ಬ್ರೇಕಿಂಗ್ ನ್ಯೂಸ್
20-10-22 01:24 pm Bangalore Correspondent ಕರ್ನಾಟಕ
ಬೆಂಗಳೂರು, ಅ.20: ಕಾರು, ಎಸ್ ಯುವಿ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಇನ್ಮುಂದೆ ಸೀಟ್ ಬೆಲ್ಟ್ ಹಾಕ್ಕೊಳ್ಳಲೇಬೇಕು. ಕಾರಿನ ಹಿಂಬದಿ ಡೋರ್ ಸೈಡಿಗೆ ಕುಳಿತುಕೊಳ್ಳುವ ಪ್ರಯಾಣಿಕರು ಕಡ್ಡಾಯ ಸೀಟ್ ಬೆಲ್ಟ್ ಧರಿಸಬೇಕು ಎಂದು ಕರ್ನಾಟಕ ಪೊಲೀಸ್ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ತಪ್ಪಿದಲ್ಲಿ ಒಂದು ಸಾವಿರ ರೂಪಾಯಿ ದಂಡ ಕೀಳುವ ಬಗ್ಗೆ ಮೋಟಾರು ವಾಹನ ಕಾಯ್ದೆಯಡಿ ಆದೇಶ ಹೊರಡಿಸಲಾಗಿದೆ.
ಈ ಬಗ್ಗೆ ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಆದೇಶ ಹೊರಡಿಸಿದ್ದು, ಎಲ್ಲ ಜಿಲ್ಲಾ ಕೇಂದ್ರಗಳ ಪೊಲೀಸ್ ವರಿಷ್ಠರು, ನಗರ ಕಮಿಷನರುಗಳು ಆದೇಶ ಪಾಲನೆ ಮಾಡುವಂತೆ ಸೂಚನೆ ನೀಡಿದ್ದಾರೆ. ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ಭೂಸಾರಿಗೆ ಸಚಿವಾಲಯದ ಮಾರ್ಗದರ್ಶಿ ಉಲ್ಲೇಖಿಸಿ ಸೆ.19ರಂದು ಈ ಬಗ್ಗೆ ಆದೇಶ ಹೊರಡಿಸಲಾಗಿದೆ.
ಕಳೆದ ಸೆ.4ರಂದು ಟಾಟಾ ಸನ್ಸ್ ಕಂಪೆನಿಯ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಕರಣದ ಬಳಿಕ ಕಾರಿನಲ್ಲಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯಗೊಳಿಸುವ ಪ್ರಸ್ತಾಪ ಬಂದಿತ್ತು. ಈ ಬಗ್ಗೆ ಕೇಂದ್ರ ಭೂಸಾರಿಗೆ ಸಚಿವಾಲಯದಿಂದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಗೆ ಪತ್ರ ಬರೆದು ಸೀಟ್ ಬೆಲ್ಟ್ ಕಡ್ಡಾಯಗೊಳಿಸುವ ಬಗ್ಗೆ ಸೂಚನೆ ನೀಡಲಾಗಿತ್ತು. ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯಲ್ಲಿ ಬಿಎಂಡಬ್ಲ್ಯು ಕಾರು ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಮತ್ತು ಜಹಾಂಗೀರ್ ಪಾಂಡೋಲೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದರು. ಮಿಸ್ತ್ರಿ ಮತ್ತು ಪಾಂಡೋಲೆ ಕಾರಿನ ಡೋರ್ ಭಾಗದಲ್ಲಿ ಕುಳಿತಿದ್ದು, ಸೀಟ್ ಬೆಲ್ಟ್ ಹಾಕ್ಕೊಂಡಿರಲಿಲ್ಲ. ಹೀಗಾಗಿ ಕಾರು ಪಲ್ಟಿ ಹೊಡೆದಾಗ ಒಳಭಾಗದಲ್ಲಿಯೇ ಸೀಟಿನಿಂದ ಎದ್ದು ಪಲ್ಟಿ ಹೊಡೆದಿದ್ದರು. ಇದರಿಂದ ಎದೆಗೆ ಪೆಟ್ಟು ಬಿದ್ದು ಸಾವು ಸಂಭವಿಸಿತ್ತು ಎನ್ನಲಾಗಿತ್ತು.
ಕರ್ನಾಟಕದಲ್ಲಿ 2022ರ ಆಗಸ್ಟ್ ವರೆಗಿನ ದಾಖಲೆ ಪ್ರಕಾರ, ಪ್ರತಿದಿನ ರಸ್ತೆ ಅಪಘಾತದಲ್ಲಿ ಸರಾಸರಿ 35 ಮಂದಿ ಸಾವನ್ನಪ್ಪುತ್ತಿದ್ದಾರೆಂಬ ಅಂಕಿ ಅಂಶಗಳಿವೆ. ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ, 2022ರಲ್ಲಿ ಆಗಸ್ಟ್ ವರೆಗೆ 7634 ಮಂದಿ ರಸ್ತೆ ಅಪಘಾತದಲ್ಲಿ ಮಡಿದಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಅತಿ ಹೆಚ್ಚು ಪ್ರಕರಣಗಳು ಸಂಭವಿಸುತ್ತಿರುವುದು ಬೆಳಗಾವಿ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಯಲ್ಲಿ ಅನ್ನುವ ಮಾಹಿತಿಗಳಿವೆ. ಹೀಗಾಗಿ ಕೇಂದ್ರ ಸಾರಿಗೆ ಇಲಾಖೆಯ ಸೂಚನೆಯನ್ನು ರಾಜ್ಯ ಸರಕಾರ ಯಥಾವತ್ ಜಾರಿಗೊಳಿಸಲು ಮುಂದಾಗಿದೆ.
ಕೇಂದ್ರ ಸಾರಿಗೆ ಇಲಾಖೆಯಿಂದ 1988ರ ಮೋಟಾರು ವಾಹನ ಕಾಯ್ದೆಯ 194 ಬಿ ಕಲಂ ಅಡಿ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲು ಸೂಚಿಸಲಾಗಿದೆ. 194ಬಿ ಸೆಕ್ಷನ್ 1ರ ಪ್ರಕಾರ, ಯಾವುದೇ ವ್ಯಕ್ತಿ ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸಿದಲ್ಲಿ ಅಥವಾ ಸೀಟ್ ಬೆಲ್ಟ್ ಧರಿಸಿಲ್ಲದ ಪ್ರಯಾಣಿಕರನ್ನು ಒಯ್ಯುತ್ತಿದ್ದರೆ ಒಂದು ಸಾವಿರ ರೂ. ದಂಡ ವಿಧಿಸಬಹುದು. ದ್ವಿಚಕ್ರ ವಾಹನ ಹೊರತುಪಡಿಸಿ ತ್ರಿಚಕ್ರ ವಾಹನಗಳ ಚಾಲಕರು ಮತ್ತು ಅದರ ಮೊದಲ ಸೀಟಿನಲ್ಲಿ ಇರುವವರು ಸೀಟ್ ಬೆಲ್ಟ್ ಧರಿಸಬೇಕು. ಅಲ್ಲದೆ, ಎಲ್ಲ ಎಮ್ 1 ಮಾದರಿಯ ಎಂಟಕ್ಕಿಂತ ಹೆಚ್ಚು ಸೀಟು ಹೊಂದಿಲ್ಲದ ವಾಹನಗಳಲ್ಲಿ ಕಿಟಕಿ ಭಾಗದಲ್ಲಿ ಎದುರು ಮುಖ ಮಾಡಿ ಕುಳಿತುಕೊಳ್ಳುವ ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸಬೇಕು ಎಂದು ಹೇಳಿದೆ.
In an order, additional director general (road safety) R Hithendra cited a September 19 letter from the Union road transport and highways ministry seeking the strict mandatory use of seat belts on rear seats. The ministry said that seat belts are safety-critical items and essential for ensuring the safety of the occupants of vehicles.The Centre sought strict enforcement of the use of rear seat belts after former Tata Sons chairman Cyrus Mistry was killed in a road accident in Maharashtra’s Palghar district in September. He was in the rear seat of a Mercedes car but was not wearing a seat belt.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm