ಬ್ರೇಕಿಂಗ್ ನ್ಯೂಸ್
18-10-22 07:05 pm HK News Desk ಕರ್ನಾಟಕ
ಬೀದರ್, ಅ.18 : ಸರ್ಕಾರಿ ನೌಕರಿಗೆ ಕರ್ನಾಟಕದಲ್ಲಿ ಕಾಸು ಕೊಡಲೇಬೇಕು ಎಂಬ ರಾಹುಲ್ ಗಾಂಧಿ ಟೀಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಆಗಿರುವ ಹಗರಣ ಮತ್ತು ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ, ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಮುಟ್ಟಿಸುತ್ತೇನೆ. ಅವರು ಏನು ಶಿಕ್ಷೆ ಕೊಡುತ್ತಾರೆ ಕಾದು ನೋಡೋಣ ಎಂದು ಸವಾಲು ಹಾಕಿದ್ದಾರೆ.
ಔರಾದ್ ಪಟ್ಟಣದಲ್ಲಿ ಮಂಗಳವಾರ 'ಜನಸಂಕಲ್ಪ ಯಾತ್ರೆ'ಗೆ ಚಾಲನೆ ನೀಡಿ ಮಾತನಾಡಿದ ಅವರು, 2016ರ ಶಿಕ್ಷಕರ ನೇಮಕಾತಿ ಹಗರಣ, ಪ್ರಾಸಿಕ್ಯೂಟರ್ ಮತ್ತು ಪೊಲೀಸ್ ನೇಮಕಾತಿಯಲ್ಲಿನ ಹಗರಣ ಸೇರಿ ಎಲ್ಲ ದಾಖಲೆಗಳನ್ನು ರಾಹುಲ್ ಗಾಂಧಿಗೆ ತಲುಪಿಸಲಿದ್ದೇನೆ. ಅರ್ಜಿ ಹಾಕದೇ ಶಿಕ್ಷಕರ ನೇಮಕಾತಿ ನಡೆದಿದ್ದು, ಇದರಲ್ಲಿ ಎಷ್ಟು ಪರ್ಸಂಟೇಜ್ ಹೊಡೆದಿರಬಹುದು? ಇದು ಕಾಂಗ್ರೆಸ್ ಸರ್ಕಾರದ ಆಡಳಿತ. ಆದರೆ, ನಾವು ಪಿಎಸ್ಐ ನೇಮಕಾತಿ ಹಗರಣದಲ್ಲಿ ಉನ್ನತ ಅಧಿಕಾರಿಗಳು ಸೇರಿ ತಪ್ಪು ಮಾಡಿದ್ದವರನ್ನು ಯಾರಿಗೂ ಬಿಡಲಿಲ್ಲ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಹೇಳಲು ರಾಹುಲ್ ಗಾಂಧಿಗೆ ಆತ್ಮಸಾಕ್ಷಿ ಬೇಕಲ್ಲವೇ ಎಂದು ಪ್ರಶ್ನಿಸಿದ ಸಿಎಂ ಬೊಮ್ಮಾಯಿ, ಮೀಸಲು ಹೆಚ್ಚಿಸಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾಗ ರಾಜ್ಯದಲ್ಲಿ ಯಾರ ಸರ್ಕಾರ ಇತ್ತು, ನಿರ್ಣಯ ತೆಗೆದುಕೊಂಡವರು ಯಾರು ಎನ್ನುವುದನ್ನೂ ರಾಹುಲ್ ಅರಿಯಬೇಕು. ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೀನ ದಲಿತರಿಗೆ ಶೂನ್ಯ ಕೊಡುಗೆ ನೀಡಿದೆ ಎಂದು ಹೇಳಿದರು.
ಸಮಾವೇಶದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚವ್ಹಾಣ, ಬಿ. ಶ್ರೀರಾಮಲು, ಭೈರತಿ ಬಸವರಾಜ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸೇರಿದಂತೆ ಶಾಸಕರು, ಪ್ರಮುಖರು ಪಾಲ್ಗೊಂಡಿದ್ದರು.
CM Bommai at Bidar meeting, slams rahul and Siddaramaiah.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm