ಬ್ರೇಕಿಂಗ್ ನ್ಯೂಸ್
25-12-22 01:33 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.25 : ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಬಗ್ಗೆ ಆರೋಪ ಮಾಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ (ಕೆಎಸ್ಸಿಎ) ಅಧ್ಯಕ್ಷ ಡಿ. ಕೆಂಪಣ್ಣ ಮತ್ತು ಇತರ ಐವರನ್ನು ವೈಯಾಲಿಕಾವಲ್ ಪೊಲೀಸರು ಮಾನನಷ್ಟ ಪ್ರಕರಣದಲ್ಲಿ ಬಂಧಿಸಿದ್ದು ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.
ಕಾಮಗಾರಿ ಟೆಂಡರ್ ನೀಡಲು ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್ ಕೇಳುತ್ತಾರೆ ಎಂಬ ಆರೋಪದ ವಿರುದ್ಧ ತೋಟಗಾರಿಕಾ ಸಚಿವ ಎನ್. ಮುನಿರತ್ನ ಅವರು ಕೆಂಪಣ್ಣ ಹಾಗೂ ಗುತ್ತಿಗೆದಾರರ ಸಂಘದ ಇತರ 18 ಸದಸ್ಯರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮುನಿರತ್ನ ಅವರು 50 ಕೋಟಿ ರೂ. ಪರಿಹಾರ ನೀಡುವಂತೆ ಕೋರಿ ಸೆಪ್ಟೆಂಬರ್ 1ರಂದು ಸಂಘಕ್ಕೆ ನೋಟಿಸ್ ಕಳುಹಿಸಿದ್ದರು.
ನೋಟಿಸ್ಗೆ ಉತ್ತರಿಸಲು ಮತ್ತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಲು ಅಥವಾ ತಮ್ಮ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಸಾಕ್ಷ್ಯವನ್ನು ನೀಡುವಂತೆ ಕೆಂಪಣ್ಣ ಮತ್ತು ಗುತ್ತಿಗೆದಾರರ ಸಂಘಕ್ಕೆ ಅಂತಿಮ ಗಡುವು ನೀಡಿದ್ದರು. ಸಂಘವು ತನ್ನ ಯಾವುದೇ ಷರತ್ತುಗಳನ್ನು ಪೂರೈಸದ ಹಿನ್ನೆಲೆಯಲ್ಲಿ ಸಚಿವರು ವಿಚಾರಣಾ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಮುನಿರತ್ನ ಅವರು ತನ್ನ ವಿರುದ್ಧ ಕೆಎಸ್ಸಿಎ ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ತಡೆಯಾಜ್ಞೆ ಆದೇಶವನ್ನೂ ತಂದಿದ್ದರು.
ವಾರಂಟ್ ನೋಟಿಸ್ ಮಾಡಿದ್ದರೂ ವಿಚಾರಣೆಗೆ ಹಾಜರಾಗದ್ದಕ್ಕೆ 8ನೇ ಎಸಿಎಂಎಂ ನ್ಯಾಯಾಲಯ ಕೆಂಪಣ್ಣ ಹಾಗೂ ಇತರರ ವಿರುದ್ಧ ಡಿ.19ರಂದು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ವೈಯಾಲಿಕಾವಲ್ ಪೊಲೀಸರು ಕೆಂಪಣ್ಣ, ನಟರಾಜ್, ಕೃಷ್ಣಾ ರೆಡ್ಡಿ, ಗುರುಸಿದ್ದಪ್ಪ ಎಂಬವರನ್ನು ಬಂಧಿಸಿದ್ದು ಶನಿವಾರ ರಾತ್ರಿ ಜಡ್ಜ್ ನಿವಾಸದಲ್ಲಿ ಹಾಜರು ಪಡಿಸಿದ್ದಾರೆ. ಪ್ರಕರಣ ಗಂಭೀರ ಸ್ವರೂಪದ್ದಲ್ಲದ ಕಾರಣ ನ್ಯಾಯಾಧೀಶರು ಸ್ಥಳದಲ್ಲೇ ಜಾಮೀನು ನೀಡಿದ್ದಾರೆ. ಅಲ್ಲದೆ, ಸೋಮವಾರ ಕೋರ್ಟಿನಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.
The Karnataka police arrested the contractor association president D Kempanna following a court order on Saturday. The development resulted from a defamation case filed by the Horticulture Minister Munirathna against Kempanna after he alleged that the minister took a bribe.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm