ಕಿ.ಮೀ ಆಯಿತು. ಇದರಿಂದ ಹೊಸದಾಗಿ ಸೇರಿದ ಹಳ್ಳಿಗಳಿಗೆ ಕುಡಿಯುವ ನೀರು, ಚರಂಡಿ, ರಾಜಕಾಲುವೆ ಯಾವು ಇಲ್ಲ. ಹೀಗಾಗಿ ಸಮಸ್ಯೆ ಉಂಟಾಗುತ್ತಿದೆ. ಬೆಂಗಳೂರು ನಗರದಲ್ಲಿ ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸುವಂತೆ ರಾಜ್ಯದ ಹೈಕೋರ್ಟ್ ಎಷ್ಟು ಬಾರಿ ಛೀಮಾರಿ ಹಾಕಿದೆ ಎಂಬುದನ್ನು ನಾನು ಬಿಡಿಸಿ ಹೇಳಲು ಹೋಗುವುದಿಲ್ಲ. ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು, ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿ ಮಾಡದೆ ಹೋದರೆ ನಗರದ ಮೆರುಗಿಗೆ ಧಕ್ಕೆಯಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
The Karnataka Legislative Assembly on Tuesday witnessed a banter regarding Leader of the Opposition Siddaramaiah's recent visit to a flood-hit locality in Bengaluru by a boat, as the ruling BJP members including Chief Minister Basavaraj Bommai alleged that the boat ride was in just 1.5 ft water on the roads.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 02:22 pm
Bangalore Correspondent
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm