ಬ್ರೇಕಿಂಗ್ ನ್ಯೂಸ್
02-11-22 01:43 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯಲ್ಲಿ ಚೆಕ್ ಮೂಲಕ ಕಿಕ್ ಬ್ಯಾಕ್ ಪಡೆದಿದ್ದಾರೆಂದು ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ ಮುಖಂಡ ಎನ್.ಆರ್ ರಮೇಶ್ ಲೋಕಾಯುಕ್ತಕ್ಕೆ ದಾಖಲೆ ಸಹಿತ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಸಾಲದ ರೂಪದಲ್ಲಿ 1.3 ಕೋಟಿ ರೂ. ಹಣ ಪಡೆದು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಬೆಂಗಳೂರು ಟರ್ಫ್ ಕ್ಲಬ್ ಉಸ್ತುವಾರಿ ಹುದ್ದೆಗೆ 2014 ರಲ್ಲಿ ವಿವೇಕಾನಂದ ಎಂಬವರು ನೇಮಕವಾಗಿದ್ದರು. ಅದಕ್ಕಾಗಿ ವಿವೇಕಾನಂದ ಬಳಿಯಿಂದ 1.3 ಕೋಟಿ ರೂ. ಪಡೆದಿದ್ದಾರೆಂದು ಆರೋಪ ಕೇಳಿಬಂದಿದೆ.

ವಿವೇಕಾನಂದ ಬಳಿ 1.3 ಕೋಟಿ ರೂ.ವನ್ನು ಚೆಕ್ ಮೂಲಕ ಪಡೆದಿದ್ದಾಗಿ ಬಿಜೆಪಿ ಮುಖಂಡ ಎನ್.ಆರ್ ರಮೇಶ್ ದಾಖಲೆ ಬಿಡುಗಡೆ ಮಾಡಿದ್ದಾರೆ. ಮೂರು ವರ್ಷದ ಅವಧಿಗೆ ಉಸ್ತುವಾರಿ ನೇಮಕ ಮಾಡಿ ಸಿದ್ದರಾಮಯ್ಯ ಆದೇಶ ಮಾಡಿದರು. ಇದಕ್ಕಾಗಿ ಕಿಕ್ ಬ್ಯಾಕ್ ಪಡೆದಿದ್ದಾಗಿ ಆರೋಪಿಸಲಾಗಿದೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಮಾಹಿತಿಯಲ್ಲಿ ಸಿದ್ದರಾಮಯ್ಯ, ತಾನು ವಿವೇಕಾನಂದ ಬಳಿಯಿಂದ ಸಾಲ ಪಡೆದಿದ್ದಾಗಿ ಮಾಹಿತಿ ನೀಡಿದ್ದರು.
ಕೇಂದ್ರ ಗೃಹ ಇಲಾಖೆ ನಿಯಮದ ಪ್ರಕಾರ, ಅಧಿಕಾರದಲ್ಲಿದ್ದವರು ಯಾವುದೇ ಹುದ್ದೆ ನೀಡಿ ಉಡುಗೊರೆ, ಚೆಕ್ ಪಡೆಯುವಂತಿಲ್ಲ. ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಾಲಂ 7, 8, 9, 10, 13 ಅಡಿ ದುಡ್ಡು ಪಡೆದಿರೋದು ಶಿಕ್ಷಾರ್ಹ ಅಪರಾಧವಾಗಿದೆ. ಈ ಬಗ್ಗೆ ಎನ್ ಆರ್ ರಮೇಶ್ ಅವರು ದೂರು ನೀಡಿದ್ದು ತನಿಖೆಗೆ ಆಗ್ರಹಿಸಿದ್ದಾರೆ.
He alleged that Siddaramaiah had made L Vivekananda, a hotelier from Mysuru, the steward of Bangalore Turf Club after receiving Rs 1,30,00,000 from him through a cheque. “I am of the opinion that Siddaramaiah received the money from Vivekanand only to make him a Steward of Bangalore Turf Club.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am