ಬ್ರೇಕಿಂಗ್ ನ್ಯೂಸ್
23-10-22 10:12 pm HK News Desk ಕರ್ನಾಟಕ
ರಾಯಚೂರು, ಅ.23 : ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಕೊನೆಗೊಂಡು ತೆಲಂಗಾಣ ಪ್ರವೇಶ ಮಾಡುವ ಸಂದರ್ಭದಲ್ಲಿ ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆಗೆ ಕಾರ್ನರ್ ಮೀಟಿಂಗ್ ನಡೆಸಿದ್ದರು. ಈ ಸಭೆಯಲ್ಲಿ ರಾಹುಲ್ ಆಪ್ತೆ ಎನ್ನಲಾಗುವ ನಟಿ ರಮ್ಯಾಗೆ ಮುಜುಗರದ ಪ್ರಸಂಗ ನಡೆದಿದೆ. ರಮ್ಯಾಗೆ ವೇದಿಕೆಗೆ ಪ್ರವೇಶಿಸಲು ನಿರಾಕರಿಸಿದ್ದಕ್ಕೆ ಆಕೆ ತೀವ್ರ ಬೇಸರಗೊಂಡು ವಾಪಸ್ ಹೋಗಿದ್ದಾರೆ ಎನ್ನುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ರಾಯಚೂರು ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಿನ್ನೆ ಸಂಜೆ ಮೀಟಿಂಗ್ ನಡೆದಿದ್ದು ಕಾರ್ಯಕ್ರಮದಲ್ಲಿ ಮುಜುಗರದ ಪ್ರಸಂಗ ಉಂಟಾಗಿದೆ. ಸಂಜೆ ವೇಳೆಗೆ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದ ರಮ್ಯಾ, ಬಳಿಕ ರಾಹುಲ್ ಜೊತೆಗಿನ ಕಾರ್ನರ್ ಮೀಟಿಂಗ್ ಸ್ಥಳಕ್ಕೂ ಆಗಮಿಸಿದ್ದರು.
ಈ ವೇಳೆ ವೇದಿಕೆ ಏರಿ ಕೂರಲು ಅವರಿಗೆ ಅವಕಾಶ ನಿರಾಕರಿಸಲಾಗಿತ್ತು. ಅತಿಥಿಗಳ ಪಟ್ಟಿಯಲ್ಲಿ ರಮ್ಯಾ ಹೆಸರು ಇರದ ಕಾರಣ ಭದ್ರತಾ ಸಿಬ್ಬಂದಿ ಈ ಕ್ರಮ ಕೈಗೊಂಡಿದ್ದರು. ಇದರಿಂದ ಸಿಟ್ಟಾದ ರಮ್ಯಾ, ಎಂಟ್ರಿ ಕೊಡದ ಭದ್ರತಾ ಸಿಬ್ಬಂದಿ ಹಾಗೂ ರಾಯಚೂರಿನ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಎಷ್ಟೇ ಮನವಿ ಮಾಡಿಕೊಂಡರೂ ಭದ್ರತಾ ಸಿಬ್ಬಂದಿ ಅವಕಾಶ ನೀಡದ್ದರಿಂದ ಆಕ್ರೋಶಗೊಂಡ ರಮ್ಯಾ, ಕೆಲಹೊತ್ತು ಅಲ್ಲಿಯೇ ವೇದಿಕೆ ಬಳಿ ವಾಗ್ವಾದ ನಡೆಸಿ ನಂತರ ಕೋಪಗೊಂಡು ಅಲ್ಲಿಂದ ವಾಪಸ್ ಹೋದರು. ಈ ಕುರಿತ ವಿಡಿಯೋ ತುಣುಕೊಂದು ಹರಿದಾಡುತ್ತಿದ್ದು ರಮ್ಯಾ - ರಾಹುಲ್ ನಡುವಿನ ಸಂಬಂಧ ಹಳಸಿರುವುದಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
Actor Politician Ramya given no entry on stage in Raichur for Rahul Gandhi meeting, goes out
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm