ಬ್ರೇಕಿಂಗ್ ನ್ಯೂಸ್
17-02-23 12:26 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.17: ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲೆಕ್ಷನ್ ಎಕ್ಸ್ಪ್ರೆಸ್ ಬಜೆಟ್ ಮಂಡಿಸಿದ್ದಾರೆ. ಚುನಾವಣೆ ನಿಮಿತ್ತ ಭರಪೂರ ಯೋಜನೆಗಳ ಮೂಲಕ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ.
ರಾಜ್ಯದ ಮೀನುಗಾರರ ದೋಣಿಗಳಿಗಾಗಿ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು ಸದ್ಯ 1.5 ಲಕ್ಷ ಕಿಲೋ ಲೀಟರ್ ಗಳಿಂದ 2 ಲಕ್ಷ ಕಿಲೋ ಲೀಟರ್ ಗಳವರೆಗೆ ಹೆಚ್ಚಿಸಲಾಗುವುದು. ಇದರಿಂದ ಮೀನುಗಾರರಿಗೆ ರಾಜ್ಯ ಸರ್ಕಾರದಿಂದ 250 ಕೋಟಿ ರೂ. ನೆರವಾಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಮೀನುಗಾರರಿಗೆ ನೀಡುತ್ತಿರುವ ಸೀಮೆಎಣ್ಣೆ ಸಹಾಯಧನ ಪ್ರಕ್ರಿಯೆಯನ್ನು ಸರಳೀಕರಿಸಿ ಪ್ರಸಕ್ತ ಸಾಲಿನಿಂದ ಡಿಬಿಟಿ ಮುಖಾಂತರ ನೇರವಾಗಿ ಮೀನುಗಾರರ ಖಾತೆಗೆ ಜಮೆ ಮಾಡಲಾಗುವುದು ಎಂದರು.
ಮೀನುಗಾರರಿಗೆ ವಸತಿ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು. ಕಳೆದ ವರ್ಷ ವಸತಿ ರಹಿತ ಮೀನುಗಾರರಿಗೆ 5 ಸಾವಿರ ಮನೆಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು 10 ಸಾವಿರ ವಸತಿ ರಹಿತ ಮೀನುಗಾರರಿಗೆ ವಿಸ್ತರಿಸಲಾಗುವುದು. ಮೀನುಗಾರರ ಸುರಕ್ಷತೆಗಾಗಿ 17 ಕೋಟಿ ರೂ. ಅನುದಾದನದಲ್ಲಿ ಇಸ್ರೋ ಅಭಿವೃದ್ಧಿ ಪಡಿಸಿರುವ ಜಿಪಿಎಸ್ ಸಂವಹನ ವ್ಯವಸ್ಥೆಯನ್ನು ಎಲ್ಲಾ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಲ್ಲಿ ಅಳವಡಿಸಲಾಗುವುದು. ಇದರಿಂದ ಆಳ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ ದೋಣಿಗಳನ್ನು ಪತ್ತೆ ಹಚ್ಚಲು ಅನುಕೂಲವಾಗಲಿದೆ ಎಂದು ಹೇಳಿದರು.
ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ. ವರೆಗೆ ಇದ್ದ ಸಾಲವನ್ನು ಈಗ 5 ಲಕ್ಷ ರೂ. ವರೆಗೆ ಹೆಚ್ಚಿಸಲಾಗಿದೆ. ಮೀನುಗಾರಿಕಾ ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆಗೆ ನೆರವು, ಮಹಿಳಾ ಮೀನು ಕಾರ್ಮಿಕರಿಗೆ 500 ರೂ. ಸಹಾಯಧನ ನೀಡಲಾಗುವುದು, ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಆರ್ಥಿಕ ಹಿಂದುಳಿದವರಿಗೆ ವಸತಿ ಯೋಜನೆ, ನೆಲೆ ಯೋಜನೆಯಡಿ 10 ಸಾವಿರ ಸೈಟ್ ವಿತರಣೆ ಮಾಡಲಾಗುವುದು. ಪ್ರತಿ ಗ್ರಾಪಂಗೆ 10 ಲಕ್ಷ ರೂ., ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ., ನೇಕಾರ ಸಮ್ಮಾನ್ ಯೋಜನೆಯಡಿ ಸಹಾಯಧನ ಮೊತ್ತವನ್ನು 3 ಸಾವಿರ ರೂ.ನಿಂದ 5 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಬಜೆಟ್ ನಲ್ಲಿ ಹೇಳಿದ್ದಾರೆ. ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಜಾರಿ ಮಾಡಲಾಗಿದ್ದು, ಇದರ ಮೂಲಕ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ, ಉಚಿತ ಉನ್ನತ ಶಿಕ್ಷಣ ಯೋಜನೆ ಜಾರಿ, 9556 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು ಟ್ರಾಫಿಕ್ ಕಂಟ್ರೋಲ್ ಗೆ 150 ಕೋಟಿ ರೂ. ವೆಚ್ಚದಲ್ಲಿ 75 ಜಂಕ್ಷನ್ ಅಭಿವೃದ್ದಿ, ವೈಟ್ ಟಾಪಿಂಗ್ ಗೆ 1 ಸಾವಿರ ಕೋಟಿ ರೂ. ರೂ. ಮೀಸಲಿಡಲಾಗಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯುವವರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗುವುದು.
ಕಿರುಧಾನ್ಯ ಬೆಳಗಾರರಿಗೆ 10 ಸಾವಿರ ಸಹಾಯಧನ, ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ, 50 ಲಕ್ಷ ಜನರಿಗೆ ಕಾವೇರಿ ನೀರು ಪೂರೈಸಲು ಕ್ರಮ, 110 ಗ್ರಾಮಗಳಿಗೆ ಕುಡಿಯುವ ನೀರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಬಿಸಿಯೂಟ ತಯಾರಕರು, ಆಶಾ ಕಾರ್ಯಕರ್ತೆಯರು, ಗ್ರಂಥಾಲಯ ಪಾಲಕರ ಗೌರವಧನ ಈಗ ಇರುವುದಕ್ಕಿಂತ 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಜೊತೆಗೆ ರಾಜ್ಯದ ಪ್ರಾಥಮಿಕ, ಹಾಗೂ ಪ್ರೌಢಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಶಿಕ್ಷಕರ ಗೌರವಧನವನ್ನು 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
28 ಹೊಸ ಆರೋಗ್ಯ ಕೇಂದ್ರಗಳ ಸ್ಥಾಪನೆ, ಆರೋಗ್ಯ ಸಂಸ್ಥೆಗಳ ಕಾರ್ಯ ನಿರ್ವಹಣೆಗೆ 125 ಕೋಟಿ ರೂ. ಅನುದಾನ, ಬೆಂಗಳೂರಿಲ್ಲಿ ಶಂಕರ್ ನಾಗ್ ಹೆಸರಿನಲ್ಲಿ ಬಸ್ ನಿಲ್ದಾಣ ಸ್ಥಾಪನೆ, ಚಿಕ್ಕಮಗಳೂರಿನಲ್ಲಿ ಹೊಸ ವಿವಿ ಸ್ಥಾಪನೆ, 65 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಒಟ್ನಲ್ಲಿ ಈ ಸಾಲಿನ ಇಲೆಕ್ಷನ್ ಎಕ್ಸ್ಪ್ರೆಸ್ ಎನ್ನುವಂತೆ ಜನರ ಓಲೈಕೆಯ ದೃಷ್ಟಿ ನೆಟ್ಟಿದೆ.
Chief Minister Basavaraj Bommai is presenting the 2023-24 Budget, in which the capital investment estimate for 2023-24 is 30.4% higher than that for the previous year. This is the CM’s second budget and the BJP government’s last in the current term.
02-07-25 11:02 pm
Bangalore Correspondent
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
Bengaluru Rural Name: ಬೆಂಗಳೂರು ಗ್ರಾಮಾಂತರ ಜಿಲ್...
02-07-25 10:05 pm
CM Siddaramaiah: ಐದು ವರ್ಷ ನಾನೇ ಸಿಎಂ ಆಗಿರ್ತೀನಿ...
02-07-25 07:55 pm
Belagavi, ASP Narayan Bharamani, Dharwad: ಅಂದ...
02-07-25 02:21 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
02-07-25 08:05 pm
Mangalore Correspondent
Puttur Bjp, Krishna Rao, Pregnant: ಬಿಜೆಪಿ ಮುಖ...
02-07-25 11:39 am
ಹಾಸನದಲ್ಲಿ ಹೃದಯಾಘಾತ ಹೆಚ್ಚಳ ಬಗ್ಗೆ ವರದಿ ಕೇಳಿದ್ದೇ...
30-06-25 10:59 pm
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
02-07-25 10:15 pm
Bangalore Correspondent
Massive Scam, Mangalore City Corporation, Fak...
02-07-25 12:24 pm
Mulki Abdul Latif Murder Case, Accused Arrest...
01-07-25 04:36 pm
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm