ಬ್ರೇಕಿಂಗ್ ನ್ಯೂಸ್
03-01-23 02:04 am HK News Desk ಕರ್ನಾಟಕ
ವಿಜಯಪುರ, ಜ. 02: ನಡೆದಾಡುವ ದೇವರು, ಕೋಟ್ಯಾಂತರ ಮಂದಿಯ ಬಾಳಲ್ಲಿ ಬೆಳಕು ತಂದ ಆಧ್ಯಾತ್ಮಿಕ ಪ್ರವಚನಕಾರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ಲಿಂಗೈಕ್ಯರಾಗಿದ್ದಾರೆ. ಅಪಾರ ಭಕ್ತ ಸಮೂಹವನ್ನು ಬಿಟ್ಟು ತೆರಳಿರುವ ಸಿದ್ದೇಶ್ವರ ಶ್ರೀಗಳ ಹುಟ್ಟು ಬಾಲ್ಯದ ವಿವರಗಳು ಇಲ್ಲಿವೆ.
ಸಿದ್ದೇಶ್ವರ ಸ್ವಾಮಿಜಿಯವರು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದರು. ಸಿದ್ದೇಶ್ವರ ಶ್ರೀಗಳ ಬಾಲ್ಯದ ಹೆಸರು ಸಿದ್ದಗೊಂಡಪ್ಪ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ ನಾಲ್ಕನೇ ತರಗತಿವರೆಗೆ ಓದಿದರು. ಬಳಿಕ ಜ್ಞಾನದಾಸೋಹ ನೀಡುವ ವಿಜಯಪುರದ ಜ್ಞಾನಯೋಗಾಶ್ರಮಕ್ಕೆ ಬಂದರು. ಇಲ್ಲಿ ಗದುಗಿನ ಶಿವಾನಂದ ಶ್ರೀಗಳ ಪರಂಪರೆಯಲ್ಲಿ ಬಂದ ಈ ಆಶ್ರಮದ ಗುರುಗಳಾದ ವೇದಾಂತ ಕೇಸರಿ ಮಲ್ಲಿಕಾರ್ಜುನ ಸ್ವಾಮಿಗಳ ನೆರಳಲ್ಲಿ ವಿದ್ಯಾಬ್ಯಾಸ ಮಾಡಿದರು.
ಬೆಳೆಯುವ ಪೈರು ಮೊಳಕೆಯಲ್ಲೇ ಎಂಬಂತೆ ಬಾಲಕ ಸಿದ್ದೇಶ್ವರನ ಚುರುಕುತನ ಗಮನಿಸಿದ ಮಲ್ಲಿಕಾರ್ಜುನ ಸ್ವಾಮಿಗಳು, ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ನಂತರ ಸಿದ್ದೇಶ್ವರ ಶ್ರೀಗಳು ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯಕ್ಕೆ ಹೋದರು. ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಾಸು ಮಾಡಿದರು. ಇವರು ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಪುಣರಾಗಿದ್ದರು. ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಸಿದ್ದೇಶ್ವರ ಶ್ರೀಗಳು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸುತ್ತಿದ್ದರು. ಸಿದ್ದೇಶ್ವರರ ಪ್ರವಚನ ಕೇಳಿದವರು ಅದರಲ್ಲೇ ಅನುರಕ್ತರಾಗಿ ಬಿಡುತ್ತಾರೆ. ಪ್ರವಚನ ಕಾರ್ಯಕ್ರಮ ಎಲ್ಲಿ ಏರ್ಪಡಿಸಿದರೂ ಸಹ ಅಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಅವರ ಪ್ರವಚನಗಳಿಗಿರುವ ಶಕ್ತಿ ಅಂತಹದ್ದು. ಇನ್ನು, ಸಿದ್ದೇಶ್ವರ ಶ್ರೀಗಳು ಎಷ್ಟು ಸರಳತೆಯಿಂದ ಬದುಕುತ್ತಿದ್ದರು ಎಂಬುದಕ್ಕೆ ಅವರು ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿರುವುದೇ ಸಾಕ್ಷಿ. 2018ರಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ ಪದ್ಮಶ್ರೀ ಪುರಸ್ಕಾರವನ್ನು ವಿನಯಪೂರ್ವಕವಾಗಿ ನಿರಾಕರಿಸಿದ್ದರು.
ಈ ಕುರಿತು ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಪತ್ರ ಬರೆದಿದ್ದ ಅವರು "ಭಾರತ ಸರಕಾರ ನೀಡುವ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಗಳ ಮೇಲೆ ನನಗೆ ಅಪಾರ ಗೌರವವಿದೆ. ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಕ್ಕೆ ಧನ್ಯವಾದಗಳು. ನಾನೊಬ್ಬ ಸಾಮಾನ್ಯ, ಆಧ್ಯಾತ್ಮದೆಡೆಗೆ ಒಲವಿರುವ ವ್ಯಕ್ತಿ, ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿ ಪ್ರಶಸ್ತಿಗಳ ಅವಶ್ಯತೆಯು ನನಗಿಲ್ಲ. ಎಲ್ಲ ಗೌರವಾಧರಗಳೊಂದಿಗೆ ಈ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ಅನ್ಯಥಾ ಭಾವಿಸದಿರಿ. ನನಗಿಂತ ಸಾಧನೆ ಮಾಡಿದ ಅನೇಕ ಸಾಧಕರಿದ್ದು ಅವರನ್ನು ಗುರುತಿಸಿ ಪುರಸ್ಕಾರ ನೀಡಿ" ಎಂದು ತಿಳಿಸಿದ್ದರು.
ಇನ್ನು, ಈ ಹಿಂದೆ ಒಲಿದು ಬಂದಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಸೇರಿದಂತೆ ಅನೇಕ ಪ್ರಶಸ್ತಿಯನ್ನು ಶ್ರೀಗಳು ನಿರಾಕರಿಸಿದ್ದಾರೆ. ಕಳೆದ 5 ದಿನಗಳಿಂದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರಿಗಳಿಗೆ ಮಠದಲ್ಲಿ ಚಿಕಿತ್ಸೆ ನಡೆಯುತ್ತಿತ್ತು. ವೈಕುಂಠ ಏಕಾದಶಿಯ ದಿನವೇ ಶ್ರಿಗಳು ಇಹಲೋಕ ತ್ಯಜಿಸಿದ್ದಾರೆ. ಜನವರಿ 3 ರಂದು ಬೆಳಿಗ್ಗೆ 5 ರಿಂದ ಸಂಜೆ 4ರ ವರೆಗೆ ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಜೆ 6.5ಕ್ಕೆ ಸರ್ಕಾರದ ಸಕಲ ಗೌರವಗಳೊಂದಿಗೆ ಶ್ರೀಗಳ ಅಂತಿಮ ಸಂಸ್ಕಾರ ನಡೆಯಲಿದೆ.
Senior Lingayat pontiff and famous Karnataka seer Siddeshwara Swami passed away after prolonged illness on Monday. He breathed his last at his ashram. Siddeshwara Swami was 81-year-old. Jnanayogi Shri Siddheshwar Swami, who is often referred to as the ‘Walking God of North Karnataka’, was born and brought up in Bijjaragi, Vijayapura in Karnataka. He was also fondly called as Buddiji. He was ordained as a math seer by his guru, Vedanta Kesari Sri Mallikarjuna Mahashivayogi.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm