ಬ್ರೇಕಿಂಗ್ ನ್ಯೂಸ್
10-01-23 04:09 pm HK News Desk ಕರ್ನಾಟಕ
ಶಿವಮೊಗ್ಗ, ಜ.10: ಸಾಗರ ಪಟ್ಟಣದ ಭಜರಂಗದಳದ ಸಹ ಸಂಚಾಲಕನ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಸಮೀರ್ (ಎ1), ಇಮಿಯಾನ್ ಹಾಗೂ ಮನ್ಸೂರ್ ಎಂಬುವವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಹಲ್ಲೆ ಪ್ರಕರಣದ A1 ಆರೋಪಿ ಸಮೀರ್ ಎಂಬಾತನ ತಂಗಿಯನ್ನು ಸುನೀಲ್ ನಾಲ್ಕೈದು ತಿಂಗಳಿನಿಂದ ಚುಡಾಯಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವುದಾಗಿ ತನಿಖೆ ವೇಳೆ ಆರೋಪಿ ತಿಳಿಸಿದ್ದಾನೆ ಎಂದು ಮಾಹಿತಿ ನೀಡಿದರು.
ತಂಗಿಯನ್ನು ಚುಡಾಯಿಸುತ್ತಿರುವ ಬಗ್ಗೆ ಸುನೀಲ್ ಗೆ ಸಮೀರ್ ಎಚ್ಚರಿಕೆ ನೀಡಿದ್ದ. ಅಲ್ಲದೇ ತಂಗಿಯ ನಂಬರ್ ಕೊಡು ಅಂತ ಸಮೀರ್ ಗೆ ಸುನೀಲ್ ಕೇಳಿದ್ದ. ಹಲವು ಬಾರಿ ಎಚ್ಚರಿಕೆ ನೀಡಿದರೂ ಚುಡಾಯಿಸಿರುವುದು ನಿಲ್ಲಿಸಿರಲಿಲ್ಲ. ಅದರಂತೆಯೇ ಸೋಮವಾರ ಬೈಕ್ ನಲ್ಲಿ ಬರುತ್ತಿದ್ದ ಸಮೀರ್ ನನ್ನು ಸುನೀಲ್ ರೇಗಿಸಿದ್ದ ಹಾಗಾಗಿ ಕುಪಿತಗೊಂಡ ಸಮೀರ್ ತನ್ನ ಬೈಕಿನಲ್ಲಿದ್ದ ಮಚ್ಚು ತೆಗೆದುಕೊಂಡು ಹಲ್ಲೆಗೆ ಯತ್ನಿಸಿರುವುದಾಗಿ ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ.
ಹಾಗೂ ಸಮೀರನು ಕುರಿಗಾಹಿ ಯುವಕನಾಗಿರುವ ಕಾರಣ ಎಂದಿನಂತೆ ಕುರಿಗಳಿಗೆ ಸೊಪ್ಪು ತರಲು ಬೈಕಿನಲ್ಲಿ ಮಚ್ಚನ್ನು ಇಟ್ಟುಕೊಂಡಿದ್ದ.ಆ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ತಿಳಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ನ ಸ್ನೇಹಿತರಾದ ಇಮಿಯಾನ್ ಮತ್ತು ಮನ್ಸೂರ್ ನ್ನು ವಶಕ್ಕೆ ಪಡೆಯಲಾಗಿದ್ದು,ಈ ಪ್ರಕರಣದಲ್ಲಿ ಇವರ ಪಾತ್ರ ಏನೆಂಬುದು ತನಿಖೆ ನಡೆಸುತ್ತಿದ್ದೇವೆ. ಹೆಚ್ಚಿನ ಮಾಹಿತಿ ವಿಚಾರಣೆ ನಂತರ ತಿಳಿಯಲಿದೆ ಎಂದು ತಿಳಿಸಿದರು.
Sagar attack on Bajrang dal activist, three arrested, accused sister ragged reason for attack. Bajrang Dal workers staged a flash protest in front of Sagar town police station on Monday after one of its workers escaped unhurt when a person tried to attack him with a sharp weapon.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm