ರಾಜ್ಯದಲ್ಲಿ ಹಿರಿಯ ಸಾಹಿತಿಗಳು, ಕಲಾವಿದರಿಗೆ ಎರಡು ಸಾವಿರ ರೂ. ಮಾಸಾಶನ ; ಸರ್ಕಾರ ಆದೇಶ

30-10-22 02:02 pm       HK News Desk   ಕರ್ನಾಟಕ

ಕರ್ನಾಟಕದಲ್ಲಿ ಹಿರಿಯ ಸಾಹಿತಿಗಳು ಮತ್ತು ಕಲಾವಿದರಿಗೆ ಮಾಸಾಶನ ಮಂಜೂರು ಮಾಡಲಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಬಂಪರ್ ಆಫರ್ ಕೊಟ್ಟಿದೆ.


ಬೆಂಗಳೂರು, ಅ.30: ಕರ್ನಾಟಕದಲ್ಲಿ ಹಿರಿಯ ಸಾಹಿತಿಗಳು ಮತ್ತು ಕಲಾವಿದರಿಗೆ ಮಾಸಾಶನ ಮಂಜೂರು ಮಾಡಲಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಬಂಪರ್ ಆಫರ್ ಕೊಟ್ಟಿದೆ.

ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಿರಿಯ ಸಾಹಿತಿಗಳು, ಕಲಾವಿದರಿಗೆ ತಲಾ ಎರಡು ಸಾವಿರ ರೂ. ಮಾಸಾಶನ ನೀಡಲು ಮುಂದಾಗಿದ್ದು, ಈ ಕುರಿತು ಆದೇಶ ಹೊರಡಿಸಿದೆ.

ಕಳೆದ ಸೆಪ್ಟಂಬರ್ 1ರಿಂದ ಜಾರಿಗೆ ಬರುವಂತೆ ಮಾಸಾಶನ ನೀಡುವಂತೆ ಸರ್ಕಾರ ತಿಳಿಸಿದೆ. 2018-19, 2019-20 ಮತ್ತು 2020-21ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಈ ಮಾಸಾಶನ ಮಂಜೂರು ಮಾಡಿತ್ತು.

ವಿಶ್ವ ಹಿರಿಯ ನಾಗರಿಕರ ದಿನದಂದು ಒಂದು ತೀರ್ಮಾನವನ್ನು ಮಾಡಿದ್ದೆ. ಎಲ್ಲೆಲ್ಲಿ ಸಾಧ್ಯವಿದೆ ಅಲ್ಲಿ ಹಿರಿಯ ನಾಗರಿಕರ ಸೇವೆಯನ್ನು ಸರ್ಕಾರದ ಸಹಾಯ, ಸಲಹೆಗಳಿಗಾಗಿ ತೆಗೆದುಕೊಳ್ಳುವ ಕೆಲಸವನ್ನು ನಾವು ಮಾಡುತ್ತೇವೆ. ಇದರಿಂದ ಯಾವುದೇ ಯುವಕರಿಗೆ ತೊಂದರೆ ಆಗುವುದಿಲ್ಲ. ಖಾಲಿಯಾದ ಹುದ್ದೆಗಳಿಗೆ ಯುವಕರನ್ನೇ ತುಂಬುತ್ತೇವೆ. ಹಿರಿಯರ ಅನುಭವ ಬುತ್ತಿಯನ್ನು ಬಳಕೆ ಮಾಡಿಕೊಳ್ಳುತ್ತೇವೆ ಎಂದು ಈ ಹಿಂದೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.

Two thousand rupees  pension for senior kannada writers and artists in Karnataka announces karnataka government.