ಬ್ರೇಕಿಂಗ್ ನ್ಯೂಸ್
08-01-23 12:23 pm HK News Desk ಕರ್ನಾಟಕ
ಶಿವಮೊಗ್ಗ, ಜ.8: ಮುಂಜಾನೆ ಸಮಯದಲ್ಲಿ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಉದ್ಯಮಿಯೊಬ್ಬರು ಸಾವಿಗೀಡಾದ ಘಟನೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿ ಸಮೀಪ ನಡೆದಿದೆ.
ಖ್ಯಾತ ಉದ್ಯಮಿ, ಶಿವಮೊಗ್ಗ ಛೇಂಬರ್ ಆಫ್ ಕಾಮರ್ಸ್ ನಿರ್ದೇಶಕರಾಗಿದ್ದ ಭೂಪಾಳಂ ಎಸ್.ಶರತ್ (39) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಶರತ್ ಅವರ ಪುತ್ರ ಸಂಚಿತ್ (12) ಗಂಭೀರ ಗಾಯಗೊಂಡಿದ್ದಾರೆ. ಸಂಚಿತ್ ಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯತ್ ಕಚೇರಿ ಎದುರು ಇರುವ ಭೂಪಾಳಂ ಕುಟುಂಬದವರ ಮನೆಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಆವರಿಸಿದ ಕೂಡಲೇ ಭೂಪಾಳಂ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದಾರೆ. ಈ ವೇಳೆ ಮತ್ತೆ ಮನೆಯೊಳಗೆ ತೆರಳಿದ ಶರತ್, ಹೊಗೆಯ ಮಧ್ಯೆ ಸಿಲುಕಿ ಪ್ರಜ್ಞೆತಪ್ಪಿ ಬಿದ್ದಿದ್ದರು.
ಘಟನೆಯಲ್ಲಿ ಭೂಪಾಳಂ ಶಶಿಧರ್ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಯ ಬೆಂಕಿ ನಂದಿಸುವ ಜೊತೆಗೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ತೀವ್ರ ಅಸ್ವಸ್ಥರಾಗಿ ಬಿದ್ದಿದ್ದ ಶರತ್ ರಕ್ಷಣೆ ಮಾಡಿ, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಉದ್ಯಮಿ ಶರತ್ ಮೃತಪಟ್ಟಿದ್ದಾರೆ.
ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Familiar businessmen Sharath from Shivamogga dies after the house catches fire by short circuit. His son who has suffered injuries has been admitted to the hospital for treatment.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm