ಬ್ರೇಕಿಂಗ್ ನ್ಯೂಸ್
04-01-23 01:30 pm Bangalore Correspondent ಕರ್ನಾಟಕ
ಬೆಂಗಳೂರು, ಜ.4 : ಪ್ರಧಾನಿ ನರೇಂದ್ರ ಮೋದಿ ಆಡಳಿತದ ಅವಧಿಯಲ್ಲಿ ಭಾರತ ಸಾಲದಲ್ಲಿ ವಿಶ್ವಗುರು ಆಗಿದೆ. ಕಳೆದ 8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ ಮಾಡಿದ್ದೇ ಮೋದಿಯವರ ಸಾಧನೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರದ ಸಾಲದ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, 'ಯುಪಿಎ ಆಡಳಿತದ ಅಂತ್ಯಕ್ಕೆ ಭಾರತದ ಸಾಲ ₹63,583 ಕೋಟಿ ಇತ್ತು. ಆದರೆ ಮೋದಿಯವರು ಕೇವಲ 8 ವರ್ಷದಲ್ಲಿ ಸಾಲದ ಪ್ರಮಾಣ 1.40 ಲಕ್ಷ ಕೋಟಿಗೆ ಏರಿಸಿದ್ದಾರೆ. ಈ ಸಾಲ ಮಾಡಿರುವುದು ಯಾರ ಉದ್ಧಾರಕ್ಕೆ?' ಎಂದು ಪ್ರಶ್ನಿಸಿದ್ದಾರೆ.
ಸಾಲ ಮಾಡಿ ತುಪ್ಪ ತಿನ್ನುವಂತೆ ಮೋದಿ ಆಡಳಿತದಲ್ಲಿ ಗೊತ್ತು ಗುರಿಯಿಲ್ಲದೆ ಸಾಲ ಮಾಡಲಾಗಿದೆ. ಈ ಸಾಲದಲ್ಲಿ ತುಪ್ಪ ತಿನ್ನುತ್ತಿರುವವರು ಯಾರು ಎಂಬುದೇ ಯಕ್ಷ ಪ್ರಶ್ನೆ? ಜಿಡಿಪಿ ಕುಸಿದಿದೆ. ಅಭಿವೃದ್ಧಿ ಶೂನ್ಯವಾಗಿದೆ. ಹಾಗಾದರೆ ಆ ಸಾಲ ಎಲ್ಲಿಗೆ ಖರ್ಚಾಗುತ್ತಿದೆ. ಪಿಎಂ ಕೇರ್ನಂತೆ ಯಾವುದಾದರೂ ಉಂಡೆನಾಮದ ಸ್ಕೀಮ್ಗೆ ಹಣ ಬಳಕೆಯಾಗುತ್ತಿದೆಯೆ? ಎಂದು ಗುಂಡೂರಾವ್ ಟೀಕಿಸಿದ್ದಾರೆ.
'ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವಿದ್ದಾಗ ಜನರಿಗೆ ಗ್ಯಾಸ್ ಸಬ್ಸಿಡಿ, ರಸಗೊಬ್ಬರ ಸಬ್ಸಿಡಿ, ತೈಲಗಳ ಮೇಲೆ ಅತಿಕಡಿಮೆ ತೆರಿಗೆ ಹಾಗೂ ಅಬಕಾರಿ ಸುಂಕ ವಿಧಿಸಲಾಗುತಿತ್ತು. ಅಷ್ಟಾದರೂ ದೇಶದ ಸಾಲ 76 ಲಕ್ಷ ಕೋಟಿ ದಾಟಿರಲಿಲ್ಲ. ಈ ಸರ್ಕಾರದಲ್ಲಿ ಬಹುತೇಕ ಸಬ್ಸಿಡಿಗಳು ರದ್ದಾಗಿವೆ. ತೈಲಗಳ ಮೇಲೆ ವಿಪರೀತ ಎನ್ನುವಷ್ಟು ತೆರಿಗೆ ವಿಧಿಸಲಾಗುತ್ತಿದೆ' ಎಂದು ದಿನೇಶ್ ಕಿಡಿಕಾರಿದ್ದಾರೆ.
ಮೋದಿಯವರು ಕಾಂಗ್ರೆಸ್ ಮಾಡಿದ ಸಾಲ ತೀರಿಸುತ್ತಿದ್ದಾರೆ ಎಂದು ಬಿಜೆಪಿ ಭಕ್ತರು, ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಹರಡುತ್ತಿದ್ದಾರೆ. ವಾಸ್ತವವಾಗಿ 2014 ರವರೆಗೆ ಇದ್ದ ದೇಶದ ಒಟ್ಟು ಸಾಲದ ಮೊತ್ತವೇ 76 ಲಕ್ಷ ಕೋಟಿ. ಆದರೆ ಮೋದಿ 8 ವರ್ಷದಲ್ಲಿ 98 ಲಕ್ಷ ಕೋಟಿ ಹೆಚ್ಚುವರಿ ಸಾಲ ಮಾಡಿದ್ದಾರೆ. ಹೀಗಿರುವಾಗ ಮೋದಿ ಯಾರ ಸಾಲ ತೀರಿಸುತ್ತಿದ್ದಾರೆ?' ಎಂದು ಗುಂಡೂರಾವ್ ಗುಡುಗಿದ್ದಾರೆ.
'ಮೋದಿ ಆಡಳಿತದಲ್ಲಿ ಆರ್ಥಿಕ ಶಿಸ್ತು ಹಳ್ಳ ಹಿಡಿದಿದೆ ಎಂಬುದಕ್ಕೆ ಈ ಸರ್ಕಾರ ಮಾಡಿರುವ ಸಾಲದ ಪ್ರಮಾಣವೇ ಸಾಕ್ಷಿ. ಮೋದಿಯವರು ಮಾಡಿರುವ ಸಾಲದ ಎಫೆಕ್ಟ್ ಹೇಗಿದೆಯೆಂದರೆ, ಅಸಲು ಹೋಗಲಿ, ಬಡ್ಡಿ ಕಟ್ಟಲು ಸಾಧ್ಯವಿಲ್ಲದಷ್ಟು ವಿಪರೀತವಾಗಿದೆ. ಇದು ದೇಶ ದಿವಾಳಿಯಾಗುತ್ತಿರುವ ಪ್ರಾಥಮಿಕ ಲಕ್ಷಣ. ಇನ್ನಾದರೂ ಬಿಜೆಪಿ ಭಕ್ತರು ಮೋದಿ ಭ್ರಮೆಯಿಂದ ಹೊರಬರಲಿ' ಎಂದು ಗುಂಡೂರಾವ್ ವ್ಯಂಗ್ಯವಾಡಿದ್ದಾರೆ
2
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023
ಸಾಲ ಮಾಡಿ ತುಪ್ಪ ತಿನ್ನುವಂತೆ ಮೋದಿ ಆಡಳಿತದಲ್ಲಿ ಗೊತ್ತು ಗುರಿಯಿಲ್ಲದೆ ಸಾಲ ಮಾಡಲಾಗಿದೆ.
ಈ ಸಾಲದಲ್ಲಿ ತುಪ್ಪ ತಿನ್ನುತ್ತಿರುವವರು ಯಾರು ಎಂಬುದೇ ಯಕ್ಷ ಪ್ರಶ್ನೆ?
GDP ಕುಸಿದಿದೆ.
ಅಭಿವೃದ್ಧಿ ಶೂನ್ಯವಾಗಿದೆ.
ಹಾಗಾದರೆ ಆ ಸಾಲ ಎಲ್ಲಿಗೆ ಖರ್ಚಾಗುತ್ತಿದೆ.#PMCares ನಂತೆ ಯಾವುದಾದರೂ ಉಂಡೆನಾಮದ ಸ್ಕೀಮ್ಗೆ ಹಣ ಬಳಕೆಯಾಗುತ್ತಿದೆಯೆ?
India has become the world guru in debt during the tenure of Prime Minister Narendra Modi. Congress MLA Dinesh Gundurao lashed out at Modi's achievement of borrowing ₹98 lakh crore in the last 8 years. In a series of tweets regarding the central government's debt, he said, 'India's debt at the end of the UPA regime was ₹63,583 crore. But Modi has increased the loan amount to ₹1.40 lakh crore in just 8 years. For whose salvation has this loan been made?' Asked that.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm