ಬ್ರೇಕಿಂಗ್ ನ್ಯೂಸ್
11-10-20 01:44 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 11: ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತಾಗಿದೆ ಶಿಕ್ಷಕರ ಸ್ಥಿತಿ. ಕೊರೊನಾದಿಂದ ಬೇರೆಲ್ಲರಿಗೆ ರಜೆ ನೀಡಿದ್ದರೆ ಶಿಕ್ಷಕರಿಗೆ ಯಾಕೆ ಶಿಕ್ಷೆ ಅಂತ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಶಿಕ್ಷಕರ ಪರ ಸರಣಿ ಟ್ವೀಟ್ ಮಾಡುವ ಮೂಲಕ ರಜೆ ನೀಡದ ಸರ್ಕಾರದ ವಿರುದ್ಧ ಎಚ್ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ".
"ಸರ್ಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ" ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಈ ವರ್ಷದ ಅಕ್ಟೋಬರ್ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂದಿದ್ದಾರೆ.
ಕೊರೊನಾ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರ್ಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ? ಎಂದು ಎಚ್ಡಿಕೆ ಪ್ರಶ್ನೆ ಮಾಡಿದ್ದಾರೆ.
ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರ್ಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ ಶಾಪಕ್ಕೆ ಗುರಿಯಾಗುತ್ತಿದೆ. 'ಹರ ಮುನಿದರೂ ಗುರು ಕಾಯ್ವನು' ಎಂಬುದನ್ನು ಸರ್ಕಾರ ಮರೆಯಬಾರದು. ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು" ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದರು.
ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ.
— H D Kumaraswamy (@hd_kumaraswamy) October 11, 2020
1/5
ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ,ಶಾಪಕ್ಕೆ ಗುರಿಯಾಗುತ್ತಿದೆ. 'ಹರ ಮುನಿದರೂ ಗುರು ಕಾಯ್ವನು' ಎಂಬುದನ್ನು ಸರಕಾರ ಮರೆಯಬಾರದು.
— H D Kumaraswamy (@hd_kumaraswamy) October 11, 2020
ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು.
5/5
Former chief minister H D Kumaraswamy on Sunday, October 11 lashed out at the state government for demanding teachers to return to schools amid coronavirus pandemic and not approving them midterm holidays.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm