ಬ್ರೇಕಿಂಗ್ ನ್ಯೂಸ್
07-01-23 01:11 pm Bangalore Correspondent ಕರ್ನಾಟಕ
ಬೆಂಗಳೂರು, ಜ.7 : ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಲಾಟರಿ ಮಾರಾಟವನ್ನು ಸರ್ಕಾರ ಅಧಿಕೃತಗೊಳಿಸಲು ಹೊರಟಿದ್ಯಾ ಅನ್ನುವ ಅನುಮಾನ ಮೂಡಿದೆ. ಈ ಬಗ್ಗೆ ಸರಕಾರದ ಮಟ್ಟದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಖುದ್ದು ರಾಜ್ಯಪಾಲರ ಕಚೇರಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ರವಾನೆಯಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಲಾಟರಿ ವ್ಯವಹಾರ ನೆರೆಯ ಕೇರಳ ರಾಜ್ಯದಲ್ಲಿ ಲಾಭದ ಉದ್ದಿಮೆ. ಹಲವರಿಗೆ ಲಾಟರಿ ಹೊಡೆದಿದೆ ಎನ್ನುವ ಸುದ್ದಿ ಕೇಳಿಯೇ ಗಡಿಭಾಗದ ಜನರು ಅದರತ್ತ ಆಕರ್ಷಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲೂ ಅಧಿಕೃತ ಲಾಟರಿ ಆರಂಭಿಸಬೇಕು ಎಂಬ ಬಗ್ಗೆ ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ ಸರ್ಕಾರವನ್ನು ಒತ್ತಾಯಿಸಿದೆ.
ಹಿಂದೆ 2007ರ ವರೆಗೂ ರಾಜ್ಯದಲ್ಲಿಯೂ ಲಾಟರಿ ವ್ಯವಹಾರ ಅಧಿಕೃತ ಇತ್ತು. ಆನಂತರ ಅದೆಷ್ಟೋ ಕುಟುಂಬಗಳು ಬೀದಿಗೆ ಬಿದ್ದಿವೆ ಎನ್ನುವ ಆರೋಪದಲ್ಲಿ ರಾಜ್ಯ ಸರ್ಕಾರವೇ ಲಾಟರಿಯನ್ನು ನಿಷೇಧಿಸಿತ್ತು. ಇದೀಗ ಲಾಟರಿ ಪುನರಾರಂಭಿಸಲು ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ. ಈ ಬಗ್ಗೆ ರಾಜ್ಯಪಾಲರ ಕಚೇರಿಯಿಂದ ಅಭಿಪ್ರಾಯ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ರವಾನೆಯಾಗಿದೆ. ಹೀಗಾಗಿ ಮತ್ತೆ ಅಧಿಕೃತ ಲಾಟರಿ ಆರಂಭಗೊಳ್ಳುತ್ತಾ ಅದಕ್ಕೆ ಅವಕಾಶ ನೀಡುತ್ತಾ ಅನ್ನುವ ಚರ್ಚೆ ರಾಜ್ಯದಲ್ಲಿ ಆರಂಭಗೊಂಡಿದೆ. ರಾಜ್ಯದಲ್ಲಿ 2007ಕ್ಕಿಂತ ಮುಂಚೆ, ಸರ್ಕಾರವೇ 7 ಲಾಟರಿಗಳನ್ನು ನಡೆಸ್ತಿತ್ತು. ವಾರ್ಷಿಕ ನೂರು ಕೋಟಿ ಆದಾಯ ಸರ್ಕಾರಕ್ಕೆ ಬರ್ತಿತ್ತು. ಈ ಮೂಲಕ ಲಾಟರಿ ಮಾರಾಟ ಮಾಡುವ ಏಜೆಂಟ್ಗಳಿಗೂ ಪರ್ಯಾಯ ಉದ್ಯೋಗ ಸಿಗುತ್ತಿತ್ತು. ಸರ್ಕಾರಕ್ಕೆ ಆದಾಯ ಮತ್ತು ನೂರಾರು ಮಂದಿಗೆ ಉದ್ಯೋಗದ ಬಗ್ಗೆ ನೋಡಿದರೆ ರಾಜ್ಯ ಸರಕಾರ ಲಾಟರಿ ಬಗ್ಗೆ ಒಲವು ಹೊಂದುವ ಸಾಧ್ಯತೆಯಿದೆ.
ಆದರೆ, ಕಳೆದ ಬಾರಿ ರಾಜ್ಯ ಸರ್ಕಾರ ಲಾಟರಿ ನಿಷೇಧಿಸಿದ ಬಳಿಕ, ಲಾಟರಿ ಮಾರಾಟ ಸಂಘದವರು 2014ರಲ್ಲಿ ಸುಪ್ರೀಂಕೋರ್ಟ್ನಲ್ಲಿ ಮೊಕದ್ದಮೆ ಹೂಡಿದ್ದರು. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ, ಅದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿವೇಚನೆ ಎಂದು ಹೇಳಿತ್ತು. ಹೀಗಾಗಿ ಲಾಟರಿ ಆರಂಭಿಸುವುದು, ಬಿಡುವುದು ಏನಿದ್ದರೂ ಈಗ ರಾಜ್ಯ ಸರ್ಕಾರದ ಅಂಗಳದಲ್ಲಿದೆ.
ಮಾಹಿತಿ ಪ್ರಕಾರ, ಸಂಘದ ಮನವಿಯನ್ನು ಪುರಸ್ಕರಿಸಿರುವ ರಾಜ್ಯಪಾಲರ ಕಚೇರಿ ಲಾಟರಿ ಮಾರಾಟ ಮರು ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಹಾಗೂ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ನಿರ್ದೇಶನಾಲಯಕ್ಕೂ ಪತ್ರ ಹೋಗಿದೆ ಎನ್ನಲಾಗಿದೆ. ಹಿಂದೆ ಸರ್ಕಾರದ ಅಂಗಸಂಸ್ಥೆ MSIL ಮೂಲಕ ಲಾಟರಿ ನಡೆಸಲಾಗುತಿತ್ತು. ರಾಜ್ಯದಲ್ಲಿ ಸಾಂಪ್ರದಾಯಿಕ ಲಾಟರಿ ವ್ಯವಸ್ಥೆ ಪುನರಾರಂಭಕ್ಕೆ ಸರ್ಕಾರ ಮುಂದಾಗಬೇಕು, ಲಾಟರಿ ವಿಭಾಗಕ್ಕೆ ಪ್ರತ್ಯೇಕ ಮಂತ್ರಿಯನ್ನು ನೇಮಕ ಮಾಡಬೇಕು ಎಂದೂ ಮನವಿಯಲ್ಲಿ ಹೇಳಲಾಗಿದೆ.
Will karnataka get lotteries back, government plans to make lottery legal to increase income.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm