ಬ್ರೇಕಿಂಗ್ ನ್ಯೂಸ್
07-01-23 12:10 pm Bangalore Correspondent ಕರ್ನಾಟಕ
ಬೆಂಗಳೂರು, ಜ.7: ನ್ಯೂಯಾರ್ಕ್ನಿಂದ ದೆಹಲಿಗೆ ನವೆಂಬರ್ 26ರಂದು ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ 72 ವರ್ಷದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಮುಂಬಯಿ ಮೂಲದ ಶಂಕರ್ ಮಿಶ್ರಾನನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಹಾಗೇ, ಆತನನ್ನು ದೆಹಲಿಗರೆ ಕರೆದೊಯ್ಯುತ್ತಿದ್ದಾರೆ. ದೆಹಲಿ ಪೊಲೀಸರು ಪ್ರಕರಣ ದಾಖಲು ಮಾಡುತ್ತಿದ್ದಂತೆ ಶಂಕರ್ ಮಿಶ್ರಾ ತನ್ನ ಮೊಬೈಲ್ನ್ನೆಲ್ಲ ಸ್ವಿಚ್ ಆಫ್ ಮಾಡಿಕೊಂಡು ಬೆಂಗಳೂರಿಗೆ ಆಗಮಿಸಿದ್ದ. ಇಲ್ಲಿನ ಸಂಜಯ್ನಗರದಲ್ಲಿರುವ ಒಂದು ಗೆಸ್ಟ್ಹೌಸ್ನಲ್ಲಿ ಒಬ್ಬನೇ ತಂಗಿದ್ದ. ಇಂದು ಮಧ್ಯಾಹ್ನದ ಹೊತ್ತಿಗೆ ಶಂಕರ್ ಮಿಶ್ರಾನನ್ನು ಪೊಲೀಸರು ದೆಹಲಿ ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
ನವೆಂಬರ್ 26ರಂದು ಈ ವ್ಯಕ್ತಿ ಕುಡಿದು ಅಮಲೇರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ. ಆದರೆ ಇತ್ತೀಚೆಗೆ ಮಹಿಳೆ ಏರ್ ಇಂಡಿಯಾ ಅಧ್ಯಕ್ಷನಿಗೆ ಪತ್ರದ ಮೂಲಕ ದೂರು ಸಲ್ಲಿಸಿದಾಗಲೇ ವಿಷಯ ಬೆಳಕಿಗೆ ಬಂದಿತ್ತು. 'ಏರ್ ಇಂಡಿಯಾ ಸಿಬ್ಬಂದಿ ಈ ಸಂದರ್ಭವನ್ನು ಸರಿಯಾಗಿ ನಿಭಾಯಿಸಲಿಲ್ಲ. ಸೀಟು ಬದಲಿಸಿಕೊಡಲು ಪೈಲೆಟ್ ಒಪ್ಪಲಿಲ್ಲ. ನಾನು ಆ ವ್ಯಕ್ತಿಯನ್ನು ನೋಡಲು ಇಷ್ಟಪಡುವುದಿಲ್ಲ ಎಂದು ಹೇಳಿದರೂ, ಬಲವಂತವಾಗಿ ನನ್ನೆದುರು ಕರೆತಂದು ನಿಲ್ಲಿಸಿ, ಕ್ಷಮೆ ಕೇಳಿಸಿದರು' ಎಂಬಿತ್ಯಾದಿ ವಿಷಯವನ್ನೂ ಆ 72 ವರ್ಷದ ಮಹಿಳೆ ಹೇಳಿಕೊಂಡಿದ್ದರು.
ಘಟನೆ ನಡೆದ ಏರ್ ಇಂಡಿಯಾ ವಿಮಾನದ ಪೈಲೆಟ್, ಸಹ ಪೈಲೆಟ್ಗೂ ಪೊಲೀಸರು ಸಮನ್ಸ್ ನೀಡಿ, ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಅವರು ಪೊಲೀಸರ ಎದುರು ಬಂದಿರಲಿಲ್ಲ. ಹೀಗಾಗಿ ಇಂದು ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ ಎಂದೂ ಹೇಳಲಾಗಿದೆ.
Delhi Police has arrested from Bengaluru the man who allegedly urinated on a woman co-passenger on an Air India flight, officials said on Saturday. The accused, Shankar Mishra, allegedly urinated on the woman, a senior citizen, in an inebriated condition in the business class of the Air India flight from New York to Delhi on November 26 last year.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm