ಬ್ರೇಕಿಂಗ್ ನ್ಯೂಸ್
28-12-22 04:37 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.28: ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿ ಕಳವುಗೈದ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ ಮಾಡಿದೆ.
ಮತದಾನದ ಬಗ್ಗೆ ಜಾಗೃತಿಗಾಗಿ ಬಿಬಿಎಂಪಿ ನೀಡಿದ್ದ ಒಪ್ಪಿಗೆಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಸದ್ಯ ರಾಜ್ಯ ಚುನಾವಣಾ ಆಯೋಗ ಚಿಲುಮೆ ಸಂಸ್ಥೆಯ ವಿರುದ್ದ ತನಿಖೆ ನಡೆಸುತ್ತಿದೆ. ಚಿಲುಮೆ ಸಂಸ್ಥೆ ಕಪ್ಪು ಪಟ್ಟಿಗೆ ಸೇರಿದ್ದರಿಂದ ಮುಂದಿನ ದಿನಗಳಲ್ಲಿ ಯಾವುದೇ ಕಾರ್ಯಕ್ರಮ ಹಾಗೂ ಟೆಂಡರ್ಗಳನ್ನು ಸಂಸ್ಥೆಗೆ ನೀಡದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಸಂಸ್ಥೆಯ ವಿರುದ್ಧ ಹಲಸೂರು ಗೇಟ್ ಮತ್ತು ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಅನುಮತಿ ಸಹಿತ ಗುತ್ತಿಗೆಯನ್ನು ಬಿಬಿಎಂಪಿ ನೀಡಿತ್ತು. 28 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಜೋಡಣೆಯನ್ನು ವಿಎಚ್ಎ(ವೋಟರ್ ಹೆಲ್ಪ್ ಲೈನ್ ಆ್ಯಪ್) ಮೂಲಕ ಮಾಡಲು ಮತ್ತು ಮತದಾರರಲ್ಲಿ ಅರಿವು ಮೂಡಿಸಲು ಅನುಮತಿ ನೀಡಲಾಗಿತ್ತು. ಆದರೆ ಖಾಸಗಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂಬ ಆರೋಪದ ಬಗ್ಗೆ ಪೊಲೀಸ್ ದೂರು ನೀಡಲಾಗಿತ್ತು.
Bangalore Chilume Social Service Society listed to black list for misuse of Voters list.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am