ಬ್ರೇಕಿಂಗ್ ನ್ಯೂಸ್
23-10-20 12:28 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 23: ಕೊನೆಗೂ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಂಪುಟ ಸಚಿವರ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದು, ನವೆಂಬರ್ 17ರಿಂದ ಕಾಲೇಜು ಆರಂಭಿಸಲು ನಿರ್ಧಾರಕ್ಕೆ ಬಂದಿದ್ದಾರೆ.
ಈ ಬಗ್ಗೆ ಉನ್ನತ ಶಿಕ್ಷಣ ಸಚಿವರೂ ಮತ್ತು ಡಿಸಿಎಂ ಆಗಿರುವ ಡಾ.ಅಶ್ವತ್ಥ ನಾರಾಯಣ, ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಕೋವಿಡ್ ನಿಯಮ ಮತ್ತು ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜು ನಡೆಸಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಮೊದಲಿಗೆ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಒಟ್ಟು ಪಠ್ಯದಲ್ಲಿ 33 ಶೇಕಡಾದಷ್ಟು ಪಠ್ಯವನ್ನು ಕಡಿತ ಮಾಡಲು ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಪ್ರಥಮ ಮತ್ತು ದ್ವಿತೀಯ ಪಿಯು ವಿಭಾಗದಲ್ಲಿ ವಿಜ್ಞಾನ ವಿಭಾಗದ ಫಿಸಿಕ್ಸ್ , ಕೆಮಿಸ್ಟ್ರಿ ಮತ್ತು ಗಣಿತ ಶಾಸ್ತ್ರ ವಿಷಯದಲ್ಲಿ ಪಠ್ಯ ಕಡಿತ ಮಾಡುವುದು ಬೇಡ ಎಂದು ಪಠ್ಯ ಪುಸ್ತಕ ರಚನಾ ಸಮಿತಿಯ ಸದಸ್ಯರು ಪ್ರಸ್ತಾಪ ಇಟ್ಟಿದ್ದಾರೆ. ಕಾಲೇಜು ಆರಂಭ ವಿಚಾರದಲ್ಲಿ ಯಾವೆಲ್ಲ ಸೂಚನೆ ಪಾಲಿಸಬೇಕು ಮತ್ತು ಕಲಿಕಾ ಪಠ್ಯಗಳ ಬಗ್ಗೆ ಇನ್ನೆರಡು ದಿನದಲ್ಲಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.
ಕಳೆದ ಏಳು ತಿಂಗಳ ಬಳಿಕ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಮಾರ್ಚ್ 22ರಂದು ಲಾಕ್ಡೌನ್ ಘೋಷಣೆಯಾದ ಬಳಿಕ ಶಾಲೆ, ಕಾಲೇಜುಗಳು ಸ್ಥಗಿತಗೊಂಡಿದ್ದವು. ಆನಂತರ ಕೆಲವು ವಿಭಾಗದ ಪರೀಕ್ಷೆಗಳನ್ನೂ ಅರ್ಧಕ್ಕೆ ಕಡಿತಗೊಳಿಸಲಾಗಿತ್ತು. ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳಿಗೆ ಕಳೆದ ತಿಂಗಳಷ್ಟೇ ಅಂತಿಮ ಪರೀಕ್ಷೆಗಳನ್ನು ಪೂರ್ತಿ ಮಾಡಲಾಗಿತ್ತು. ಈಗ ಕಾಲೇಜುಗಳಲ್ಲಿ ಅಡ್ಮಿಶನ್ ಪ್ರಕ್ರಿಯೆ ನಡೆಯುತ್ತಿದ್ದು, ಮೊದಲಿಗೆ ಉನ್ನತ ಶಿಕ್ಷಣ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ನವೆಂಬರ್ ತಿಂಗಳಾಂತ್ಯಕ್ಕೆ ಡಿಸೆಂಬರ್ ನಲ್ಲಿ ಪಿಯು ಮತ್ತು ಪ್ರೌಢಶಾಲೆ ಆರಂಭಗೊಳ್ಳುವ ಸಾಧ್ಯತೆಯಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm