ಬ್ರೇಕಿಂಗ್ ನ್ಯೂಸ್
20-10-20 01:42 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಡ್ರಗ್ಸ್ ಜಾಲ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ಎನ್ ಡಿಪಿಎಸ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿದ್ದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರಿನ ರಾಜಶೇಖರ್, ವೇದಾಂತ್, ಶಿವಪ್ರಕಾಶ್, ರಮೇಶ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.
ನಾಲ್ವರು ಕೂಡ ಸಂಬಂಧಿಕರಾಗಿದ್ದು ಆಸ್ತಿ ಹಂಚಿಕೆ ಸಂಬಂಧ ಅವರ ನಡುವೆ ಮನಸ್ತಾಪವಿತ್ತು. ಅದೇ ಸಿಟ್ಟಿನಲ್ಲಿ ಆರೋಪಿ ರಾಜಶೇಖರ್ ಎಂಬಾತ, ಶಿವಪ್ರಕಾಶ್, ವೇದಾಂತ್ ಹಾಗೂ ರಮೇಶ್ ಹೆಸರಿನಲ್ಲಿ ಪತ್ರ ಬರೆದಿದ್ದ. ಮೂವರನ್ನು ಜೈಲಿಗೆ ಕಳುಹಿಸುವುದು ಅವನ ಉದ್ದೇಶವಾಗಿತ್ತು. ಆದರೂ ಎಲ್ಲರನ್ನು ವಿಚಾರಣೆಗೆ ಒಳಪಡಿಸಬೇಕಾಗಿದ್ದು ಅದಕ್ಕಾಗಿ ವಶಕ್ಕೆ ಪಡೆದಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಡ್ರಗ್ ಪ್ರಕರಣದಲ್ಲಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ಪ್ರಕರಣದಲ್ಲಿ ಬಂಧಿಸಿರುವ ಎಲ್ಲ ಆರೋಪಿಗಳಿಗೆ ಜಾಮೀನು ನೀಡಬೇಕು. ನಿಮಗೆ ಏನು ಬೇಕಿದ್ದರೂ ಕೇಳಿ ಕೊಡುತ್ತೇವೆ. ಮತ್ತೆ ಜಾಮೀನು ನಿರಾಕರಿಸಿದರೆ, ಕಾರಿನ ಎಂಜಿನ್ಗೆ ಬಾಂಬ್ ಇಟ್ಟು ಸ್ಪೋಟಿಸುತ್ತೇವೆ ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿತ್ತು. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲರಿಗೂ ಇದೇ ರೀತಿ ಪತ್ರ ಕಳುಹಿಸಲಾಗಿದೆ. ಇದು, ಮಹಮ್ಮದ್ ಜೈಷ್ ಸಂಘಟನೆ ಎಚ್ಚರಿಕೆ' ಎಂದು ದಾರಿ ತಪ್ಪಿಸುವ ರೀತಿ ಪತ್ರದಲ್ಲಿ ಬರೆಯಲಾಗಿತ್ತು.
LIVE VIDEO:
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm