ಬ್ರೇಕಿಂಗ್ ನ್ಯೂಸ್
09-12-22 07:26 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಪ್ರಧಾನಿ ಮೋದಿ ಪ್ರಭಾವ ಗುಜರಾತಿಗೆ ಸೀಮಿತವಾಗಿದೆ. ಈ ಬಾರಿಯ ಗುಜರಾತ್, ಹಿಮಾಚಲ ಪ್ರದೇಶ ಮತ್ತು ದೆಹಲಿ ಪಾಲಿಕೆ ಚುನಾವಣೆಯಲ್ಲಿ ಇದು ಸಾಬೀತಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.
ದೆಹಲಿ ಪಾಲಿಕೆ, ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣೆಗಳ ಫಲಿತಾಂಶ ದೇಶದ ಜನತೆಗೆ ಮೂರು ಸಂದೇಶಗಳನ್ನು ನೀಡಿದೆ. ಮೊದಲನೆಯದು, ಬಿಜೆಪಿಯನ್ನು ಸೋಲಿಸಲು ಆಮ್ ಆದ್ಮಿ ಪಾರ್ಟಿಗೆ ಸಾಧ್ಯವಿದೆ. ಎರಡನೆಯದು, ಕೇವಲ ಗುಜರಾತ್ನಲ್ಲಿ ಮಾತ್ರ ಪ್ರಧಾನಿ ಮೋದಿಯವರ ಪ್ರಭಾವವಿದೆ. ಮೂರನೆಯದು, ದೆಹಲಿ ಹಾಗೂ ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲಿ ಮೋದಿಯವರು ಬಿಜೆಪಿಯನ್ನು ಗೆಲ್ಲಿಸಲು ಸಾಧ್ಯವಿಲ್ಲ ಎನ್ನುವುದು. ಬಿಜೆಪಿ ಭದ್ರಕೋಟೆ ಎಂದು ಕರೆಯಲ್ಪಡುವ ಗುಜರಾತ್ನಲ್ಲೂ 12 ಶೇಕಡಾ ಮತಗಳನ್ನು ಆಮ್ ಆದ್ಮಿ ಪಡೆದಿದ್ದು ಕಾಂಗ್ರೆಸ್ ಮತ್ತು ಬಿಜೆಪಿಗೆ ಸಡ್ಡು ಹೊಡೆದಿದೆ ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.
2012ರಲ್ಲಿ ʻಭ್ರಷ್ಟಾಚಾರ ವಿರೋಧಿ ಭಾರತʼ ಹೋರಾಟದ ಭಾಗವಾಗಿ ಆಮ್ ಆದ್ಮಿ ಪಾರ್ಟಿ ಹುಟ್ಟಿಕೊಂಡಿತ್ತು. ಬೆರಳೆಣಿಕೆಯ ಹತ್ತು ಕಾರ್ಯಕರ್ತರಿಂದ ಆರಂಭಗೊಂಡಿದ್ದ ಪಕ್ಷವು ಕೇವಲ ಹತ್ತು ವರ್ಷಗಳಲ್ಲಿ ಹೆಮ್ಮರವಾಗಿ ದೇಶಾದ್ಯಂತ ಬೆಳೆದಿದೆ. ದೆಹಲಿ, ಪಂಜಾಬ್ ಬಳಿಕ ದೇಶದೆಲ್ಲೆಡೆ ವಿಸ್ತರಣೆಯಾಗಿದೆ. ಚುನಾವಣಾ ಆಯೋಗದ ಮಾನದಂಡಕ್ಕೆ ಅನುಗುಣವಾಗಿ ನಾಲ್ಕು ರಾಜ್ಯಗಳಲ್ಲಿ ಸಾಧನೆ ತೋರುವ ಮೂಲಕ ರಾಷ್ಟ್ರೀಯ ಪಕ್ಷ ಎಂಬ ಮಾನ್ಯತೆ ಪಡೆಯಲು ಅರ್ಹತೆ ಪಡೆದಿದೆ. ಎಎಪಿಗೆ ದೇಶಾದ್ಯಂತ ಸಿಗುತ್ತಿರುವ ಯಶಸ್ಸಿಗೆ ನಮ್ಮ ನಾಯಕರು ಮತ್ತು ಕಾರ್ಯಕರ್ತರ ಅವಿರತ ಪರಿಶ್ರಮ ಹಾಗೂ ಪಕ್ಷದ ತತ್ವ ಸಿದ್ಧಾಂತಗಳು ಕಾರಣ ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.
ಎಎಪಿ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಮಾತನಾಡಿ, ಕರ್ನಾಟಕದ ರಾಜಕೀಯದಲ್ಲಿ ಪರ್ಯಾಯ ಶಕ್ತಿಯಾಗಿ ಆಮ್ ಆದ್ಮಿ ಪಾರ್ಟಿ ಎದ್ದು ನಿಲ್ಲಲಿದೆ. ರಾಜ್ಯದ ವಿವಿಧ ಭಾಗಗಳಿಗೆ ಪ್ರವಾಸ ಹೋದ ಸಂದರ್ಭದಲ್ಲಿ ಜನಸಾಮಾನ್ಯರ ನಾಡಿಮಿಡಿತ ತಿಳಿಯಲು ನಾನು ಪ್ರಯತ್ನಿಸಿದ್ದು, ಆಗ ಈ ಅಂಶ ಸ್ಪಷ್ಟವಾಗಿ ಗಮನಕ್ಕೆ ಬಂದಿದೆ. ಮುಂಬರುವ ಬಿಬಿಎಂಪಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಪಕ್ಷವು ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯು ಇನ್ನಷ್ಟು ಬಲಗೊಳ್ಳಲಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಹೇಳಿಕೆ ಮೂರ್ಖತನದಿಂದ ಕೂಡಿದೆ
ಆಮ್ ಆದ್ಮಿ ಪಾರ್ಟಿಯ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಹತ್ತಿಕ್ಕಲು ಬಿಜೆಪಿ ಎಎಪಿಯನ್ನು ಬಳಸಿಕೊಳ್ಳುತ್ತಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಮೂರ್ಖತನದ್ದು. ಚುನಾವಣೆ ಎಂಬ ಯುದ್ಧಕ್ಕೂ ಮುನ್ನವೇ ಶಸ್ತ್ರತ್ಯಾಗ ಮಾಡಿ ಸೋಲೊಪ್ಪಿಕೊಳ್ಳುವ ಕಾಂಗ್ರೆಸ್ಗೆ ಎಎಪಿ ಬಗ್ಗೆ ಮಾತಾಡುವ ನೈತಿಕತೆಯಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಅತ್ಯಂತ ಭ್ರಷ್ಟ ಪಕ್ಷಗಳಾಗಿದ್ದು, ಇವೆರಡರ ದುರಾಡಳಿತದಿಂದ ಬೇಸತ್ತಿರುವವರು ಹಾಗೂ ದೇಶದ ರಾಜಕೀಯದಲ್ಲಿ ಬದಲಾವಣೆ ತರಬೇಕೆಂದು ಬಯಸುತ್ತಿರುವವರು ಆಮ್ ಆದ್ಮಿ ಪಾರ್ಟಿಯನ್ನು ಬೆಂಬಲಿಸುತ್ತಿದ್ದಾರೆ. ಎಲ್ಲ ಭ್ರಷ್ಟ ಪಕ್ಷಗಳಿಂದ ಆಮ್ ಆದ್ಮಿ ಪಾರ್ಟಿ ಅಂತರ ಕಾಯ್ದುಕೊಂಡು ಮುನ್ನಡೆಯುತ್ತಿದೆ ಎಂದಿದ್ದಾರೆ.
ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ಪಕ್ಷದ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ, ಹಿರಿಯ ವಕೀಲರಾದ ಕೆ.ದಿವಾಕರ್ ಈ ವೇಳೆ ಉಪಸ್ಥಿತರಿದ್ದರು.
Aam Aadmi Partys Karnataka state president Prithvi Reddy Modi power prooved only in Gujrath.
08-05-25 12:23 pm
HK News Desk
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 04:52 pm
Mangalore Correspondent
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm