ಬ್ರೇಕಿಂಗ್ ನ್ಯೂಸ್
11-11-22 09:01 pm Bangalore Correspondent ಕರ್ನಾಟಕ
ಬೆಂಗಳೂರು, ನ.11 : ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರಿಗೆ ಆಹ್ವಾನ ನೀಡದೆ ಇರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿಕಾರಿದ್ದು, ಸರಣಿ ಟ್ವೀಟ್ಗಳನ್ನು ಮಾಡಿದೆ.
ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗ ಹೆಚ್.ಡಿ ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರ ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ನಾಡಪ್ರಭುಗಳ ಪ್ರತಿಮೆ ಸ್ಥಾಪನೆ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ ಯಾಕೆ? ಎಂದು ಪ್ರಶ್ನಿಸಿದೆ. ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ ಎಂದು ಟ್ವೀಟ್ ಮಾಡಿದೆ.

ರಾಜ್ಯ ಬಿಜೆಪಿ ಸರಕಾರ, ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯ ಎಂದು ಕಿಡಿಕಾರಿದೆ. ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ಬಿಜೆಪಿ ನಾಯಕರು ವರ್ತಿಸಿದ್ದಾರೆ ಎಂದು ಜೆಡಿಎಸ್ ಟೀಕಿಸಿದೆ.
The opposition JD(S), which is quite predominant in the Old Mysore region, has lambasted the ruling BJP for not inviting its party supremo H D Deve Gowda, first and only Kannadiga to become Prime Minister, to the unveiling of the statue of Bengaluru founder Kempe Gowda by Prime Minister Narendra Modi and termed it as an insult to all Kannadigas.
19-01-26 05:04 pm
Bangalore Correspondent
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm