ಬ್ರೇಕಿಂಗ್ ನ್ಯೂಸ್
02-01-23 03:53 pm Bangalore Correspondent ಕರ್ನಾಟಕ
ಬೆಂಗಳೂರು, ಜ.2 : ಲಂಚ ಕೇಳಿದ್ದಕ್ಕಾಗಿ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪ್ರತಿಯಾಗಿ ಅಬಕಾರಿ ಇನ್ಸ್ಪೆಕ್ಟರ್ ಅಧಿಕಾರಿ ತನ್ನ ಚೇಲಾಗಳಿಂದ ಬಾರ್ ಅಂಡ್ ರೆಸ್ಟೊರೆಂಟಿಗೇ ತಡರಾತ್ರಿ ಬೆಂಕಿ ಹಚ್ಚಿಸಿದ ಘಟನೆ ಸುಂಕದಕಟ್ಟೆಯಲ್ಲಿ ನಡೆದಿದೆ.
ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ ಬೆಂಕಿ ಹಿಡಿಸಿದ ಅಧಿಕಾರಿ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈತನ ವಿರುದ್ದ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಾರ್ ಅಂಡ್ ರೆಸ್ಟೋರೆಂಟ್ ಗೆ ಬೆಂಕಿ ಹಚ್ಚಿದ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ಒಟ್ಟು 45 ಲಕ್ಷಕ್ಕೂ ಹೆಚ್ಚು ಮೌಲ್ಯದ ನಗದು ಮತ್ತು ಮದ್ಯದ ಬಾಟಲಿ ಬೆಂಕಿಗಾಹುತಿಯಾಗಿದೆ. ಮೊದಲು ಘಟನೆ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎಂದು ಹೇಳಲಾಗಿತ್ತು. ಆದರೆ, ಬೆಸ್ಕಾಂ ಅಧಿಕಾರಿಗಳು ಶಾರ್ಟ್ ಸರ್ಕ್ಯೂಟ್ ನಿಂದ ಅಪಘಾತ ಸಂಭವಿಸಿಲ್ಲ ಎಂದು ವರದಿ ನೀಡಿದ್ದಾರೆ.
ಇದರ ಬೆನ್ನಲ್ಲೇ ಬಾರ್ ಮಾಲೀಕ ರಾಮಕೃಷ್ಣ, ಕೆಂಗೇರಿ ವಲಯ ಅಬಕಾರಿ ಇನ್ಸ್ಪೆಕ್ಟರ್ ಮಂಜುನಾಥ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಎಸಿಬಿಗೆ ದೂರು ಕೊಟ್ಟಿದ್ದಕ್ಕಾಗಿ ಅಬಕಾರಿ ಇನ್ಸ್ ಪೆಕ್ಟರ್ ಬಾರ್ ಗೆ ಬೆಂಕಿ ಇಟ್ಟು ಪ್ರತಿಕಾರ ತೀರಿಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಮಾಚೋಹಳ್ಳಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ರಾಮಕೃಷ್ಣ ಎಂಬವರು ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿದ್ದರು. ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ್ 15 ಲಕ್ಷ ಬೇಡಿಕೆ ಇಟ್ಟಿದ್ದರು. ಅದಕ್ಕೆ, ಬಾರ್ ಮಾಲಿಕ ರಾಮಕೃಷ್ಣ ಬಂಗಾರ ಅಡ ಇಟ್ಟು 10 ಲಕ್ಷ ಹಣ ಕೊಟ್ಟಿದ್ದರು. ಉಳಿದ ಐದು ಲಕ್ಷ ಕೊಡಲೇಬೇಕು ಎಂದು ಒತ್ತಾಯಿಸಿದ್ದರು. ಇದರಿಂದ ಬೇಸತ್ತು ರಾಮಕೃಷ್ಣ ಎಸಿಬಿಗೆ ದೂರು ನೀಡಿದ್ದರು. ಇದೇ ಪ್ರಕರಣದಲ್ಲಿ ಎಸಿಬಿ ದಾಳಿಗೆ ಒಳಗಾಗಿ ಇನ್ಸ್ ಪೆಕ್ಟರ್ ಮಂಜುನಾಥ್ ಬಂಧನಕ್ಕೊಳಗಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ರಾಮಕೃಷ್ಣ ಅವರ ಮಾಲೀಕತ್ವದ ಬಾರ್ ಗೆ ಬೆಂಕಿ ಹಾಕಿಸಿದ ಗಂಭೀರ ಆರೋಪ ಕೇಳಿಬಂದಿದೆ.
An excise inspector set fire to a bar and restaurant after complaining to the Lokayukta that he had asked for a bribe. Manjunath, the officer who set the fire, has now filed a complaint against him at the Annapurneshwari Nagar police station, the owner of the bar and restaurant.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm