ಬ್ರೇಕಿಂಗ್ ನ್ಯೂಸ್
27-10-22 10:27 pm HK News Desk ಕರ್ನಾಟಕ
ಮಂಡ್ಯ, ಅ.27 : ಮಳವಳ್ಳಿಯ ಹತ್ತು ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಕಾಂತರಾಜು ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ 638 ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಪ್ರಕರಣದ ವಿಚಾರಣೆಯನ್ನು ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ನವೀನ್ಕುಮಾರ್ ನೇತೃತ್ವದ ತಂಡಕ್ಕೆ ಒಪ್ಪಿಸಲಾಗಿತ್ತು. ತುರ್ತಾಗಿ ವಿಚಾರಣೆ ನಡೆಸಿದ ಪೊಲೀಸರು ಕೇವಲ 15 ದಿನಗಳಲ್ಲೇ ಆರೋಪಿ ಕಾಂತರಾಜು ವಿರುದ್ಧ ನ್ಯಾಯಾಲಯಕ್ಕೆ 638 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ. ಕಳೆದ ಅಕ್ಟೋಬರ್ 11ರಂದು ಬೆಳಗ್ಗೆ 11 ಗಂಟೆ ಸಮಯದಲ್ಲಿ ಆರೋಪಿ ಕಾಂತರಾಜು ತಾನು ನಡೆಸುತ್ತಿದ್ದ ಟ್ಯೂಷನ್ ಸೆಂಟರಿಗೆ ಬಾಲಕಿಯನ್ನು ಬರುವಂತೆ ಹೇಳಿದ್ದ. ಆನಂತರ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆಯ ಕತ್ತು ಹಿಸುಕಿ ಹತ್ಯೆಗೈದಿದ್ದ. ಬಳಿಕ ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ನೀರಿನ ಸಂಪಿಗೆ ಆಕೆಯ ಶವವನ್ನು ಎಸೆದು ಪರಾರಿಯಾಗಿದ್ದ.
ಈ ನಡುವೆ, ಬಾಲಕಿ ಶವ ಪತ್ತೆಯಾಗಿ ಪೊಲೀಸರು ತನಿಖೆ ಆರಂಭಿಸಿದ್ದರು. ಕಿರಾತಕ ಆರೋಪಿ ಪೊಲೀಸರ ವಿಚಾರಣೆ ವೇಳೆಯೂ ದಿಕ್ಕು ತಪ್ಪಿಸಲು ಯತ್ನಿಸಿದ್ದ. ಆದರೆ ಸೂಕ್ತ ದಾಖಲೆ ಮುಂದಿಟ್ಟು ತನಿಖೆ ನಡೆಸಿದಾಗ, ಆರೋಪಿ ಶಿಕ್ಷಕ ಸಿಕ್ಕಿಬಿದ್ದಿದ್ದ. ಡಿವೈಎಸ್ಪಿ ನವೀನ್ಕುಮಾರ್ ನೇತೃತ್ವದ ವಿಶೇಷ ಪೊಲೀಸರ ತಂಡ ಸಮಗ್ರ ತನಿಖೆ ನಡೆಸಿದ್ದು 15 ದಿನಗಳಲ್ಲೇ ನ್ಯಾಯಾಲಯಕ್ಕೆ ಆರೋಪಿ ವಿರುದ್ಧ 638 ಪುಟಗಳ ದೋಷಾರೋಪಣಾ ಪಟ್ಟಿ ಸಲ್ಲಿಸಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷ ಎನ್. ಯತೀಶ್ ತಿಳಿಸಿದ್ದಾರೆ. ಪೊಲೀಸರ ಕಾರ್ಯವನ್ನು ಶ್ಲಾಘಿಸಿರುವ ಅಪರ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಮಂಡ್ಯ ಪೊಲೀಸ್ ಅಧಿಕಾರಿಗಳ ತಂಡಕ್ಕೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
Mandya student rape case, 638 pages of charge sheet filed by police in 15 days.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am