ಬ್ರೇಕಿಂಗ್ ನ್ಯೂಸ್
22-02-23 03:02 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.22 : ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ನಾಗ್ಗೂ ರಾಜಕೀಯಕ್ಕೂ ಹಳೆಯ ನಂಟು ಇದೆ. ಆದರೆ, ಕೆಲವು ವರ್ಷಗಳಿಂದ ರಾಜಕೀಯದಿಂದ ದೂರ ಉಳಿದಿದ್ದರು. ಈಗ ಮತ್ತೆ ರಾಜಕೀಯ ಕಡೆಗೆ ಒಲವು ತೋರಿದ್ದಾರೆ.
ಹಿರಿಯ ನಟ ಅನಂತ್ನಾಗ್ ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಇಂದು ಸಂಜೆ 4.30ಕ್ಕೆ ಸೇರಲಿದ್ದಾರೆ. ಇವರೊಂದಿಗೆ ಸಚಿವರಾದ ಮುನಿರತ್ನ, ಡಾ.ಸುಧಾಕರ್ ಸೇರಿದಂತೆ ಇನ್ನಿತರ ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
ಅನಂತ್ನಾಗ್ ಚುನಾವಣೆ ಹಿನ್ನೆಲೆ ಏನು?
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿಯೇ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚಟುವಟಿಕೆಗಳು ನಡೆಯುತ್ತಿದೆ. ಕೆಲವು ರಾಜಕೀಯ ಮುಖಂಡರು ಪಕ್ಷ ಬದಲಾವಣೆ ಮಾಡುತ್ತಿದ್ದಾರೆ. ಇನ್ನೊಂದು ಕಡೆ ಹೊಸಬರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕೆಲಸನೂ ನಡೆಯುತ್ತಿದೆ. ಇದೇ ವೇಳೆ ಅನಂತ್ನಾಗ್ ಬಿಜೆಪಿ ಸೇರುತ್ತಿರೋದು ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.
ಅನಂತ್ನಾಗ್ ಮುಂದಿನ ನಡೆಯೇನು?
ಅನಂತ್ನಾಗ್ ಈಗ ಬಿಜೆಪಿ ಸೇರ್ಪಡೆಯಾಗುತ್ತಿರೋದು ರಾಜಕೀಯ ವಲಯದಲ್ಲಂತೂ ಚರ್ಚೆಯಾಗುತ್ತಿದೆ. ಈಗಾಗಲೇ ಅನಂತ್ನಾಗ್ ಅವರಿಗೆ 74 ವರ್ಷ. ಹೀಗಾಗಿ ಚುನಾವಣೆ ಸ್ಪರ್ಧೆ ಮಾಡುತ್ತಾರಾ? ಇಲ್ಲ ಪಕ್ಷ ವಹಿಸಿದ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಾರಾ? ಅನ್ನೋ ಲೆಕ್ಕಾಚಾರ ಹಾಕಲಾಗುತ್ತಿದೆ. ಅನಂತ್ನಾಗ್ ಮುಂದಿನ ನಡೆಯೇನು? ಅನ್ನೋದು ಇಂದು ಸಂಜೆ ಗೊತ್ತಾಗಲಿದೆ.
ರಾಜಕೀಯ ಹೊಸದಲ್ಲ ;
ಅನಂತ್ನಾಗ್ ತಮ್ಮ ವೃತ್ತಿ ಬದುಕಿನ ಉತ್ತುಂಗದಲ್ಲಿರುವಾಗಲೇ ರಾಜಕೀಯಕ್ಕೆ ಧುಮುಕಿದ್ದರು. 1983ರ ವಿಧಾನಸಭೆ ಚುನಾವಣೆಯಲ್ಲಿ ಅನಂತ್ ನಾಗ್ ಜನತಾ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದರು. 1994ರಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶ ಮಾಡಿದ್ದರು. ಅಲ್ಲದೆ ಜೆ ಹೆಚ್ ಪಟೇಲ್ ಅವರ ಸಚಿವ ಸಂಪುಟದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದರು.
ಚಾಮರಾಜಪೇಟೆ ಕ್ಷೇತ್ರದಿಂದ ಸೋಲು ;
ಅನಂತ್ನಾಗ್ 2004ರ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಆದರೆ, ಈ ಬಾರಿ ಅನಂತ್ನಾಗ್ ಅವರು ಸೋಲುಂಡಿದ್ದರು. ಆ ಬಳಿಕ ನಿಧಾನವಾಗಿ ರಾಜಕೀಯದಿಂದ ದೂರು ಉಳಿದು, ಮತ್ತೆ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದರು. ಈಗ ಮತ್ತೆ ಬಿಜೆಪಿ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ಆದರೆ, ಮುಂದಿ ಹಾದಿ ಹೇಗಿರುತ್ತೆ ಅನ್ನೋದು ಕುತೂಹಲ.
Veteran Kannada actor and film producer Anant Nag will officially join Bharatiya Janata Party (BJP) on February 22 (Wednesday) in the presence of the party's Karnataka unit President Nalin Kumar Kateel.Nag, 74, has always been vocal about the policies of the Narendra Modi government. He has also raised voice for the Kashmiri Pandit community from South.
03-07-25 10:54 am
HK News Desk
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
Bengaluru Rural Name: ಬೆಂಗಳೂರು ಗ್ರಾಮಾಂತರ ಜಿಲ್...
02-07-25 10:05 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 10:50 am
Mangalore Correspondent
Mangalore Bus Accident, Surathkal, Video: ಸುರ...
02-07-25 08:05 pm
Puttur Bjp, Krishna Rao, Pregnant: ಬಿಜೆಪಿ ಮುಖ...
02-07-25 11:39 am
ಹಾಸನದಲ್ಲಿ ಹೃದಯಾಘಾತ ಹೆಚ್ಚಳ ಬಗ್ಗೆ ವರದಿ ಕೇಳಿದ್ದೇ...
30-06-25 10:59 pm
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
02-07-25 10:15 pm
Bangalore Correspondent
Massive Scam, Mangalore City Corporation, Fak...
02-07-25 12:24 pm
Mulki Abdul Latif Murder Case, Accused Arrest...
01-07-25 04:36 pm
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm