ಬ್ರೇಕಿಂಗ್ ನ್ಯೂಸ್
22-01-23 12:51 pm HK News Desk ಕರ್ನಾಟಕ
ಮೈಸೂರು, ಜ 22; ಮೈಸೂರು ಜಿಲ್ಲೆಯ ತಿ. ನರಸೀಪುರದಲ್ಲಿ ಚಿರತೆಯ ದಾಳಿಗೆ 11 ವರ್ಷದ ಬಾಲಕ ಬಲಿಯಾಗಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ತಿ. ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಜಯಂತ್ ಎಂಬ ಬಾಲಕ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಶನಿವಾರ ರಾತ್ರಿಯಿಂದ ಜಯಂತ್ ನಾಪತ್ತೆಯಾಗಿದ್ದ, ಪೋಷಕರು ಹುಡುಕಾಟ ನಡೆಸುತ್ತಿದ್ದರು.

ಭಾನುವಾರ ಗ್ರಾಮದ ಸಮೀಪ ಇರುವ ಹೊಲದಲ್ಲಿ ಬಾಲಕನ ಶವ ಪತ್ತೆಯಾಗಿದೆ. ತಾಲೂಕಿನಲ್ಲಿ ಚಿರತೆ ದಾಳಿಗೆ ಇದು ನಾಲ್ಕನೇ ಬಲಿಯಾಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಕೆಲವು ದಿನಗಳ ಹಿಂದೆ ತಾಲೂಕಿನಲ್ಲಿ 60 ವರ್ಷದ ವೃದ್ಧ ಚಿರತೆ ದಾಳಿಯಿಂದಾಗಿ ಮೃತಪಟ್ಟಿದ್ದ. ಇದು ತಾಲೂಕಿನಲ್ಲಿ ಚಿರತೆ ದಾಳಿಗೆ 4ನೇ ಬಲಿಯಾಗಿದೆ. ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಅರಣ್ಯ ಇಲಾಖೆ ಪ್ರಕಟಣೆ;
ಹೊರಳಹಳ್ಳಿ ಗ್ರಾಮದಲ್ಲಿ ಬಾಲಕ ಚಿರತೆ ದಾಳಿಗೆ ಬಲಿಯಾದ ಬಳಿಕ ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಜನರು ಮನೆಯಿಂದ ಅನಗತ್ಯವಾಗಿ ಹೊರ ಬರಬೇಡಿ ಎಂದು ಹೇಳಿದೆ.
ಸಂಜೆ, ರಾತ್ರಿ ಮಕ್ಕಳು, ಮಹಿಳೆಯರು ಒಂಟಿಯಾಗಿ ಸಂಚಾರ ನಡೆಸಬೇಡಿ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಚಿರತೆ ಹಿಡಿಯಲು ಬೋನು ಅಳವಡಿಕೆ ಮಾಡುವ ಸಾಧ್ಯತೆ ಇದೆ.
ಚಿರತೆ ಕಾಟ ತಡೆಯಲು ವಿಫಲರಾದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಿ. ನರಸೀಪುರ-ಚಾಮರಾಜನಗರ ರಸ್ತೆ ತಡೆದು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
A 11-year-old boy who went missing on Saturday evening in Horalahalli village in T.Narsipura taluk of Mysuru, was found dead in what is suspected to be a leopard attack.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am