ಬ್ರೇಕಿಂಗ್ ನ್ಯೂಸ್
03-03-23 06:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.3: ತಮ್ಮ ಪುತ್ರ ಹಾಗೂ ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ವಿರುದ್ಧ ನಡೆದ ಲೋಕಾಯುಕ್ತ ದಾಳಿಯ ಕಾರಣಕ್ಕೆ, ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಹಾಗೂ ಮಾರ್ಜಕ ನಿಯಮಿತ (ಕೆಎಸ್ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಲೋಕಾಯುಕ್ತ ದಾಳಿಯಿಂದ ರಾಜ್ಯ ಸರ್ಕಾರಕ್ಕೆ ಎದುರಾಗುವ ಮುಜುಗರವನ್ನು ತಪ್ಪಿಸಲು, ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ತಮ್ಮ ಆಪ್ತರ ಮೂಲಕ ಕೆಎಸ್ಡಿಎಲ್ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು, ಮಾಡಾಳ್ ವಿರೂಪಾಪಕ್ಷಪ್ಪ ಅವರಿಗೆ ಸಿಎಂ ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ತಮ್ಮ ಆಪ್ತರ ಮೂಲಕ ಸಿಎಂ ಕಚೇರಿಗೆ ರಾಜೀನಾಮೆ ಪತ್ರವನ್ನು ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಕೆ ಮಾಡಿದ್ದಾರೆ. ಪತ್ರದಲ್ಲಿ, ''2.03.2023ರಂದು ನಡೆದ ಲೋಕಾಯುಕ್ತ ದಾಳಿಗೂ ನನಗೂ ಸಂಬಂಧವಿಲ್ಲ. ಇದು ನನ್ನ ಕುಟುಂಬದ ವಿರುದ್ಧ ಹೆಣೆಯಲಾಗಿರುವ ಷಡ್ಯಂತ್ರ. ಆದರೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ. ನಾನು ನೈತಿಕ ಹೊಣೆ ಹೊತ್ತು ಕೆಎಸ್ಡಿಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ..'' ಎಂದು ವಿರೂಪಾಕ್ಷಪ್ಪ ಉಲ್ಲೇಖ ಮಾಡಿದ್ದಾರೆ.
ಶ್ರೇಯಸ್ ಕಶ್ಯಪ್ ಅವರು ನೀಡಿದ್ದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಮಾಡಾಳ್ ವಿರೂಪಾಕ್ಷಪ್ಪ ಎ1(ಮೊದಲ ಆರೋಪಿ) ಆಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಎ2(2ನೇ ಆರೋಪಿ), ಕೆಎಸ್ಡಿಎಲ್ ಅಕೌಂಟೆಂಟ್ ಸುರೇಂದ್ರ ಎ3, ಮಾಡಾಳ್ ಪ್ರಶಾಂತ್ ಸಂಬಂಧಿ ಸಿದ್ದೇಶ್ ಎ4, ಅರೋಮಾ ಕಂಪನಿ ಸಿಬ್ಬಂದಿ ಆಲ್ಬರ್ಟ್ ನಿಕೋಲಾ ಎ5, ಅರೋಮಾ ಕಂಪನಿ ಸಿಬ್ಬಂದಿ ಗಂಗಾಧರ ಎ6 ಆಗಿದ್ದಾರೆ.
ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಭೀತಿ ಎದುರಾಗಿದ್ದು, ಜಾಮೀನು ಪಡೆಯಲು ಕಸರತ್ತು ನಡೆಸುತ್ತಿದ್ದಾರೆ.
ಇನ್ನೊಂದೆಡೆ ಶಾಸಕರಿಗಾಗಿ ಲೋಕಾಯುಕ್ತ ಪೊಲೀಸರ ಮೂರು ತಂಡಗಳಿಂದ ಹುಟುಕಾಟ ನಡೆಸಲಾಗುತ್ತಿದೆ. ಚನ್ನೇಶಪುರ ಗ್ರಾಮದಲ್ಲಿರುವ ಶಾಸಕರ ನಿವಾಸ, ಮಾವಿನಹೊಳೆ ಬಳಿ ಇರುವ ಮಾಡಾಳ್ ಕುಟುಂಬದ ಕ್ರಷರ್ ಕಚೇರಿ, ಮಾವಿನಕಟ್ಟೆ ಗ್ರಾಮದ ಬಳಿ ಇರುವ ತೋಟದ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದು, 20 ಮಂದಿಯಿಂದ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಚಿನ್ನ, ಅಪಾರ ಪ್ರಮಾಣದ ಆಸ್ತಿ ಪತ್ರಗಳು ಪತ್ತೆಯಾಗಿವೆ ಎನ್ನಲಾಗಿದೆ.
Facing heat from the anti-corruption wing of Lokayukta, Karnataka BJP MLA Madal Virupakshappa has resigned as the chairman of Karnataka Soaps and Detergents Limited, the manufacturer of Mysore Sandal Soap.
10-05-25 11:30 am
HK News Desk
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm