ಬ್ರೇಕಿಂಗ್ ನ್ಯೂಸ್
12-11-22 07:03 pm HK News Desk ಕರ್ನಾಟಕ
ಕಲಬುರಗಿ, ನ.12 : ರಾಜ್ಯ ಸರ್ಕಾರದ ವಿರುದ್ಧ ನಿರಂತರ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಕಾಂಗ್ರೆಸ್ ಶಾಸಕ ಹಾಗೂ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಸರ್ಕಾರವೇ ಕೊಲೆ ಮಾಡಲು ಸಂಚು ರೂಪಿಸಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ಕಾರ್ಯಕರ್ತನೊಬ್ಬನ ಮೂಲಕ ಪ್ರಿಯಾಂಕ್ ಖರ್ಗೆ ಕೊಲೆ ಮಾಡಿಸಲು ಸರ್ಕಾರ ಯೋಜನೆ ರೂಪಿಸಿದೆ. ಪ್ರಿಯಾಂಕ್ ಖರ್ಗೆ ಅವರನ್ನು ನಾವು ಎಕೆ-47 ಬಂದೂಕಿನಿಂದ ಶೂಟ್ ಮಾಡಿ ಕೊಲ್ಲುತ್ತೇವೆ ಎಂದು ಮಣಿಕಂಠ ರಾಠೋಡ್ ಎಂಬ ಸ್ಥಳೀಯ ಬಿಜೆಪಿ ಮುಖಂಡನ ಹೇಳಿಕೆಯೇ ಇದಕ್ಕೆ ಸಾಕ್ಷಿ ಎಂದು ಶರಣಪ್ರಕಾಶ್ ಪಾಟೀಲ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
![]()
ಈ ಹಿಂದೆ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಪ್ರಿಯಾಂಕ್ ಖರ್ಗೆ ಅವರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ, ಪ್ರಿಯಾಂಕ್ ಖರ್ಗೆ ಅವರಿಗೆ ನೀಡಲಾಗಿದ್ದ ಭದ್ರತೆಯನ್ನು ವಾಪಸ್ ಪಡೆಯಲಾಗಿದೆ. ಪಿಎಸ್ಐ ಅಕ್ರಮವನ್ನು ಬಯಲಿಗೆಳೆದ ಕಾರಣಕ್ಕಾಗಿ ಸರ್ಕಾರ, ಪ್ರಿಯಾಂಕ್ ಖರ್ಗೆ ಅವರ ಭದ್ರತೆಯನ್ನು ಮರಳಿ ಪಡೆದಿದೆ. ಈಗ ನೋಡಿದರೆ ಪ್ರಿಯಾಂಕ್ ಖರ್ಗೆ ಅವರನ್ನು ಗುಂಡು ಹಾರಿಸಿ ಕೊಲೆ ಮಾಡುವುದಾಗಿ ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆ ಎಂದು ಶರಣಪ್ರಕಾಶ್ ಪಾಟೀಲ್ ಕಿಡಿಕಾರಿದರು.
ಬಿಜೆಪಿ ಸರ್ಕಾರ ವ್ಯವಸ್ಥಿತವಾಗಿ ಪ್ರಿಯಾಂಕ್ ಖರ್ಗೆ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದೆ ಎನ್ನುವುದು ಇದರಿಂದ ತಿಳಿದುಬರುತ್ತದೆ. ರಾಜ್ಯ ಸರ್ಕಾರದ ಅವ್ಯವಹಾರ, ಅಕ್ರಮದ ಕುರಿತು ಪ್ರಿಯಾಂಕ್ ಧ್ವನಿ ಎತ್ತುತ್ತಿದ್ದಾರೆ. ಹೀಗಾಗಿ ಸರ್ಕಾರ ಅವರ ಧ್ವನಿ ಅಡಗಿಸಲು ಯೋಜನೆ ಹಾಕಿದೆ ಎಂದು ಶರಣಪ್ರಕಾಶ್ ಪಾಟೀಲ್ ಆರೋಪಿಸಿದರು.
ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡಲು ನಾವು ಸಿದ್ಧವಿರುವುದಾಗಿ, ಕಳೆದ ನ.11ರಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಭಾರೀ ಕೋಲಾಹಲ ಸೃಷ್ಟಿಸಿದ್ದು, ಪ್ರಿಯಾಂಕ್ ಖರ್ಗೆ ಅವರನ್ನು ಕೊಲ್ಲಲು ಸರ್ಕಾರವೇ ಸುಪಾರಿ ಕೊಟ್ಟಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಕಲಬುರಗಿಯ ಕಾಂಗ್ರೆಸ್ ಕಾರ್ಯಕರ್ತರು ಮನಸ್ಸು ಮಾಡಿದರೆ, ಬಿಜೆಪಿ ನಾಯಕರು ರಸ್ತೆ ಮೇಲೆ ಓಡಾಡಲು ಸಾಧ್ಯವಾಗುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಗುಡುಗಿದ್ದರು. ಖರ್ಗೆ ಅವರ ಈ ಹೇಳಿಕೆಗೆ ತಿರುಗೇಟು ನೀಡಿದ್ದ ಬಿಜೆಪಿ ನಾಯಕ ಮಣಿಕಂಠ ರಾಠೋಡ್, ಪ್ರಿಯಾಂಕ್ ಖರ್ಗೆ ಅವರು ಹಾಕುವ ಗೊಡ್ಡು ಬೆದರಿಕೆಗಳಿಗೆ ಹೆದರುವ ಆಸಾಮಿಯಲ್ಲ. ನಿಮಗೆ ಧೈರ್ಯವಿದ್ದರೆ ನನ್ನನ್ನು ತಿರುಗಾಡದಂತೆ ಮಾಡಿ ನೋಡಿ, ಅಂತಹ ಸಂದರ್ಭ ಬಂದರೆ ಒಬ್ಬನೇ ಶೂಟ್ ಮಾಡಿ ಹಾಕಿಯೇನು ಎಂದು ಮರುತ್ತರ ನೀಡಿದ್ದರು.
BJP leader Manikant Rathod has made a controversial statement that we are ready to shoot Chittapur MLA Priyank Kharge. Addressing a press conference at the city's Press House on Friday, he replied to Priyank's statement that BJP leaders will not let them roam if we and our workers make up their minds.Just as military soldiers stand at the borders to save India, we also stand like the military for the sake of the society and the poor. Do you want to shoot with an AK-47? Or shooting from a cannon? You shoot and we sayoku is ready. We are also ready to shoot you, he said.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm