ಬ್ರೇಕಿಂಗ್ ನ್ಯೂಸ್
02-01-23 12:09 pm Bangalore Correspondent ಕರ್ನಾಟಕ
ಬೆಂಗಳೂರು, ಜ.2 : ದೇಶದಲ್ಲಿ ಆತಂಕ ಉಂಟು ಮಾಡಿರುವ ಕೊರೋನಾ ರೂಪಾಂತರಿ BF 7 ರಾಜ್ಯದಲ್ಲಿಯೂ ಹರಡುತ್ತಿದ್ದು ಭೀತಿಗೆ ಕಾರಣವಾಗಿದೆ. ಹೀಗಾಗಿ ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.
BF 7 ಭೀತಿ ಹಿನ್ನೆಲೆಯಲ್ಲಿ ಹೈರಿಸ್ಕ್ ದೇಶಗಳಿಂದ ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣ ಮೂಲಕ ಆಗಮಿಸುವ ಪ್ರಯಾಣಿಕರಿಗೆ 7 ದಿನ ಕಡ್ಡಾಯ ಕ್ವಾರಂಟೈನ್ ಘೋಷಿಸಲಾಗಿದೆ.
ಹಾಂಗ್ ಕಾಂಗ್, ಸಿಂಗಾಪುರ, ಚೀನಾ, ಜಪಾನ್, ಥೈಲ್ಯಾಂಡ್, ದಕ್ಷಿಣ ಕೊರಿಯಾ ಸೇರಿದಂತೆ ಹೈರಿಸ್ಕ್ ದೇಶದಿಂದ ಬರುವ ಪ್ರಯಾಣಿಕರು 7 ದಿನ ಕಡ್ಡಾಯ ಕ್ವಾರಂಟೈನ್ ಇರಬೇಕಾಗಿದೆ. ಕ್ವಾರಂಟೈನ್ ಗೆ ಒಳಪಡುವವರು ಹೋಟೆಲ್ ನಲ್ಲಿ ಉಳಿಯುವ ಪ್ರಯಾಣಿಕರು ತಾವೇ ವೆಚ್ಚ ಭರಿಸಬೇಕು. ಮನೆಯಲ್ಲಿ ಕ್ವಾರಂಟೈನ್ ಆಗುವವರ ಮೇಲೆ ಬಿಬಿಎಂಪಿ ನಿಗಾ ವಹಿಸಲಿದೆ. ಟೆಸ್ಟ್ ವೇಳೆ ಕೋವಿಡ್ ದೃಢಪಟ್ಟರೆ ಹೋಟೆಲ್ ಕ್ವಾರಂಟೈನ್ ಕಡ್ಡಾಯ. ಇದಲ್ಲದೆ, ಪ್ರಯಾಣಿಕರನ್ನು ಜಿನೋಮಿಕ್ ಸಿಕ್ವೆನ್ಸ್ ಪರೀಕ್ಷೆಗೆ ಒಳಪಡಿಸಲು ರಾಜ್ಯ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಒಮ್ಮೆ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಕಂಡುಬಂದರೆ, ಸೋಂಕಿತ ಜನರಿಗೆ ರಾಜ್ಯ ಕೋವಿಡ್ ಪ್ರೋಟೋಕಾಲ್ ಪ್ರಕಾರ ಚಿಕಿತ್ಸೆ ನೀಡಬೇಕು ಮತ್ತು ನಿರ್ವಹಿಸಬೇಕು ಎಂದು ರಾಜ್ಯ ಸರಕಾರ ಸುತ್ತೋಲೆಯಲ್ಲಿ ತಿಳಿಸಿದೆ. ಹೆಚ್ಚಿನ ಅಪಾಯದ ದೇಶಗಳಿಂದ ಬರುವ ಪ್ರಯಾಣಿಕರು ಕೋವಿಡ್ -19 ವೈರಸ್ಗೆ ಪಾಸಿಟಿವ್ ಕಂಡುಬಂದರೆ, ಅವರನ್ನು ರಾಜ್ಯದ ಗೊತ್ತುಪಡಿಸಿದ ವೈದ್ಯಕೀಯ ಸೌಲಭ್ಯದಲ್ಲಿ ಪ್ರತ್ಯೇಕಿಸಲಾಗುತ್ತದೆ ಮತ್ತು ಮಾರ್ಗಸೂಚಿಗಳ ಪ್ರಕಾರ ಮಾದರಿಯನ್ನು ಜೀನೋಮ್ ಪರೀಕ್ಷೆಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Following recommendations by the State’s COVID-19 Technical Advisory Committee (TAC), Karnataka has now mandated seven-day home quarantine for asymptomatic international passengers arriving in the State from five high-risk countries — China, Japan, South Korea, Singapore and Thailand, and Hong Kong. With the TAC advising that 10% of all those under home quarantine should be monitored by a call centre daily for COVID-19 symptoms and for further action, the State Health Department issued a circular directing all health officers and ASHA workers to trace, track and quarantine primary and secondary contacts of all COVID-19 positive persons.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm