ಬ್ರೇಕಿಂಗ್ ನ್ಯೂಸ್
30-12-22 10:38 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ಹಿರಿಯ ಐಪಿಎಸ್ ಅಧಿಕಾರಿ ಆರ್.ದಿಲೀಪ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ನಿಧನರಾಗಿದ್ದಾರೆ. ಇತ್ತೀಚೆಗೆ ಲಿವರ್ನಲ್ಲಿ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆದು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಎರಡು ದಿನಗಳ ಹಿಂದೆ ದಿಲೀಪ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂದು ಚಿಕಿತ್ಸೆ ಪಡೆಯುವಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು.
ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಐಪಿಎಸ್ ಪೂರೈಸಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ, ಮೈಸೂರು ಹಾಗೂ ಹಲವು ಜಿಲ್ಲೆಗಳಲ್ಲಿ ಎಸ್ಪಿ ಆಗಿದ್ದರು. ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಮೈಸೂರು ಎಸ್ಪಿಯಾಗಿಯೂ ಕರ್ತವ್ಯ ಸಲ್ಲಿಸಿದ್ದರು. ಇವರು ಕರ್ತವ್ಯ ಅಲ್ಲದೆ, ಸಂಗೀತ ಪ್ರೇಮಿಯಾಗಿದ್ದರು. ಹವ್ಯಾಸಿಯಾಗಿ ತಬಲಾ ಮತ್ತು ಮೃದಂಗ ನುಡಿಸುತ್ತಿದ್ದರು. ಹೀಗಾಗಿ ಜನಾನುರಾಗಿಯಾಗಿ ಹೆಸರು ಮಾಡಿದ್ದರು. ಇನ್ನೆರಡು ದಿನದಲ್ಲಿ ಜನವರಿ ಒಂದಕ್ಕೆ ಐಜಿಪಿ ದರ್ಜೆಗೆ ಬಡ್ತಿಗೊಂಡು ಐಜಿಪಿ ಹುದ್ದೆಗೆ ವರ್ಗಾವಣೆ ಆಗುವ ನಿರೀಕ್ಷೆಯಲ್ಲಿದ್ದರು.
IPS officer R Dileep dies of a heart attack in Bengaluru. Currently he was working as a DIG of CID, He was also commissioner of Hubbali Dharwad.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm