ಬ್ರೇಕಿಂಗ್ ನ್ಯೂಸ್
10-03-23 03:26 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.10: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯನ್ನು ಮಾಡಿದ್ದು ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಮಾಡಿದೆ. ಅಧ್ಯಕ್ಷರಾಗುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಯಡಿಯೂರಪ್ಪ ಕೇವಲ ಸದಸ್ಯ ಸ್ಥಾನಕ್ಕೆ ಸೀಮಿತರಾಗಿದ್ದಾರೆ.
ಇದೇ ವೇಳೆ, ಚುನಾವಣಾ ನಿರ್ವಹಣಾ ಸಮಿತಿ ಘೋಷಿಸಲಾಗಿದ್ದು, ಅಚ್ಚರಿಯೆಂಬಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಂಚಾಲಕಿ ಹುದ್ದೆಗೆ ನೇಮಕ ಮಾಡಲಾಗಿದೆ. ಆಮೂಲಕ ಶೋಭಾ ಕರಂದ್ಲಾಜೆ ರಾಜ್ಯ ರಾಜಕಾರಣಕ್ಕೆ ಮರು ಎಂಟ್ರಿಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿದೆ.



ಪ್ರಚಾರ ಸಮಿತಿಗೆ 25 ಸದಸ್ಯರನ್ನು ನೇಮಕ ಮಾಡಲಾಗಿದೆ. ನಿರ್ವಹಣಾ ಸಮಿತಿಯಲ್ಲಿ 14 ಸದಸ್ಯರು ಇರಲಿದ್ದಾರೆ. ಕೆಲವರನ್ನು ಎರಡೂ ಸಮಿತಿಯಲ್ಲಿ ಸೇರಿಸಲಾಗಿದೆ. ಬಿಎಸ್ವೈ ಅವರ ಆಪ್ತೆಯಾಗಿರುವ ಶೋಭಾ ಅವರನ್ನು ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕಿ ಹುದ್ದೆಗೆ ತರುವ ಮೂಲಕ ಸಂತೈಸುವ ಕೆಲಸ ಮಾಡಿದ್ದಾರೆ. ಮೊನ್ನೆ ಶಿವಮೊಗ್ಗಕ್ಕೆ ಬಂದಿದ್ದ ಪ್ರಧಾನಿ ಮೋದಿ, ಬಿಎಸ್ವೈ ಅವರ ಕೈ ಹಿಡಿದುಕೊಂಡು ಹೋಗಿದ್ದು, ಯಡಿಯೂರಪ್ಪ ಅವರೇ ನಮ್ಮ ನಾಯಕ ಎಂದು ಹೇಳಿದ್ದು ಪ್ರಚಾರ ಸಮಿತಿಗೆ ಯಡಿಯೂರಪ್ಪ ಅವರನ್ನೇ ಅಧ್ಯಕ್ಷರನ್ನಾಗಿಸುತ್ತಾರೆ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿ ಮೂಡಿತ್ತು. ಲಿಂಗಾಯತರನ್ನು ಸಂತೈಸಲು ಸಿಎಂ ಬೊಮ್ಮಾಯಿ ಅವರನ್ನೇ ಅಧ್ಯಕ್ಷರನ್ನಾಗಿಸಿ, ಯಡಿಯೂರಪ್ಪ ಅವರನ್ನು ಜೊತೆಗೆ ಕೂರಿಸಿ ಸರಿದೂಗಿಸುವ ಕೆಲಸ ಮಾಡಲಾಗಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಚುನಾವಣಾ ನಿರ್ವಹಣಾ ಸಮಿತಿಗೆ ಸಂಚಾಲಕಿ ಮಾಡುವ ಮೂಲಕ ಶೋಭಕ್ಕೆ ಪೂರ್ತಿಯಾಗಿ ರಾಜ್ಯ ರಾಜಕಾರಣಕ್ಕೆ ಮರಳುವುದು ಖಚಿತವಾಗಿದೆ. ಕಳೆದ ಬಾರಿ ಸಿಎಂ ಬದಲಾವಣೆಯ ಕೂಗು ಕೇಳಿಬಂದಿದ್ದಾಗ ಶೋಭಾ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಶೋಭಾ ಅವರು ಸಿಎಂ ಆಗಲಿದ್ದಾರೆ ಎಂದೂ ಹೇಳಲಾಗಿತ್ತು. ಸಿಟಿ ರವಿಯ ಸ್ಪೀಡ್ ಹೆಚ್ಚಿದೆ ಅನ್ನುವ ಕಾರಣಕ್ಕೆ ಆರೆಸ್ಸೆಸ್ ಆಯ್ಕೆ ಗೌಡ ಜನಾಂಗದ ನಾಯಕಿ ಶೋಭಾ ಅನ್ನುವುದಿತ್ತು. ಇದೀಗ ಚುನಾವಣೆ ಹೊತ್ತಿಗೆ ಶೋಭಕ್ಕನಿಗೆ ನಿರ್ವಹಣಾ ಸಮಿತಿಯಲ್ಲಿ ಸ್ಥಾನ ನೀಡಿರುವುದು ಮತ್ತೆ ವಿಧಾನಸಭೆಗೆ ಸ್ಪರ್ಧಿಸಲಿದ್ದಾರೆಯೇ ಎಂಬ ಅನುಮಾನ ಮೂಡಿದೆ
While former Karnataka Chief Minister B S Yediyurappa was named in the BJP’s Karnataka election committee on Friday, his long-time confidante and Union Minister Shobha Karandlaje is set to head the party’s election management committee.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am