ಬ್ರೇಕಿಂಗ್ ನ್ಯೂಸ್
08-02-23 06:22 pm HK News Desk ಕರ್ನಾಟಕ
ಕಾರವಾರ, ಫೆ.8 : ತನ್ನ ಬ್ರಾಹ್ಮಣ ಸಿಎಂ ಹೇಳಿಕೆಯನ್ನು ಸಮರ್ಥಿಸುತ್ತಲೇ ಬಂದಿರುವ ಮಾಜಿ ಸಿಎಂ ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ನಾನು ಯಾವ ಸಮುದಾಯದ ಬಗ್ಗೆ ಮಾತನಾಡಿದ್ದೇನೆ? ಬ್ರಾಹ್ಮಣ ಸಮುದಾಯದ ಬಗ್ಗೆ ಮಾತನಾಡಿಲ್ಲ. ವ್ಯಕ್ತಿಗಳ ಬಗ್ಗೆ ಮಾತ್ರ ಮಾತನಾಡಿದ್ದೆ, ತಪ್ಪು ತಿಳ್ಕೋಬೇಡಿ ಎಂದು ತಿರುಗೇಟು ನೀಡಿದ್ದಾರೆ.
ರಾವಣನನ್ನು ರಾಕ್ಷಸ ಅಂತಾ ಕರೀತೇವೆ... ಆತ ಯಾರಿಗೆ ಹುಟ್ಟಿದ್ದು..? ಬ್ರಾಹ್ಮಣನಿಗೆ ಹುಟ್ಟಿದವ. ಶಿವನಿಗೆ ರುದ್ರಾಭಿಷೇಕ ಮಾಡಬೇಕೆಂದಿರುವುದನ್ನು ಪ್ರಾರಂಭಿಸಿದ್ದೇ ರಾವಣೇಶ್ವರ. ರಾವಣನನ್ನು ರಾಕ್ಷಸ ಎಂದು ಗುರುತಿಸುತ್ತೇವೆ ಹೊರತು ಬ್ರಾಹ್ಮಣ ಎಂದಲ್ಲ. ಹಾಗಂತ, ರಾಮನನ್ನು ರಾಕ್ಷಸ ಅಂತಾ ಕರಿಯೋಕಾಗುತ್ತಾ...?
ಶೃಂಗೇರಿಯ ಚಂದ್ರಮೌಳೀಶ್ವರ ದೇವಸ್ಥಾನ ಧ್ವಂಸ ಮಾಡಿದ ಡಿಎನ್ಎಗಳ ಬಗ್ಗೆ ಮಾತನಾಡಿದ್ದು. ವಿದ್ಯಾರಣ್ಯರು ಕಟ್ಟಿದ ಈ ದೇವಸ್ಥಾನದ ಮೇಲೆ ದಾಳಿ ಮಾಡಿದವರು ಯಾರು..? ಶಿವಾಜಿ ಹತ್ಯೆ ಮಾಡಿದವರು ಯಾರು..? ಈ ವರ್ಗದ ಜನರನ್ನು ನೀವು ಬ್ರಾಹ್ಮಣರು ಅಂತಾ ಕರೀತೀರಾ..? ಕರಿಯೋಕಾಗುತ್ತಾ..? ಬ್ರಾಹ್ಮಣ ಸಮಾಜದ ಬಗ್ಗೆ ನಾನು ಇಂದಿಗೂ ಗೌರವ ಇಟ್ಟುಕೊಂಡಿದ್ದೇನೆ. ಗೋಕರ್ಣದ ಅರ್ಚರಿಗೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ.
ಅರ್ಚಕರು ಕರೆ ಮಾಡಿದಾಗ ನಾವು ನಿಮ್ಮ ಹಾಗೂ ನಿಮ್ಮ ಕುಟುಂಬದ ಅಭಿಮಾನಿ ಅಂದಿದ್ರು. ಆದರೆ, ನಿಮ್ಮ ಹೇಳಿಕೆಗೆ ಭಾರೀ ಚರ್ಚೆ ನಡೆಯುತ್ತಿದೆಯಲ್ಲಾ ಅಂದಿದ್ರು. ನಾನೆಂದಿಗೂ ಬ್ರಾಹ್ಮಣ ಸಮಾಜದ ಬಗ್ಗೆ ಎಲ್ಲೂ ಟೀಕೆ ಮಾಡಿಲ್ಲ, ಈ ಸಮಾಜದ ಬಗ್ಗೆ ಗೌರವ ಇಟ್ಟಿದ್ದೇನೆ ಎಂದು ಹೇಳಿದ್ದೆ. ಇಲ್ಲಿ ವ್ಯಕ್ತಿಯ ಬಗ್ಗೆ ಚರ್ಚೆಯಾಗಿರೋದು. ಪಾಪ ಜಗದೀಶ್ ಶೆಟ್ಟರು ಯಾವ ಅರ್ಥದಲ್ಲಿ ಕ್ಲಾರಿಫಿಕೇಶನ್ ನೀಡಲು ಹೊರಟ್ರೋ ಗೊತ್ತಿಲ್ಲ.

ನನಗೆ ಜಗದೀಶ್ ಶೆಟ್ಟರ್ ಬಗ್ಗೆ ಗೌರವವಿದೆ, ಆದ್ರೂ ಅವರಲ್ಲೊಂದು ಕೇಳೋಕೆ ಬಯಸ್ತೇನೆ. ಹುಬ್ಬಳ್ಳಿಗೆ ಪ್ರಧಾನಿ ಬಂದಿದ್ದಾಗ ಮಾಜಿ ಮುಖ್ಯಮಂತ್ರಿಯಾಗಿದ್ದ ನಿಮ್ಮನ್ನು ಯಾಕೆ ವೇದಿಕೆಗೆ ಕರೆಸಿಲ್ಲ..? ಈ ರೀತಿಯ ತಾರತಮ್ಯ ಹೋಗಬೇಕೆನ್ನುವುದು ನನ್ನ ಉದ್ದೇಶ ಎಂದು ಎಚ್ಡಿಕೆ ನೇರ ಟಾಂಗ್ ಇಟ್ಟರು.
Comments on Brahmanism and the BJP 'making a Brahmin candidate the CM' by former Chief Minister H.D. Kumaraswamy have stirred a controversy in Karnataka. However, on Tuesday he did a u-turn and clarified that he has no objections to a Brahmin becoming the CM.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm