ಬ್ರೇಕಿಂಗ್ ನ್ಯೂಸ್
06-03-23 04:47 pm HK News Desk ಕರ್ನಾಟಕ
ಕಲಬುರಗಿ, ಮಾ.6: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾದ ಘಟನೆ ಜೇವರ್ಗಿ ಪಟ್ಟಣದ ಹೆಲಿಪ್ಯಾಡ್ನಲ್ಲಿ ನಡೆದಿದೆ.
ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಜೇವರ್ಗಿ ಆಗಮಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಬಂದ ಯಡಿಯೂರಪ್ಪ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ಕಾಪ್ಟರ್ ಲ್ಯಾಂಡ್ ಆಗುವ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿವೆ. ತಕ್ಷಣ ಎಚ್ಚೆತ್ತ ಪೈಲೆಟ್ ಹೆಲಿಕಾಪ್ಟರ್ನ್ನು ಲ್ಯಾಂಡ್ ಮಾಡದೆ ಬೇರೆಡೆ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು.
ಹೆಲಿಪ್ಯಾಡ್ ಸುತ್ತ ಜಮೀನಿನನಲ್ಲಿ ಹಾಕಿದ್ದ ಪ್ಲಾಸ್ಟಿಕ್ ಚೀಲಗಳನ್ನು ತೆಗೆದು ಸ್ವಚ್ಛಗೊಳಿಸಿರಲಿಲ್ಲ. ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ತಿರುಗುವ ಗಾಳಿಗೆ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ. ಕೂಡಲೇ ಎಚ್ಚತ್ತ ಪೈಲಟ್ ಹೆಲಿಕಾಪ್ಟರನ್ನು ಟೇಕ್ ಆಫ್ ಮಾಡಿದ್ದಾರೆ. ನಂತರ ಒಂದೆರಡು ಸುತ್ತು ಹೆಲಿಕಾಪ್ಟರ್ನ್ನು ಆಕಾಶದಲ್ಲಿ ಹಾರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದ್ದಾರೆ. ಬಳಿಕ ಪೈಲಟ್ ಕಾಪ್ಟರ್ ಲ್ಯಾಂಡ್ ಮಾಡಿದ್ದಾರೆ. ಹೆಲಿಕ್ಯಾಪ್ಟರ್ ಮೇಲೆ ಪ್ಲಾಸ್ಟಿಕ್ ಚೀಲಗಳು ತೂರಿ ಬಂದಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಕಕ್ಕಾಬಿಕ್ಕಿಯಾಗಿದ್ದಾರೆ.
ಪಿಡಬ್ಲ್ಯುಡಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ ಉಂಟಾಗಿತ್ತು. ತಾತ್ಕಾಲಿಕ ಹೆಲಿಪ್ಯಾಡ್ ಎಂದ ಮೇಲೆ ಅಲ್ಲಿನ ಸ್ವಚ್ಛತೆಗೂ ಆದ್ಯತೆ ನೀಡಬೇಕಿತ್ತು. ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕಾಪ್ಟರ್ ಪೈಲಟ್, ಪ್ಲಾಸ್ಟಿಕ್ ಚೀಲಗಳು ಹಾರುತ್ತಿದ್ದರೆ ಆ ಜಾಗದಲ್ಲಿ ಕಾಪ್ಟರ್ ಇಳಿಸಬಾರದು ಎಂದೇ ನಮಗೆ ಸೂಚನೆಗಳಿವೆ. ಪೈಲಟ್ ಕಲಿಯುವಾಗಲೇ ಈ ನಿಯಮ ಹೇಳುತ್ತಾರೆ. ಇಲ್ಲಿ ಪ್ಲಾಸ್ಟಿಕ್ ಚೀಲ ಹಾರಿ ಪ್ರೊಪೆಲ್ಲರ್ ಮೇಲೆ ಕುಳಿತರೆ ಅಚಾತುರ್ಯ ಆಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.
#WATCH | Kalaburagi | A helicopter, carrying former Karnataka CM and senior leader BS Yediyurappa, faced difficulty in landing after the helipad ground filled with plastic sheets and waste around. pic.twitter.com/BJTAMT1lpr
— ANI (@ANI) March 6, 2023
A helicopter carrying former Karnataka chief minister and senior BJP leader BS Yediyurappa faced difficulty in landing due to plastic sheets and waste on the helipad ground on Monday in Kalaburagi.
20-01-26 12:20 pm
Bangalore Correspondent
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm