ಬ್ರೇಕಿಂಗ್ ನ್ಯೂಸ್
30-11-22 11:38 am Bangalore Correspondent ಕರ್ನಾಟಕ
ಬೆಂಗಳೂರು, ನ.30: ಸಿಟಿ ಸಿವಿಲ್ ಕೋರ್ಟ್ನಲ್ಲಿ ಅನುಚಿತ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರ ವಿರುದ್ಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಟ್ಟಿರುವ ಹೈಕೋರ್ಟ್, ವಕೀಲರಿಗೆ 2 ಲಕ್ಷ ರೂ. ದಂಡ ವಿಧಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಪ್ರಕರಣ ಸಂಬಂಧಿಸಿ ವಕೀಲ ಕೆ.ಎನ್. ಜಗದೀಶ್ ಬೇಷರತ್ ಕ್ಷಮೆಯಾಚಿಸಿ ಪ್ರಮಾಣಪತ್ರ ಸಲ್ಲಿಸಿದ್ದಲ್ಲದೆ, ನ್ಯಾಯಾಲಯದ ವಿಚಾರದಲ್ಲಿ ಭವಿಷ್ಯದಲ್ಲಿ ಈ ರೀತಿ ನಡೆದುಕೊಳ್ಳುವುದಿಲ್ಲ ಎಂದು ಕ್ಷಮಾಪಣಾ ಪತ್ರ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಅವರ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಟ್ಟಿದೆ.

ಆದರೆ, ನ್ಯಾಯಾಲದಲ್ಲಿ ಅನುಚಿತವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ ಅವರಿಗೆ 2 ಲಕ್ಷ ರೂ. ದಂಡ ವಿಧಿಸಿದ ನ್ಯಾಯಪೀಠ, 1 ಲಕ್ಷ ರೂ. ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ, 50 ಸಾವಿರ ರೂ. ವಕೀಲರ ಸಂಘದ ಗ್ರಂಥಾಲಯ ಅಭಿವೃದ್ಧಿಗೆ ಮತ್ತು 50 ಸಾವಿರ ರೂ. ಹೈಕೋರ್ಟ್ ಗುಮಾಸ್ತರ ಕ್ಷೇಮಾಭಿವೃದ್ಧಿ ಸಂಘಕ್ಕೆ ಮುಂದಿನ 2 ವಾರಗಳಲ್ಲಿ ಪಾವತಿಸಬೇಕು. ಹೈಕೋರ್ಟ್ ಆದೇಶ ಪಾಲಿಸಿದ ಬಗ್ಗೆ ಡಿ.16ರಂದು ನ್ಯಾಯಾಲಯಕ್ಕೆ ವಿವರಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ನಗರದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಆಗಮಿಸಿದ್ದ ವಕೀಲ ಜಗದೀಶ್ ನ್ಯಾಯಾಲಯದಲ್ಲಿ ವಿಚಾರಣೆಗೆ ಅಡ್ಡಿ ಪಡಿಸಿದ್ದರು. ಅಲ್ಲದೆ, ನ್ಯಾಯಾಲಯದಲ್ಲಿ ಟೇಬಲ್ ಮೇಲೆ ಗುದ್ದಿ ಗದ್ದಲವುಂಟು ಮಾಡಿದ್ದರು. ನ್ಯಾಯಾಧೀಶರು ಹಲವು ಬಾರಿ ಸೂಚನೆ ನೀಡಿದರೂ ಗಲಾಟೆ ಮುಂದುವರಿಸಿದ್ದರು.
ಈ ಕುರಿತಂತೆ ಜಗದೀಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಿಟಿ ಸಿವಿಲ್ ನ್ಯಾಯಾಲಯದ ರಿಜಿಸ್ಟ್ರಾರ್ ಅವರು ಹೈಕೋರ್ಟ್ ಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಈ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು. ಇದೀಗ ದಂಡ ವಿಧಿಸಿ ಪ್ರಕರಣವನ್ನು ಕೈಬಿಟ್ಟಿದೆ.
The High Court of Karnataka on Tuesday dropped criminal contempt proceedings against an advocate after he tendered an unconditional apology and agreed to pay a fine of ₹ 2 lakh. The HC had initiated the suo moto (taken on its own) proceedings following a ruckus created by K N Jagadeesh at the City Civil and Sessions Court complex.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm