ಬ್ರೇಕಿಂಗ್ ನ್ಯೂಸ್
02-11-22 08:34 pm Bangalore Correspondent ಕರ್ನಾಟಕ
ಬೆಂಗಳೂರು, ನ.2 : ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಅರ್ಜಿಗೆ 5 ಸಾವಿರ ರೂ. ಶುಲ್ಕ ನಿಗದಿ ಮಾಡಲಾಗಿದೆ. ಅರ್ಜಿಯ ಜೊತೆಗೆ ಸಾಮಾನ್ಯ ವರ್ಗಕ್ಕೆ ಸೇರಿದವರು 2 ಲಕ್ಷ ರೂ. ಡಿಡಿ ಹಾಗೂ ಕಾಂಗ್ರೆಸ್ ಸದಸ್ಯತ್ವ ವಿವರದ ಲಗತ್ತಿಸಬೇಕು. ಪರಿಶಿಷ್ಟ ವರ್ಗದವರಿಗೆ ಶೇ.50 ವಿನಾಯಿತಿ ನೀಡಲಾಗಿದೆ. ಟಿಕೆಟ್ ಆಕಾಂಕ್ಷಿಗಳು ನ.5 ರಿಂದ 15 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ. ಅರ್ಜಿಯ ಜತೆಗೆ ಸಂಗ್ರಹವಾಗುವ ಹಣವನ್ನು ಪಕ್ಷದ ಕಚೇರಿ, ಕಟ್ಟಡಗಳ ಕಾಮಗಾರಿಗೆ ಬಳಸಲಾಗುತ್ತದೆ ಎಂದು ಡಿಕೆಶಿ ತಿಳಿಸಿದರು.

ರಾಜ್ಯ ವಿಧಾನಸಭೆಗೆ 2023 ರ ಚುನಾವಣೆಯಲ್ಲಿ ಹಾಲಿ ಶಾಸಕರ ಸಮೇತ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ನಾನು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಜಿ ಹಾಕಲೇಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಬೇಷರತ್ತಾಗಿ ಪಕ್ಷ ಸೇರಲು ಬಯಸುವವರು ಅರ್ಜಿ ಹಾಕಬಹುದು. ಅವರಿಗೆ ಮುಕ್ತ ಅವಕಾಶ ನೀಡಲಾಗಿದೆ. ಅರ್ಜಿ ಹಾಕಿದ ನಂತರ ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಯಾರನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನಿಸಲಿದೆ ಎಂದು ವಿವರಿಸಿದರು.
ಅರ್ಜಿ ಹಾಕಲು ನಮ್ಮಲ್ಲಿ ವಯೋಮಿತಿ ಇಲ್ಲ. ನಮ್ಮಲ್ಲಿ ಮಾರ್ಗದರ್ಶಕ ಮಂಡಳಿಯೂ ಇಲ್ಲ. ನಾವು 92 ವರ್ಷದ ಶಾಮನೂರು ಶಿವಶಂಕರಪ್ಪ ಅವರನ್ನು ಇಟ್ಟುಕೊಂಡಿದ್ದೇವೆ. ಅವರು ಬೇರೆಯವರಿಗಿಂತ ಹೆಚ್ಚು ಓಡಾಡುತ್ತಿದ್ದಾರೆ. ಕ್ಷೇತ್ರದ ಎಲ್ಲ ಬೂತ್ಗಳಿಗೂ ಭೇಟಿ ನೀಡುತ್ತಿದ್ದಾರೆ. ನಮ್ಮ ತಂದೆ ತಾಯಿಗಳನ್ನು ನಾವು ಮನೆಯಿಂದ ಆಚೆ ಹಾಕುವುದಿಲ್ಲ ಎಂದರು.
5 thousand fees mandatory for those newcomers contesting from congress says KPCC president DK shivakumar.
19-01-26 03:33 pm
HK News Desk
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm